ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಪಡೆಯುವ ಮುನ್ನ, ನಂತರ ಏನು ಮಾಡಬೇಕು?

|
Google Oneindia Kannada News

ನವದೆಹಲಿ, ಮಾರ್ಚ್.04: ಭಾರತದಲ್ಲಿ ಕೊರೊನಾವೈರಸ್ ಸೋಂಕಿಗೆ ಲಸಿಕೆ ನೀಡುವುದಕ್ಕೆ ಆರಂಭಿಸಿ 47 ದಿನಗಳೇ ಕಳೆದಿವೆ. ಪ್ರತಿನಿತ್ಯ ಲಕ್ಷಾಂತರ ಜನರಿಗೆ ಕೊವಿಡ್-19 ಲಸಿಕೆ ನೀಡುತ್ತಿದ್ದರೂ, ಲಸಿಕೆ ಕುರಿತು ಕೆಲವು ಗೊಂದಲಗಳು ಹಾಗೇ ಉಳಿದಿವೆ.

ದೇಶದ 1,63,14,485 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 67,75,619 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 28,24,311 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 57,62,131 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,277 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಜನರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಕೊರೊನಾ ಲಸಿಕೆ ಪಡೆಯಬಹುದು ಜನರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಕೊರೊನಾ ಲಸಿಕೆ ಪಡೆಯಬಹುದು

ಕೊರೊನಾವೈರಸ್ ಲಸಿಕೆ ಪಡೆದುಕೊಂಡರೆ ಯಾವುದೇ ಅಪಾಯ ಆಗುವುದಿಲ್ಲ. ಲಸಿಕೆ ತೆಗೆದುಕೊಳ್ಳುವುದಕ್ಕೂ ಮೊದಲು ಏನೆಲ್ಲ ನಿಯಮಗಳನ್ನು ಅನುಸರಿಸಬೇಕು. ಲಸಿಕೆ ಪಡೆದ ನಂತರದಲ್ಲಿ ಹೇಗೆ ನಿಯಮಗಳ ಪಾಲನೆ ಮಾಡಬೇಕು. ಕೊರೊನಾವೈರಸ್ ಲಸಿಕೆ ಪಡೆದುಕೊಳ್ಳುವವರು ತಿಳಿದುಕೊಳ್ಳಬೇಕಾದ ಅಗತ್ಯ ಮಾರ್ಗಸೂಚಿ ನಿಯಮಗಳ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಭಾರತದಲ್ಲಿ ನೀಡುತ್ತಿರುವ ಎರಡೂ ಲಸಿಕೆಗಳು ಸುರಕ್ಷಿತ

ಭಾರತದಲ್ಲಿ ನೀಡುತ್ತಿರುವ ಎರಡೂ ಲಸಿಕೆಗಳು ಸುರಕ್ಷಿತ

ಭಾರತದಲ್ಲಿ ವಿತರಿಸಲಾಗುತ್ತಿರುವ ಎರಡು ಮಾದರಿಯ ಕೊರೊನಾವೈರಸ್ ಲಸಿಕೆಗಳು ಎರಡೂ ಸುರಕ್ಷಿತವಾಗಿವೆ ಎಂದು ಮಹಾರಾಷ್ಟ್ರದ ಕೊವಿಡ್-19 ಟಾಸ್ಕ್ ಫೋರ್ಸ್ ಸದಸ್ಯ ಡಾ. ಶಶಾಂಕ್ ಜೋಶಿ ತಿಳಿಸಿದ್ದಾರೆ. ದೇಶದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಂಸ್ಥೆ ಸಂಶೋಧಿಸಿದ ಹಾಗೂ ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಗಳು ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದಕ್ಕೂ ಮೊದಲು ಏನು?

ಲಸಿಕೆ ಹಾಕಿಸಿಕೊಳ್ಳುವುದಕ್ಕೂ ಮೊದಲು ಏನು?

- ಲಸಿಕೆ ಹಾಕಿಸಿಕೊಳ್ಳುವ ವ್ಯಕ್ತಿಯಲ್ಲಿ ಮೊದಲೇ ಔಷಧಿ ಮತ್ತು ಔಷಧಿಗಳಿಗೆ ಸಂಬಂಧಿಸಿದಂತೆ ಅಲರ್ಜಿಯ ಸಮಸ್ಯೆ ಎದುರಿಸುತ್ತಿದ್ದರೆ ವೈದ್ಯರಿಗೆ ಈ ಕುರಿತು ಮೊದಲೇ ಮಾಹಿತಿ ನೀಡಬೇಕು.

- ಸಂಪೂರ್ಣ ರಕ್ತದ ಎಣಿಕೆ (ಸಿಬಿಸಿ), ಸಿ-ರಿಯಾಕ್ಟಿವ್ ಪ್ರೋಟೀನ್ (ಸಿಆರ್ಪಿ), ಅಥವಾ ಇಮ್ಯುನೊಗ್ಲಾಬ್ಯುಲಿನ್-ಇ (ಐಜಿಇ) ಮಟ್ಟವನ್ನು ವೈದ್ಯರ ಸಲಹೆ ಮೇರೆಗೆ ಪರಿಶೀಲಿಸಲಾಗುವುದು.

- ಕೊರೊನಾವೈರಸ್ ಲಸಿಕೆ ಪಡೆಯುವ ಮೊದಲು ಚೆನ್ನಾಗಿ ಆಹಾರ ಸೇವಿಸಬೇಕು. ಲಸಿಕೆ ಪಡೆಯುವ ಸಂದರ್ಭದಲ್ಲಿ ಆರಾಮವಾಗಿರಬೇಕು. ಲಸಿಕೆಯ ಬಗ್ಗೆ ಆತಂಕಕ್ಕೆ ಒಳಗಾದವರಿಗೆ ಸಮಾಲೋಚನೆ ಮೂಲಕ ಸಹಾಯ ಮಾಡಲಾಗುತ್ತದೆ.

- ಮಧುಮೇಹ(ಸಕ್ಕರೆ ಕಾಯಿಲೆ), ರಕ್ತದೊತ್ತಡ(ಬಿಪಿ) ಮತ್ತು ಕ್ಯಾನ್ಸರ್ ರೋಗಿಗಳು ಕಡ್ಡಾಯವಾಗಿ ವೈದ್ಯರ ಸಲಹೆ ಪಡೆದುಕೊಳ್ಳಬೇಕು.

ಭಾರತದಲ್ಲಿ ಒಂದೇ ದಿನ 6.09 ಲಕ್ಷ ಜನರಿಗೆ ಕೊರೊನಾ ಲಸಿಕೆಭಾರತದಲ್ಲಿ ಒಂದೇ ದಿನ 6.09 ಲಕ್ಷ ಜನರಿಗೆ ಕೊರೊನಾ ಲಸಿಕೆ

ಕೊವಿಡ್-19 ಲಸಿಕೆ ಹಾಕಿಸಿಕೊಂಡ ನಂತರ ಏನು ಮಾಡಬೇಕು?

ಕೊವಿಡ್-19 ಲಸಿಕೆ ಹಾಕಿಸಿಕೊಂಡ ನಂತರ ಏನು ಮಾಡಬೇಕು?

- ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಆರೋಗ್ಯದ ಮೇಲ್ವಿಚಾರಣೆ ನಡೆಸುವ ಉದ್ದೇಶದಿಂದ ಕನಿಷ್ಠ 15-30 ನಿಮಿಷ ಲಸಿಕಾ ಕೇಂದ್ರದಲ್ಲಿಯೇ ಇರಿಸಿಕೊಳ್ಳಲಾಗುತ್ತದೆ. ತಜ್ಞವೈದ್ಯರ ತಂಡವು ಲಸಿಕೆ ಪಡೆದ ಫಲಾನುಭವಿಗಳ ಆರೋಗ್ಯದಲ್ಲಿನ ಏರಿಳಿತದ ಬಗ್ಗೆ ನಿಗಾ ವಹಿಸುತ್ತಾರೆ.

- ಕೊವಿಡ್-19 ಲಸಿಕೆ ಹಾಕಿಸಿಕೊಂಡ ವ್ಯಕ್ತಿಯಲ್ಲಿ ಯಾವುದೇ ರೀತಿಯ ಅಲರ್ಜಿ ಮತ್ತು ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ ಎಂಬುದು ಖಾತ್ರಿಯಾದ ನಂತರವೇ ಆ ವ್ಯಕ್ತಿಯಲ್ಲು ಲಸಿಕಾ ಕೇಂದ್ರದಿಂದ ಹೊರ ಬಿಡಲಾಗುತ್ತದೆ.

- ಶೀತ ಮತ್ತು ಆಯಾಸದಂತಹ ಇತರ ಕೆಲವು ಅಡ್ಡಪರಿಣಾಮಗಳನ್ನು ಸಹ ನಿರೀಕ್ಷಿಸಬಹುದು, ಆದರೆ ಇವು ಕೆಲವೇ ದಿನಗಳಲ್ಲಿ ಹೋಗುತ್ತವೆ.

- ಲಸಿಕೆ ಪಡೆದ ಸ್ಥಳದಲ್ಲಿ ನೋವು, ಜ್ವರ ಸೇರಿದಂತೆ ಮುಂತಾದ ಅಡ್ಡಪರಿಣಾಮಗಳು ಸಾಮಾನ್ಯವಾಗಿದೆ. ಇದರಿಂದ ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ.

ಕೊವಿಡ್-19 ಲಸಿಕೆ ಕುರಿತು ಪ್ರಮುಖ ಅಂಶಗಳು

ಕೊವಿಡ್-19 ಲಸಿಕೆ ಕುರಿತು ಪ್ರಮುಖ ಅಂಶಗಳು

- ವೈರಸ್ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಲಸಿಕೆಯು ಸಹಾಯ ಮಾಡುತ್ತದೆ. ಬಾಹ್ಯ ರೋಗಾಣುಗಳ ವಿರುದ್ಧ ಹೇಗೆ ಹೋರಾಡಬೇಕು ಎನ್ನುವುದರ ಬಗ್ಗೆ ಲಸಿಕೆಯು ಕಲಿಸುತ್ತದೆ.

- ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ಕೆಲವೇ ಕೆಲವು ದಿನಗಳಲ್ಲಿ ವ್ಯಕ್ತಿಯು ಸೋಂಕಿಗೆ ಒಳಗಾಗಬಹುದು. ಏಕೆಂದರೆ ಲಸಿಕೆ ಪಡೆಯ ವ್ಯಕ್ತಿಯಲ್ಲಿ ಅದಾಗಲೇ ವೈರಸ್ ವಿರುದ್ಧ ಹೋರಾಡಬಲ್ಲ ರೋಗ ನಿರೋಧಕ ಶಕ್ತಿಯು ವೃದ್ಧಿ ಆಗಿರುವುದಿಲ್ಲ.

- ಕೊವಿಡ್-19 ಲಸಿಕೆ ಪಡೆದ ನಂತರದಲ್ಲೂ ಶಿಷ್ಟಾಚಾರ ಪಾಲನೆ ಮಾಡುವುದು ಕಡ್ಡಾಯ.

- ಸಾರ್ವಜನಿಕ ಪ್ರದೇಶದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ ತೊಳೆಯುವುದು ಮತ್ತು ಸ್ಯಾನಿಟೈಸರ್ ಬಳಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು.

ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯ 2ನೇ ಅಭಿಯಾನ

ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯ 2ನೇ ಅಭಿಯಾನ

ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು. ಇದೀಗ ದೇಶದಲ್ಲಿ ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದೆ. 3 ದಿನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 8,44,884 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 45 ವರ್ಷಕ್ಕಿಂತ ಮೇಲ್ಪಟ್ಟ 1,04,263 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

English summary
Explained: As You Take The Coronavirus Vaccine, Here Read Some Do’s And Don’ts Rules.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X