Eshwar Khandre Profile: ಗಡಿ ಜಿಲ್ಲೆಯ ಹ್ಯಾಟ್ರಿಕ್ ಗೆಲುವಿನ ಸರದಾರ ಈ ʼಈಶ್ವರ್ ಖಂಡ್ರೆʼ!
ರಾಜ್ಯ ಕಾಂಗ್ರೆಸ್ ನ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂದೇ ಗುರುತಿಸಿಕೊಂಡವರು ಈಶ್ವರ್ ಖಂಡ್ರೆ. ಗಡಿ ಜಿಲ್ಲೆ ಬೀದರ್ ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಇವರು. ಪಕ್ಷದ ಜೊತೆಜೊತೆಗೆ ತಮ್ಮ ವೈಯಕ್ತಿಕ ವರ್ಚಸ್ಸನ್ನೂ ಬೆಳಸಿಕೊಂಡವರು.
ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ. ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು. ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಗಳಾಗಿದ್ದು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ ಪ್ರಭಾವಿ ರಾಜಕಾರಣಿ.
ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ. ಶಾಸಕ ಈಶ್ವರ್ ಖಂಡ್ರೆ ಅವರು ಭಾಲ್ಕಿಯಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಮತ್ತು ಲಕ್ಷ್ಮೀಬಾಯಿ ದಂಪತಿಗೆ 15 ಜನವರಿ 1962 ರಂದು ಜನಸಿದರು.1985 ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಪಡೆದರು. ಇನ್ನೂ ಬೀದರ್ ಜಿಲ್ಲೆಯಲ್ಲಿ ವಿಧಾನಸಭೆಗೆ ಆಯ್ಕೆಯಾದ ಖಂಡ್ರೆ ಕುಟುಂಬದ ಮೂರನೇ ಸದಸ್ಯರಾಗಿದ್ದಾರೆ. ಅವರ ಸಹೋದರ ವಿಜಯ ಕುಮಾರ್ ಖಂಡ್ರೆ ಅವರು ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

2008 ಬೀದರ್‌ನ ಬಾಲ್ಕಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದರು. ನಂತರ 2013 ಬೀದರ್ ನ ಬಾಲ್ಕಿ ಕ್ಷೇತ್ರದಿಂದ ಎರಡನೇ ಬಾರಿಗೆ ಗೆಲುವು ಸಾಧಿಸಿದರು. 2016 ರಿಂದ 2018 ರವರೆಗೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಕರ್ನಾಟಕದ ಪೌರಾಡಳಿತ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾಗಿದ್ದರು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 6 ಸ್ಥಾನಗಳ ಪೈಕಿ 4ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದರು.
ಈಶ್ವರ ಭೀಮಣ್ಣ ಖಂಡ್ರೆ 2018ರ ಚುನಾವಣೆಯಲ್ಲಿ 84,673 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಭೀಮಣ್ಣ ಖಂಡ್ರೆ ಪುತ್ರರಾದ ಈಶ್ವರ ಖಂಡ್ರೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದರು. ನಂತರ ಪಕ್ಷದ ಸಂಘಟನೆಯಲ್ಲಿ ಹೆಚ್ಚಾಗಿ ತೊಡಗಿರುವ ಕಾರಣ ಅವರನ್ನ 4 ಜುಲೈ 2018 ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ನೇಮಕ ಮಾಡಿದ್ದು, 2023 ರ ವಿಧಾನಸಭಾ ಚುನಾವಣೆ ಹಿನ್ನಲೆ ಬೀದರ್ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಸಕ್ರೀಯರಾಗಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ, ಹ್ಯಾಟ್ರಿಕ್ ಸರದಾರ ಈಶ್ವರ್ ಖಂಡ್ರೆ ಈ ಕ್ಷೇತ್ರದ ಹಾಲಿ ಶಾಸಕರಾಗಿ ಸತತವಾಗಿ 2008, 2013, 2018 ರಲ್ಲಿ ಗೆದ್ದು ಹ್ಯಾಟ್ರಿಕ್ ದಾಖಲೆ ಬರೆದಿದ್ದು, ಈಶ್ವರ ಖಂಡ್ರೆ ಅವರು ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು 29,971 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇನ್ನೂ 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ರಾಜ್ಯಾದ್ಯಂತ ಪ್ರಚಾರ ನಡೆಸುತ್ತಿದ್ದು, ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು,4ನೇ ಬಾರಿ ವಿಧಾನಸೌಧ ಪ್ರವೇಶಿಸಲು ಭರ್ಜರಿ ತಾಲೀಮು ಆರಂಭಿಸಿದ್ದಾರೆ.

ಇನ್ನೂ ಕೆಪಿಸಿಸಿ ಕಾರ್ಯದ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಗೆ ಟಿಕೆಟ್ ಸಿಗುವುದು ಬಹುಕೇಕ ಖಚಿತವಾಗಲಿದ್ದು, ಈ ಬಾರಿ ಈಶ್ವರ ಖಂಡ್ರೆ ಅವರನ್ನು ಸೋಲಿಸಲು ಇಬ್ಬರು ಮುಖಂಡರು ಒಂದಾಗಿದ್ದು, ಎಂಬ ಮಾಹಿತಿ ಇದೆ. ಇನ್ನೂ ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿಯಾಗಿದ್ದ ಈಶ್ವರ್ ಖಂಡ್ರೆ ಅವರು ಪ್ರಬಲ ಲಿಂಗಾಯತ ಸಮುದಾಯವನ್ನು ಓಲೈಸುವ ಕಾರ್ಯವನ್ನ ಮಾಡಲಾಗಿದ್ದು, ಲಿಂಗಾಯತರ ಬೆಂಬಲವನ್ನ ಪಡೆಯುವಲ್ಲಿ ಈಶ್ವರ್ ಖಂಡ್ರೆ ಯಶಸ್ವಿಯಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.












Click it and Unblock the Notifications