ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಕ್ಸಿಟ್ ಪೋಲ್ ಸತ್ಯವಾದರೆ ಕರ್ನಾಟಕ ಸರ್ಕಾರದ ಕತೆ ಏನು?

|
Google Oneindia Kannada News

Recommended Video

Exit Poll 2019: ಎನ್‍ಡಿಎ ಅಧಿಕಾರಕ್ಕೆ ಬಂದ್ರೆ ಮೈತ್ರಿ ಸರ್ಕಾರದ ಕಥೆ ಏನು? | Oneindia Kannada

ಬೆಂಗಳೂರು, ಮೇ 20: ಭಾನುವಾರ ಸಂಜೆ ಹೊರಬಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಸತ್ಯವೇ ಆದರೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಕತೆ ಏನಾಗುತ್ತದೆ?

ಈಗಾಗಲೇ ಬಿಜೆಪಿ ನಾಯಕರು ಸರ್ಕಾರ ಕೆಡವಲು ಮೇ 23 (ಚುನಾವಣೆ ಫಲಿತಾಂಶ)ರವರೆಗೆ ಗಡುವು ನೀಡಿದ್ದಾರೆ. ಭಾನುವಾರ ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷೆ ಫಲಿತಾಂಶದ ಪ್ರಕಾರ ಕರ್ನಾಟಕದಲ್ಲಿ ಸಮಾರು 19 ಸ್ಥಾಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಒಟ್ಟು 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಕರ್ನಾಟಕದಲ್ಲಿ ಬಿಜೆಪಿ ಇಂಥ ಸಾಧನೆ ಮೆರೆದಿದ್ದೇ ಆದಲ್ಲಿ ಅದಕ್ಕೆ ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕೆಡಹುವುದು ಕಷ್ಟವಾಗುವುದಿಲ್ಲ. ಆದರೆ ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಬೇಕು.

 ಸಿ-ವೋಟರ್ ಸಮೀಕ್ಷೆ: ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಸಿ-ವೋಟರ್ ಸಮೀಕ್ಷೆ: ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಬಹುಪಾಲು ಎಕ್ಸಿಟ್ ಪೋಲ್ ಗಳಲ್ಲಿ ಎನ್ ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎನ್ನಲಾಗಿದ್ದು, ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಎನ್ ಡಿಎ ಜೊತೆ ಸೇರಿ ಸುಲಭವಾಗಿ ಬಹುಮತ ಪಡೆಯಬಹುದು ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು

ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದರೆ, ರಾಜ್ಯದಲ್ಲೂ ಬಿಜೆಪಿ ಉತ್ತಮ ಸಾಧನೆ ಮೆರೆದರೆ ಕಾಂಗ್ರೆಸ್ ನ ಬಂಡಾಯ ನಾಯಕರನ್ನು ಬಿಜೆಪಿಗೆ ಸೆಳೆಯುವುದು ಕಷ್ಟವಾಗಲಾರದು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಇರುತ್ತದೆ ಎಂದಾದರೆ ಕಾಂಗ್ರೆಸ್ ನಾಯಕರು ಬೇಷರತ್ ಬೆಂಬಲ ನೀಡಿದರೂ ಅಚ್ಚರಿಯಿಲ್ಲ.

ಮಂಡ್ಯದ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ!

ಮಂಡ್ಯದ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ!

ನಿಜ ಹೇಳಬೇಕೆಂದರೆ ರಾಜ್ಯದ ಮೈತ್ರಿ ಸರ್ಕಾರದ ಭವಿಷ್ಯ ಮಂಡ್ಯದ ಫಲಿತಾಂಶದ ಮೇಲೆ ನಿಂತಿದೆ. ಮಂಡ್ಯದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೇ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಸಮೀಕ್ಷೆಗಳು ಇಬ್ಬರಿಗೂ 50:50 ಸಾಧ್ಯತೆಯನ್ನು ವ್ಯಕ್ತಪಡಿಸಿದ್ದು, ಕುತೂಹಲ ಕೆರಳಿಸಿದೆ. ಆದರೆ ಅಕಸ್ಮಾತ್ ಮೈತ್ರಿ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆದ್ದಿದ್ದೇ ಆದರೆ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಪ್ರತಿಷ್ಠೆಗೆ ಅದು ಭಾರೀ ಪೆಟ್ಟು ಕೊಡಬಹುದು. ಏಕೆಂದರೆ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಹಲಗಲಿರುಳೂ ಪ್ರಚಾರ ಮಾಡಿದ್ದಾರೆ. ಬೆವರು ಸುರಿಸಿದ್ದಾರೆ. ನಿಖಿಲ್ ಸೋತರೆ ಮೈತ್ರಿ ಸರ್ಕಾರದಲ್ಲಿ ಅವರು ಅಪಹಾಸ್ಯಕ್ಕೀಡಾಗಬಹುದು.

ಇಂಡಿಯಾ ಟುಡೇ - ಏಕ್ಸಿಸ್ ಎಕ್ಸಿಟ್ ಪೋಲ್: ಕರ್ನಾಟಕದಲ್ಲಿ ಬಿಜೆಪಿ ಜಯಭೇರಿಇಂಡಿಯಾ ಟುಡೇ - ಏಕ್ಸಿಸ್ ಎಕ್ಸಿಟ್ ಪೋಲ್: ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ

ಬೂದಿ ಮುಚ್ಚಿರುವ ಬಂಡಾಯದ ಕೆಂಡ

ಬೂದಿ ಮುಚ್ಚಿರುವ ಬಂಡಾಯದ ಕೆಂಡ

ಈಗಾಗಲೇ 'ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು' ಎಂದು ಕಾಂಗ್ರೆಸ್ ನಲ್ಲಿ ಕೆಲವು ಬಂಡಾಯ ನಾಯಕರು ಹೇಳಿಕೆ ನೀಡಿದ್ದಾರೆ. ಇದು ಮೈತ್ರಿ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ. ಆದರೆ ಎಕ್ಸಿಟ್ ಪೋಲ್ ಫಲಿತಾಂಶ ಸತ್ಯವಾದರೆ ಆ ಬಂಡಾಯ ಮತ್ತೆ ಆರಂಭವಾಗಬಹುದು. ಈ ಸಂದರ್ಭವನ್ನು ಬಿಜೆಪಿ ತನ್ನ ಲಾಭಕ್ಕಾಗಿ ಬಳಸಿಕೊಳ್ಳಬಹುದು.

ಮೈತ್ರಿ ಸರ್ಕಾರ ವಿಸರ್ಜಿಸಿ ಎಂದಿದ್ದ ಹೊರಟ್ಟಿ

ಮೈತ್ರಿ ಸರ್ಕಾರ ವಿಸರ್ಜಿಸಿ ಎಂದಿದ್ದ ಹೊರಟ್ಟಿ

ಇತ್ತೀಚೆಗಷ್ಟೇ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರು ಕರ್ನಾಟಕ ವಿಧಾನಸಭೆಯನ್ನು ವಿಸರ್ಜಿಸಿ, ಮತ್ತೆ ಚುನಾವಣೆಯನ್ನು ಎದುರಿಸುವುದು ಒಳಿತು ಎಂಬ ಹೇಳಿಕೆ ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ರಾಜ್ಯ ಸರ್ಕಾರಕ್ಕೆ ಅಂಥ ಪರಿಸ್ಥಿತಿಯನ್ನು ಬಿಜೆಪಿ ತಂದೊಡ್ಡಬಹುದು.

ಸಮೀಕ್ಷೆಗಳ ಸಮೀಕ್ಷೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು, ಸ್ಥಾನ?ಸಮೀಕ್ಷೆಗಳ ಸಮೀಕ್ಷೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು, ಸ್ಥಾನ?

English summary
Is Karnataka's JDS-Congress coalition government going to fall if exit poll results are true? Here is an analysis
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X