ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಬೇಕಾಗುವ ದಾಖಲೆ, ಠೇವಣಿ ವಿವರ
ಕರ್ನಾಟಕದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಡಿ ಬರುವ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ರಾಗಿ ಸೇರಿದಂತೆ ವಿವಿಧ ಉತ್ಪನ್ನಗಳನ್ನು ವಿತರಣೆ ಮಾಡಲಾಗುತ್ತದೆ. ಇಲಾಖೆ ಆಗಾಗ ಹಲವು ಜಿಲ್ಲೆಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿಗಳನ್ನು ಕರೆಯುತ್ತದೆ. ಹೊಸ ನ್ಯಾಯಬೆಲೆ ಅಂಗಡಿ ತೆರೆಯುವುದು ಹೇಗೆ?, ಬೇಕಾಗುವ ದಾಖಲೆಗಳು ಏನು? ಇಲ್ಲಿದೆ ಮಾಹಿತಿ.
ಸದ್ಯ ದಾವಣಗೆರೆ ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಅಗತ್ಯ ದಾಖಲೆಗಳ ಜೊತೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ. ಹೊಸ ನ್ಯಾಯಬೆಲೆ ಅಂಗಡಿ ತರೆಯಲು ಬಯಸುವವರು ಕನಿಷ್ಠ 2 ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು. ವಿಕಲಚೇತನರು, ತೃತೀಯ ಲಿಂಗಿಗಳು ಸಹ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೊಸ ನ್ಯಾಯಬೆಲೆ ಅಂಗಡಿ ಯಾವ ಪ್ರದೇಶದಲ್ಲಿ ತೆರೆಯಲು ಅರ್ಜಿ ಕರೆಯಲಾಗುತ್ತದೆಯೋ? ಆ ಪ್ರದೇಶದ ಸುತ್ತಮುತ್ತಲ ಪ್ರದೇಶದ ಜನರಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗುತ್ತದೆ, ಅವರಿಗೆ ಆದ್ಯತೆ ನೀಡಲಾಗುತ್ತದೆ. ಅಲ್ಲದೇ ಅಂತ್ಯೋದಯ, ಬಿಪಿಎಲ್, ಎಪಿಎಲ್ ಯೋಜನೆಯಡಿ ನ್ಯಾಯಬೆಲೆ ಅಂಗಡಿ ತೆರೆಯಲು ಅವಶ್ಯವಿರುವ ಬ್ಯಾಂಕ್ ಠೇವಣಿ ಮೊತ್ತ 50,000 ರೂ.ಗಳು.
ಯಾರು ಅರ್ಜಿ ಸಲ್ಲಿಕೆ ಮಾಡಬಹುದು?: ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ ಅರ್ಜಿ ಸಲ್ಲಿಸಬಹುದು.
ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೋಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೋಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್ (ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೋಂದಣಿಯಾಗಿರಬೇಕು) ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ನಮೂನೆ 'ಎ' ನಲ್ಲಿ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗಾಗಿ ಉಪ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಇವರ ವಿಳಾಸಕ್ಕೆ ಸಲ್ಲಿಸಬೇಕಿದೆ.
ಒಮ್ಮೆ ನ್ಯಾಯಬೆಲೆ ಅಂಗಡಿಯನ್ನು ಆರಂಭಿಸಿದ ಬಳಿಕ ಇಲಾಖೆಯ ನಿಯಮಗಳ ಆಧಾರದ ಮೇಲೆ ಅಕ್ಕಿ, ರಾಗಿ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಮಾರಾಟ ಮಾಡಬೇಕಿದೆ. ಅಲ್ಲದೇ ಅಂಗಡಿ ಆರಂಭಿಸಿದ ವಿತರಕರು ಪ್ರತಿವರ್ಷ ಡಿಸೆಂಬರ್ 31ರೊಳಗೆ ಆ ವರ್ಷದ ಲೆಕ್ಕಪತ್ರವನ್ನು ಸಲ್ಲಿಕೆ ಮಾಡಿ, ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. ನಿಗದಿತ ಅವಧಿಯ ಒಳಗೆ ನವೀಕರಣ ಮಾಡಿಕೊಳ್ಳದಿದ್ದರೆ. ದಂಡಸಮೇತ 500 ರೂ.ಗಳನ್ನು ಪಾವತಿಸಿ, ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆದರೆ ಜನವರಿ 31ರ ನಂತರ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವದಿಲ್ಲ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications