Get Updates
Get notified of breaking news, exclusive insights, and must-see stories!

ಸಿಡಿಲಿನಿಂದ ಪ್ರಾಣ ರಕ್ಷಿಸಿಕೊಳ್ಳಲು ಏನೇನು ಮಾಡಬೇಕು?

ಮೈಸೂರು, ಏಪ್ರಿಲ್‌ 10: ಇನ್ನು ಮುಂದಿನ ದಿನಗಳಲ್ಲಿ ಮುಂಗಾರು ಪೂರ್ವ ಮಳೆಯು ಗುಡುಗು, ಸಿಡಿಲುಗಳ ಸಹಿತ ಸುರಿಯುವುದು ಮಾಮೂಲಾಗಿದೆ. ಈ ವೇಳೆ ಸಿಡಿಲಿನಿಂದ ಅನಾಹುತ ಸಂಭವಿಸುವ ಸಾಧ್ಯತೆಯಿದ್ದು, ಈ ಸಂದರ್ಭದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ರೈತರಿಂದ ಆರಂಭವಾಗಿ ವಾಹನ ಚಾಲನೆ ಮಾಡುವವರ ತನಕ. ಎಲ್ಲರೂ ಒಂದಷ್ಟು ಎಚ್ಚರಿಕೆಗಳನ್ನು ವಹಿಸುವುದು ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳುವತ್ತ ಗಮನಹರಿಸಬೇಕಿದೆ.

ಪ್ರತಿ ವರ್ಷವೂ ಸಿಡಿಲಿಗೆ ಜನಜಾನುವಾರುಗಳು ಬಲಿಯಾಗುವುದು ನಡೆಯುತ್ತಲೇ ಇದ್ದು ಅದನ್ನು ನಿಯಂತ್ರಿಸಬೇಕಾದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆಗಳನ್ನು ಪಾಲಿಸಬೇಕಾಗುತ್ತದೆ.

Essential Safety Measures During Thunderstorms and Lightning

ಪ್ರತಿ ವರ್ಷವೂ ಮುಂಗಾರು ಮಳೆ ಆರಂಭವಾಗುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಅದನ್ನು ಪಾಲನೆ ಮಾಡಿದರೆ ನಿಜಕ್ಕೂ ಪ್ರಾಣಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರಲ್ಲೂ ತೋಟ, ಜಮೀನುಗಳಲ್ಲಿ ಕೆಲಸ ಮಾಡುವವರು, ದನಕರು, ಕುರಿಗಳನ್ನು ಮೇಯಿಸುವವರು ಸಿಡಿಲು, ಗುಡುಗು ಸಹಿತ ಮಳೆ ಸುರಿಯುವ ವೇಳೆ ಎಚ್ಚರ ವಹಿಸಬೇಕಾಗುತ್ತದೆ. ಬಯಲು ಪ್ರದೇಶಗಳಲ್ಲಿ ಕೆಲಸ ಮಾಡುವವರು, ನಡೆದುಕೊಂಡು ಹೋಗುವವರು ಮರದ ಕೆಳಗೆ ನಿಂತ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿರುವ ಪ್ರಕರಣಗಳು ಬಹಳಷ್ಟು ನಡೆದಿವೆ.

Take a Poll

ಸಿಡಿಲು ಬಂದಾಗ ಏನು ಮಾಡಬೇಕು? ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹೇಳಿದ್ದು ಅದರಂತೆ ಹೇಳುವುದಾದರೆ, ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು- ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು ಗುಡುಗು- ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ಪಾಲಿಸಬೇಕಾಗುತ್ತದೆ ಎಂದು ಹೇಳಿದೆ.

ಹವಾಮಾನ ಮುನ್ಸೂಚನೆಯನ್ನು ಗಮನಿಸಬೇಕು

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಸಲಹೆ ಸೂಚನೆಗಳೇನು ಎಂಬುದನ್ನು ನೋಡಿದ್ದೇ ಆದರೆ, ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ Alerts ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.

Essential Safety Measures During Thunderstorms and Lightning

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು, ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು, ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.

ಗುಂಪಿನಲ್ಲಿರದೆ ಅಂತರವನ್ನು ಕಾಪಾಡಿಕೊಳ್ಳಿ

ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದನ್ನು ಮಾಡಬೇಕಾಗುತ್ತದೆ. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಏಕೆಂದರೆ ಇವು ಸಿಡಿಲನ್ನು ಆಕರ್ಷಿಸುತ್ತವೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ, ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕಾಗುತ್ತದೆ.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕಾಗುತ್ತದೆ. ಮಕ್ಕಳು, ವಯೋವೃದ್ಧರು, ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಿದರೆ ಉತ್ತಮ.

Essential Safety Measures During Thunderstorms and Lightning

ವಾಹನದಲ್ಲಿ ಸಂಚರಿಸುವವರು ಎಚ್ಚರವಾಗಿರಬೇಕು

ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು, ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳಲ್ಲಿ ಸಂಚಾರವನ್ನು ಮಾಡಬಾರದು.

ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು ಒಳ್ಳೆಯದು. ಒಂದಿಷ್ಟು ಎಚ್ಚರಿಕೆಯನ್ನು ವಹಿಸಿದ್ದೇ ಆದರೆ ಅಪಾಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿದೆ. ಆದ್ದರಿಂದ ಸಿಡಿಲು ಗುಡುಗಿನ ವಾತಾವರಣವನ್ನು ಗಮನಿಸಿ ನಾವು ಮಾತ್ರವಲ್ಲದೆ ಬೇರೆಯವರು ಎಚ್ಚರವಾಗಿರುವಂತೆ ನೋಡಿಕೊಳ್ಳುವುದು ಬಹುಮುಖ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+