ಬೇಸಿಗೆ ಆರಂಭ; ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು
ಬೇಸಿಗೆ ಈಗಾಗಲೇ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ಈ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ಬೇಸಿಗೆಯಲ್ಲಿ ಚರ್ಮದ ಆರೋಗ್ಯ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.
ಬೇಸಿಗೆಯಲ್ಲಿ ಜನರು ಆರೋಗ್ಯವನ್ನು ಕಾಪಾಡಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಲವು ಸಲಹೆಗಳನ್ನು ನೀಡಿದೆ.
ಜನರು ಬೇಸಿಗೆಯಲ್ಲಿ ಸಡಿಲವಾದ ತೇಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ ನಿಧಾನವಾಗಿ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ/ ಪಾನಕಗಳನ್ನು ಕುಡಿಯಿರಿ.

ಮದ್ಯಪಾನ ಮಾಡಬೇಡಿ. ಕಾಫಿ/ ಟೀ ಇತ್ಯಾದಿ ಆದಷ್ಟೂ ಕಡಿಮೆ ಕುಡಿಯಿರಿ. ಹತ್ತಿಯ ಅಥವಾ ಕಾಟನ್ ಬಟ್ಟೆ ಕರವಸ್ತ್ರದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ/ ಎಳನೀರು ಕುಡಿಯಬಹುದು. ಬೆಚ್ಚಗಿನ ಮಸಾಲೆ ರಹಿತ ಶುದ್ಧ ಸಾತ್ವಿಕ ಆಹಾರ ಸೇವಿಸಿರಿ. ಗಾಳಿಯಾಡುವಂತಿರುವ ಪಾದರಕ್ಷೆ ಧರಿಸಿರಿ.
ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ಆ ವ್ಯಕ್ತಿಯನ್ನು ನೆರಳಿನ ಪ್ರದೇಶಕ್ಕೆ ಸ್ಥಳಾಂತರ ಮಾಡಿ. ಆ ವ್ಯಕ್ತಿಯನ್ನು ಕೆಳಗೆ ಮಲಗಿಸಿ, ಕಾಲುಗಳನ್ನು ಮೇಲೆಕ್ಕೆತ್ತಿ. ಆ ವ್ಯಕ್ತಿಯ ಹಣೆ, ಕತ್ತು, ಪಾದ, ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಿರಿ. ಆ ವ್ಯಕ್ತಿಗೆ ನಿಧಾನವಾಗಿ ಸ್ವಲ್ಪ ಸಕ್ಕರೆ/ ಉಪ್ಪು ಬೆರೆಸಿದ ನೀರನ್ನು ಕುಡಿಸಿರಿ. ಹತ್ತಿರದ ವೈದ್ಯರನ್ನು ಕರೆಸಿರಿ ಅಥವಾ 108ಗೆ ಕರೆ ಮಾಡಿರಿ.
ಏನು ಮಾಡಬಾರದು: ಬಿಗಿಯಾದ, ಗಾಢ ಬಣ್ಣದ ಸಿಂಥೆಟಿಕ್/ ಕೃತಕ ಬಟ್ಟೆ ಧರಿಸಬಾರದು.
ಕುಷನ್‍ಯುಕ್ತ ಕುರ್ಚಿಯಲ್ಲಿ ಕೂರಬೇಡಿ. ಸೋಡ ಇತ್ಯಾದಿ ಕಾಬೋನೇಟೆಡ್ ತಂಪು ಪಾನೀಯಗಳನ್ನು ಸೇವಿಸಬೇಡಿ.

ಬೇವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬೇಡಿ. ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬೇಡಿ. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬೇಡಿ. ಮಾಂಸಹಾರ ಸೇವಿಸಬೇಡಿ ಮತ್ತು ಮದ್ಯಪಾನ ಬೇಡ.
ಬಿಗಿಯಾದ ಗಾಳಿಯಾಡದ ಪಾದರಕ್ಷೆ/ ಶೂ ಧರಿಸಬೇಡಿ. ಉಷ್ಣತೆಯಿಂದ ಸುಸ್ಥಾದ ವ್ಯಕ್ತಿಯನ್ನು ತುಂಬಾ ತಣ್ಣಗಿನ/ ಶಿತಲೀಕರಿಸಿದ ನೀರಿನಿಂದ ಒರೆಸಬೇಡಿ. ವ್ಯಕ್ತಿಯು ತೊದಲು ತೊದಲಾಗಿ, ವಿಚಿತ್ರವಾಗಿ ಮಾತನಾಡಿದರೆ ಆತಂಕಪಡಬೇಡಿ.
ಚರ್ಮ ಕೆಂಪಗಾದರೆ, ಬೆವರಿನ ಪ್ರಮಾಣ ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀವ್ರ ಉಸಿರಾಟವಿದ್ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.












Click it and Unblock the Notifications