Year end 2022: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ, 6 ತಿಂಗಳಿನಲ್ಲಿ 5 ಜನ ಬಲಿ, ಇಲ್ಲಿದೆ ವಿವರ
ಚಿಕ್ಕಮಗಳೂರು, ಡಿಸೆಂಬರ್, 22: ಮಲೆನಾಡು ಭಾಗದಲ್ಲಿ ಕಾಡಾನೆ ಮತ್ತು ಮಾನವನ ನಡುವೆ ಸಂಘರ್ಷ ನಿನ್ನೆ ಮೊನೆಯದಲ್ಲ. ಅನೇಕ ವರ್ಷಗಳಿಂದ ಈ ಸಮಸ್ಯೆ ಇಲ್ಲಿನ ಜನರನ್ನು ನಿದ್ದೆಗೆಡಿಸಿದೆ. ಈಗಾಗಲೇ ಮಲೆನಾಡಿನ ಭಾಗದಲ್ಲಿ ಕಾಡಾನೆ ದಾಳಿಯಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ಇನ್ನೂ ಎಚ್ಚೇತ್ತುಕೊಂಡಿಲ್ಲ. ಸರ್ಕಾರ ಎಚ್ಚೇತ್ತುಕೊಳ್ಳಲು ಇನ್ನೇಷ್ಟು ಬಲಿಬೇಕು? ಎನ್ನುವುದು ಮಲೆನಾಡಿನ ಜನರ ಪ್ರಶ್ನೆಯಾಗಿದೆ.
ಮಲೆನಾಡು ಭಾಗದಲ್ಲಿ ಕಾಡಾನೆಗಳು ದಾಳಿ ನಡೆಸಿ ಕಳೆದ ಆರು ತಿಂಗಳಿನಲ್ಲಿ 5 ಬಲಿ ಪಡೆದುಕೊಂಡಿವೆ. ಮೂಡಿಗೆರೆ ತಾಲೂಕು ಗುತ್ತಿಹಳ್ಳಿಯ ರತ್ನಮ್ಮ, ಊರುಬಗೆಯ ಅರ್ಜುನ್, ತುಂಬರಗಂಡಿಯ ಆನಂದ್ ದೇವಾಡಿಗ, ಮೂಲರಹಳ್ಳಿಯ ಸುನೀಲ್, ಹಾಗೂ ಕುಂದೂರು ಹುಲ್ಲುಮನೆಯ ಶೋಭಾ ಎಂಬುವವರು ಆನೆ ದಾಳಿಯಿಂದ ಮೃತಪಟ್ಟವರಾಗಿದ್ದಾರೆ.
ಕಾಡಾನೆ ಹಾವಳಿಯಿಂದ ಮಲೆನಾಡಿನ ಜನರು ಹೈರಾಣಾಗಿದ್ದು, ಮಾನವ ಜೀವಹಾನಿಯೊಂದಿಗೆ ಅಪಾರ ಪ್ರಮಾಣದ ಬೆಳೆ ನಾಶವನ್ನು ಮಾಡುತ್ತಲೇ ಬಂದಿವೆ. ಕಷ್ಟಪಟ್ಟು ಬೆಳೆದ ಬೆಳೆ ಕಾಡಾನೆಗಳ ಪಾಲಾಗುತ್ತಿದ್ದು, ಮದ್ಯಮ ವರ್ಗದ ರೈತರು ಮತ್ತು ಬೆಳೆಗಾರರ ಬದುಕು ಬೀದಿಗೆ ಬಿದ್ದಿದೆ. ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಅಥವಾ ಬೇರೆಡೆಗೆ ಸ್ಥಳಾಂತರಿಸುವಂತೆ ಅನೇಕ ಬಾರಿ ಅಧಿಕಾರಿಗಳು ಜನರು ಆಗ್ರಹಿಸಿದ್ದರು. ಆದರೆ ಇದುವರೆಗೂ ಅಧಿಕಾರಿಗಳು ನಮ್ಮ ಕಡೆ ಗಮನಹರಿಸಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಮಲೆನಾಡು ಭಾಗದಲ್ಲಿ ಪದೇ ಪದೇ ಕಾಡಾನೆ ಮತ್ತು ಮಾನವ ಸಂಘರ್ಷ ನಡೆಯುತ್ತಲೇ ಇದೆ. ಆದರೆ ಸರ್ಕಾರ ಮಾತ್ರ ಮೌನವಹಿಸಿದೆ. ಇದರಿಂದ ಆಕ್ರೋಶಗೊಂಡ ಜನ ಇನ್ನೆಷ್ಟು ಜೀವಗಳು ಬಲಿ ಬೇಕು ಎಂದು ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ.

ಕಾಡಾನೆಗಳ ಹಾವಳಿಗೆ ಬೇಸತ್ತ ಜನ
ಜಿಲ್ಲೆಯ ಕೊಪ್ಪ ತಾಲೂಕು ಜಯಪುರ ಸುತ್ತಮುತ್ತ ಪುಂಡಾಟ ಮುಂದುವರೆಸಿದ್ದ ಹಾವೇರಿ ಟಸ್ಕರ್ ಒಂಟಿ ಸಲಗವನ್ನು ಸೆರೆಹಿಡಿಯಲಾಗಿತ್ತು. ಶಿವಮೊಗ್ಗ ಸಮೀಪದ ಸಕ್ರೆಬೈಲು ಬಿಡಾರದ ಆನೆಗಳು ಒಂದು ವಾರ ಕಾರ್ಯಾಚರಣೆ ನಡೆಸಿ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದವು. ಮೂಡಿಗೆರೆ ತಾಲೂಕು ಭಾಗದಲ್ಲಿ ಪುಂಡಾಟ ಮುಂದುವರೆಸಿದ್ದ ಭೈರ ಒಂಟಿ ಸಲಗವನ್ನು ಸೆರೆ ಹಿಡಿಯಲು ಮೈಸೂರು ದಸರಾದಲ್ಲಿ ಭಾಗವಹಿಸಿದ್ದ ಅರ್ಜುನ ಸೇರಿದಂತೆ ನಾಗರಹೊಳೆಯಿಂದ ಇತರ ಆನೆಗಳನ್ನು ಕರೆಸಿಕೊಳ್ಳಲಾಗಿದೆ. ಈಗಾಗಲೇ ಮೂರು ಕಾಡಾನೆಗಳನ್ನು ಸೆರೆ ಹಿಡಿಯಲಾಗಿದೆ ಎನ್ನವ ಮಾಹಿತಿಯನ್ನು ಅರಣ್ಯ ಇಲಾಖೆಯವರು ನೀಡಿದ್ದರು.

ಜನರು ಮನೆಯಿಂದ ಹೊರ ಬರಲು ಹಿಂದೇಟು
ಇತ್ತೀಚಿನ ದಿನಗಳಲ್ಲಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಪುಂಡಾಟ ಹೆಚ್ಚಾಗಿದೆ. ಕಾಡಾನೆಗಳ ದಾಳಿಯ ಆತಂಕದಿಂದ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಜಮೀನುಗಳಿಗೆ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅನೇಕ ಕುಟುಂಬಗಳು ಮನೆಯ ಆಧಾರ ಸ್ತಂಭಗಳನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿವೆ. ಮೃತ ಕುಟುಂಬಕ್ಕೆ ಸರ್ಕಾರ 7 ರಿಂದ 8 ಲಕ್ಷ ರೂಪಾಯಿ ಪರಿಹಾರ ನೀಡಿ ಸುಮ್ಮನಾಗುತ್ತಿದೆ. ಆದರೆ ಕಾಡಾನೆಗಳ ದಾಳಿಗೆ ಇನ್ನು ನಿಯಂತ್ರಣ ಹಾಕದಿರುವುದು ಜನರ ನಿದ್ದೆಗೆಡಿಸಿದೆ. ಈಗಾಗಲೇ ಸರ್ಕಾರ ಮತ್ತು ಇಲಾಖೆಯ ಮೌನಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಒಟ್ಟಾರೆ ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಕಡಿವಾಣ ಹಾಕಬೇಕು ಎನ್ನುವುದು ಮಲೆನಾಡಿಗರ ಆಗ್ರವಾಗಿದೆ.

ಯಾವ ಭಾಗದಲ್ಲಿ ಕಾಡಾನೆಗಳ ದಾಳಿ ಹೆಚ್ಚಳ?
ಆನೆ ಮತ್ತು ಮಾನವ ಸಂಘರ್ಷ ದಿನದಿಂದ ದಿನಕ್ಕೆ ತರಕಕ್ಕೇರುತ್ತಿದ್ದು, ಮೂಡಿಗೆರೆ, ಆಲ್ದೂರು, ಸಕಲೇಶಪುರ ಭಾಗದಲ್ಲಿ ಆನೆ ದಾಳಿಯಿಂದ ಮಾನವನ ಸಾವು ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನ್ಯಾಯಾಲಯದ ಆದೇಶದಂತೆ ಆನೆ ತಜ್ಞರ ವರದಿ ಪ್ರಕಾರ ಸರ್ಕಾರ ಕೂಡಲೇ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಶಾಶ್ವತ ಕುಮ್ಕಿ ಆನೆ ಶಿಬಿರ ತೆರೆಯಬೇಕು. ಇದರಿಂದ ಪ್ರತಿ ಬಾರಿ ನಾಗರಹೊಳೆ ಮತ್ತು ಶಿವಮೊಗ್ಗದಿಂದ ಆನೆಗಳನ್ನು ಕೆರೆಸಿಕೊಳ್ಳುವುದು ತಪ್ಪಿದಂತಾಗುತ್ತದೆ. ಶಾಶ್ವತ ಕುಮ್ಕಿ ಅನೆ ಶಿಬಿರವನ್ನು ತೆರೆಯುವುದರಿಮದ ಮಾನವ ಮತ್ತು ಆನೆ ಸಂಘರ್ಷ ಕಡಿಮೆ ಮಡಲು ಸಾಧ್ಯವಾಗುತ್ತದೆ ಎನ್ನುವುದಿ ಸ್ಥಳಿಯರ ವಾದವಾಗಿದೆ.

ಪರಿಹಾರ ಮೊತ್ತವನ್ನ 20 ಲಕ್ಷ ರೂ.ಗೆ ಹೆಚ್ಚಿಸಿ
ವನ್ಯಜೀವಿ ದಾಳಿಯಿಂದ ಮಾನವ ಹತ್ಯೆಯಾದಲ್ಲಿ ಮಹಾರಾಷ್ಟ್ರ ಸರ್ಕಾರ 20 ಲಕ್ಷ ರೂಪಾಯಿ ಪರಿಹಾರ ನೀಡುತ್ತಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಪರಿಹಾರ ಮೊತ್ತವನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು. ಮಾನವ ಆನೆ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಹೆಚ್ಚಿನ ಹಣವನ್ನು ಮೀಸಲಿಡಬೇಕು. ಮೂಡಿಗೆರೆ ಮತ್ತು ಆಲ್ದೂರು ಭಾಗದಲ್ಲಿ ಆನೆ ಉಪಟಳಿ ಇರುವ ಪ್ರದೇಶಗಳ ಗ್ರಾಮಗಳ ಸಮೀಪ ಆನೆ ಓಡಿಸುವ ಶಿಬಿರಗಳನ್ನು ತೆರೆಯಬೇಕು. ಮಾನವ ಮತ್ತು ಆನೆ ಸಂಘರ್ಷದಲ್ಲಿ ಸಾವುನೋವು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಂಡು ಆನೆಗಳ ದಾಳಿಯಿಂದ ಶಾಶ್ವತವಾಗಿ ಮುಕ್ತಿ ಕೊಡಿಸಿ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications