ಮೋದಿ ವಿರುದ್ಧ ಕಣಕ್ಕಿಳಿದಿರುವ ಅಜಯ್ ರಾಯ್ ವ್ಯಕ್ತಿಚಿತ್ರ
Recommended Video
ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಲ್ಲಿ ಕಾಂಗ್ರೆಸ್ಸಿನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಗುರುವಾರದಂದು ತೆರೆ ಬಿದ್ದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲಿಗೆ ಐದು ಬಾರಿ ಶಾಸಕ ಅಜಯ್ ರಾಯ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ ಸೋಲು ಕಂಡಿದ್ದ ಅಜಯ್ ರಾಯ್ ಅವರಿಗೆ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧಿಸುವ ಅವಕಾಶವನ್ನು ನೀಡಲಾಗಿದೆ.
ವಾರಣಾಸಿಯ ಪಾರ್ವತಿ ದೇವಿ ಹಾಗೂ ಸುರೇಂದ್ರ ರಾಯ್ ದಂಪತಿಯ ಪುತ್ರನಾಗಿ ಜನಿಸಿದ ಅಜಯ್ ರಾಯ್ ಅವರನ್ನು ಸ್ಥಳೀಯರು 'ಬಾಹುಬಲಿ' ಎಂದು ಪ್ರೀತಿಯಿಂದ ಕರೆಯುತ್ತಾರೆ. ಭಾರತೀಯ ಜನತಾ ಪಾರ್ಟಿಯ ವಿದ್ಯಾರ್ಥಿ ಸಂಘಟನೆಯ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟರು.
1966 ರಿಂದ 2007ರ ಅವಧಿಯಲ್ಲಿ ಕೊಲಸ್ಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದರು. ಮುಂದೆ ಓದಿ..

ಸಮಾಜವಾದಿ ಪಕ್ಷ ಸೇರಿದ್ದ ಅಜಯ್
ಮುಂದೆ ಲೋಕಸಭಾ ಟಿಕೆಟ್ ನೀಡಲು ನಿರಾಕರಿಸಿದ್ದರಿಂದ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದರು. 2009ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಸೋಲು ಕಂಡಿದ್ದರು. ಆದರೆ, ನಂತರ 2009 ವಿಧಾನಸಭೆ ಉಪ ಚುನಾವಣೆಯಲ್ಲಿ ಕೊಲಸ್ಲಾ ಕ್ಷೇತ್ರದಿಂದಲೇ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

ಪಕ್ಷೇತರರಾಗಿ ನಿಂತು ಕೂಡಾ ಶಾಸಕರಾದರು
ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದ ಬಳಿಕ ಕಾಂಗ್ರೆಸ್ ಸೇರಿದರು. ನಂತರ ಕ್ಷೇತ್ರ ವಿಂಗಡಣೆಯಾದ ಬಳಿಕ 2012 ಕೊಲಸ್ಲಾ ವಿಧಾನಸಭಾ ಕ್ಷೇತ್ರ ವಿಭಜನೆಯಾಗಿ ಹೊಸದಾಗಿ ನಿರ್ಮಾಣವಾದ ಪಿಂಡ್ರಾ ಕ್ಷೇತ್ರದಿಂದ 2012ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

2014ರಲ್ಲಿ ಕಾಂಗ್ರೆಸ್ಸಿನಿಂದ ಲೋಕಸಭೆ ಟಿಕೆಟ್
2015ರಲ್ಲಿ ವಾರಣಾಸಿಯಲ್ಲಿ ಗಂಗಾ ನದಿಯಲ್ಲಿ ಮೂರ್ತಿ ವಿಸರ್ಜನೆ ಸಂಬಂಧ ನಡೆದ ಗಲಭೆ, ಘರ್ಷಣೆಗೆ ಕಾರಣರಾದ ಆರೋಪದ ಮೇಲೆ ಬಂಧಿಸಲಾಗಿತ್ತು. ವಾರಣಾಸಿಯಲ್ಲಿ ಸ್ವತಂತ್ರ ಆಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ಸಿನಿಂದ 2014ರಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಮತ್ತೊಮ್ಮೆ ಮೋದಿ ವಿರುದ್ಧ ಸೆಣಸುತ್ತಿದ್ದಾರೆ.

2014ರಲ್ಲಿ ನೀರಸ ಪ್ರದರ್ಶನ ನೀಡಿದ್ದ ಅಜಯ್
2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು 5,81,022 ಮತಗಳನ್ನು ಪಡೆದರೆ, ಅರವಿಂದ್ ಕೇಜ್ರಿವಾಲ್ 2,09,238 ಮತಗಳನ್ನು ಪಡೆದಿದ್ದರು. ಅಜಯ್ ರಾಯ್ ಕೇವಲ 75,614 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications