ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾಭೀತಿ ಇರುವವರು ಯಾವ ಆಹಾರ ಸೇವಿಸಬೇಕು?

By ಮನಸ್ವಿನಿ, ನಾರಾವಿ
|
Google Oneindia Kannada News

ಸಾಂಕ್ರಾಮಿಕ ಪಿಡುಗು ಕೊರೊನಾವೈರಸ್ ನಿಯಂತ್ರಣಕ್ಕಾಗಿ ವಿಮಾನಯಾನ, ಪ್ರವಾಸಿಗರ ಮೇಲೆ ಭಾರತ ಸರ್ಕಾರ ನಿರ್ಬಂಧ ಹೇರಿದೆ. ಸಂಶೋಧಕರು antidote ತಯಾರಿಯಲ್ಲಿ ತೊಡಗಿದ್ದಾರೆ. ಆದರೆ, ಕೊವಿಡ್ 19 ಚಿಕಿತ್ಸೆಗೆ ಸರಿಯಾದ ಚುಚ್ಚುಮದ್ದು ಅಭಿವೃದ್ಧಿಪಡಿಸಲು ತಕ್ಷಣಕ್ಕೆ ಸಾಧ್ಯವಿಲ್ಲ, ಕನಿಷ್ಠ ಒಂದೂವರೆ ವರ್ಷ ಬೇಕಾಗಬಹುದು ಎಂದು ಹಿರಿಯ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ. ಈ ನಡುವೆ ಸಾರ್ವಜನಿಕರು ತಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಮೂಲಕ ಸಾಮಾನ್ಯ ಶೀತ, ಕೆಮ್ಮು, ಜ್ವರದಿಂದ ಮುಕ್ತಿ ಹೊಂದಬಹುದು.

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಕೊರೊನಾ ವೈರಸ್ ಎನ್ನುವುದು ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುವ ಸೋಂಕಾಗಿದೆ. ಈಗ ಪ್ರಾಣಿಗಳಿಂದ ಮನುಷ್ಯನಿಗೂ ಈ ಸೋಂಕು ತಗುಲುತ್ತಿದೆ.

ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಮೊದಲು ಶೀತ ಕಾಣಿಸಿಕೊಳ್ಳುತ್ತದೆ ಕ್ರಮೇಣವಾಗಿ ತಲೆನೋವು ಕಾಣಿಸಿಕೊಂಡು ಇಡೀ ದೇಹವನ್ನು ಆವರಿಸುತ್ತದೆ. ಸಾಮಾನ್ಯ ಶೀತಕ್ಕೆ ಕಾರಣವಾಗುವ ವೈರಸ್ ರೋಗಿಯ ದೇಹ ಹೊಕ್ಕಿದ ಒಂದು ವಾರದಲ್ಲೇ ತಾನೆ ತಾನಾಗಿ ನಾಶವಾಗುತ್ತದೆ. ಅಥವಾ ತೆಗೆದುಕೊಳ್ಳುವ ಚಿಕಿತ್ಸೆ, ಆಹಾರ ಕ್ರಮದ ಮೇಲೆ ಶೀತ ಯಾವಾಗ ಕಡಿಮೆಯಾಗುತ್ತದೆ ಎಂಬುದು ನಿರ್ಧಾರವಾಗಲಿದೆ. ಆದರೆ, ಸಾರ್ಸ್ ಮಾದರಿ ಕೊರೊನಾವೈರಸ್ ನಿಂದ ಹರಡುವ ಕೊವಿಡ್ 19 ರೋಗದ ವೈರಸ್ ತಾನಾಗೇ ಸಾಯುವುದಿಲ್ಲ.

 ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ

ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ

ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು. ಮೊದಲು ಶೀತ ಕಾಣಿಸಿಕೊಳ್ಳುತ್ತದೆ ಕ್ರಮೇಣವಾಗಿ ತಲೆನೋವು ಕಾಣಿಸಿಕೊಂಡು ಇಡೀ ದೇಹವನ್ನು ಆವರಿಸುತ್ತದೆ.

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುತ್ತದೆ. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ. ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ರೋಗ ತಡೆಗಟ್ಟುವುದೇ ಪರಿಹಾರ

ರೋಗ ತಡೆಗಟ್ಟುವುದೇ ಪರಿಹಾರ

ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಈಗಾಗಲೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವವರಿಂದ ದೂರವಿರಬೇಕು. ಒಂದೊಮ್ಮೆ ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ.

ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸಿ

ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸಿ

ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವಾಗ ಒಳಗಿನಿಂದ ಸೋಂಕುಗಳನ್ನು ನಿವಾರಿಸುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ.
***

ಮೊಸರಿನಲ್ಲಿ ಪ್ರೋಬಯಾಟಿಕ್ ಅಂಶವಿದೆ

ಮೊಸರಿನಲ್ಲಿ ಪ್ರೋಬಯಾಟಿಕ್ ಅಂಶವಿದೆ

ಮೊಸರು: ಮೊಸರಿನಲ್ಲಿ ಪ್ರೋಬಯಾಟಿಕ್ ಒಂದು ಪ್ರಮುಖ ಅಂಶವಿದ್ದು, ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫಾರ್ಮೇಶನ್ (ಎನ್‌ಸಿಬಿಐ) ಯಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಮಕ್ಕಳಲ್ಲಿ ಆರ್‌ಟಿಐ (ಉಸಿರಾಟದ ಪ್ರದೇಶದ ಸೋಂಕುಗಳು) ಕಡಿಮೆಯಾಗಲು ಪ್ರೋಬಯಾಟಿಕ್ ಸೇವನೆಯು ಸಹ ಉತ್ತಮ.

ತುಳಸಿ ಬಹಳ ಪ್ರಯೋಜನಕಾರಿ ಸಸ್ಯ

ತುಳಸಿ ಬಹಳ ಪ್ರಯೋಜನಕಾರಿ ಸಸ್ಯ

ತುಳಸಿ ಬಹಳ ಪ್ರಯೋಜನಕಾರಿ ಸಸ್ಯವಾಗಿದೆ. ಪ್ರತಿದಿನ ಒಂದು ಟೀ ಸ್ಪೂನ್ ತುಳಸಿಯನ್ನು ಸೇವಿಸುವುದರಿಂದ ನಿಮ್ಮ ರೋಗ ನಿರೋಧಕ ಶಕ್ತಿ ಸುಧಾರಿಸುತ್ತದೆ. ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

ಅಣಬೆ, ಶುಂಠಿ

ಅಣಬೆ, ಶುಂಠಿ

ಅಣಬೆ: ಅಣಬೆ ಬೀಟಾ-ಗ್ಲುಕನ್‌ಗಳಿಂದ ತುಂಬಿದ್ದು, ನಿಮ್ಮ ರೋಗನಿರೋಧಕ ಶಕ್ತಿಗೆ ಇದು ಉತ್ತಮವಾಗಿದೆ.

ಶುಂಠಿ:ಶುಂಠಿಯಲ್ಲಿ ಅನೇಕ ಆಂಟಿ-ವೈರಲ್ ಅಂಶಗಳಿವೆ ಮತ್ತು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.


ದಾಲ್ಚಿನ್ನಿ : ದಾಲ್ಚಿನ್ನಿಯಲ್ಲಿ ಆಂಟಿವೈರಲ್ ಗುಣಲಕ್ಷಣಗಳನ್ನು ಹೊಂದಿದೆ.ದಾಲ್ಚಿನ್ನಿ ವೈರಲ್ ಸೋಂಕುಗಳಿಂದ ದೇಹವನ್ನು ರಕ್ಷಿಸಬಹುದು ಹಾಗೂ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅರಿಶಿನ, ದಾಳಿಂಬ್ರೆ

ಅರಿಶಿನ, ದಾಳಿಂಬ್ರೆ

ಅರಿಶಿನ ಬಳಕೆ ದಿನನಿತ್ಯವಿರಲಿ, ಹಾಲಿಗೆ ಅರಿಶಿನ ಹಾಕಿಕೊಂಡು ಕುಡಿಯಬಹುದು. ದಾಳಿಂಬ್ರೆ ಜ್ಯೂಸ್, ನೆಲ್ಲಿಕಾಯಿ ಸೇವನೆ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ.

English summary
Coronavirus: Improve your immunity, Consume healthy food suggests Health Department. Here are some of the tips.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X