G.T. Devegowda Profile: ಚಾಮುಂಡೇಶ್ವರಿ ಗೆಲುವಿನ ಸರದಾರ ಜಿ.ಟಿ ದೇವೇಗೌಡರ ವ್ಯಕ್ತಿ ಪರಿಚಯ
ಬೆಂಗಳೂರು, ಮಾರ್ಚ್ 6: ಜಿ.ಟಿ ದೇವೇಗೌಡ ಅವರು ಕರ್ನಾಟಕ ರಾಜಕೀಯದ ಜೆಡಿಎಸ್ ನಾಯಕರಲ್ಲಿ ಪ್ರಮುಖರು. ಗುಂಗ್ರಾಲ್ ಛತ್ರ ತಮ್ಮೇಗೌಡ ದೇವೇಗೌಡ ಎನ್ನುವ ಇವರು ಜಿ.ಟಿ ದೇವೇಗೌಡ ಎನ್ನುವ ಹೆಸರಿನಲ್ಲಿಯೇ ಜನಪ್ರಿಯರಾಗಿದ್ದರು. ಇವರು ತಿಮ್ಮೇಗೌಡರ ಪುತ್ರನಾಗಿ ನವೆಂಬರ್ 25, 1949ರಲ್ಲಿ ಮೈಸೂರು ಜಿಲ್ಲೆಯ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಜನಿಸಿದರು.
ಮೂಲತಃ ಕೃಷಿಕ ಮನೆತನದವರಾದ ಗುಂಗ್ರಾಲ್ ಛತ್ರ ತಮ್ಮೇಗೌಡ ದೇವೇಗೌಡರು ಎಂಟನೇ ತರಗತಿಯವರೆಗೂ ಶಿಕ್ಷಣ ಮುಗಿಸಿದ್ದು, ಬಳಿಕ ಸಂಪೂರ್ಣ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೊದಲಿನಿಂದಲೇ ನಾಯಕತ್ವ ಗುಣ ಹೊಂದಿರುವ ಜಿ.ಟಿ ದೇವೇಗೌಡರು, ನಂತರದ ದಿನಗಳಲ್ಲಿ ರಾಜಕೀಯದತ್ತ ಒಲವು ತೋರಿದರು. 1970ರ ದಶಕದಲ್ಲಿ ಕೃಷಿ ಪ್ರಾಥಮಿಕ ಸಹಕಾರ ಸಂಘದ ಕಾರ್ಯದರ್ಶಿಯಾಗಿ ರಾಜಕೀಯ ಜೀವನ ಆರಂಭಿಸಿದರು.

ಬಳಿಕ ರಾಜಕೀಯದಲ್ಲಿ ಬಹಳ ಆಸಕ್ತಿ ಬೆಳೆಸಿಕೊಂಡ ಜಿ.ಟಿ ದೇವೇಗೌಡರು, 1978ರ ಚುನಾವಣೆಯಲ್ಲಿ ಆಗಿನ ಕಾಂಗ್ರೆಸ್ ಅಭ್ಯರ್ಥಿ ಕೆಂಪೇಗೌಡರನ್ನು ಬೆಂಬಲಿಸುವ ಮೂಲಕ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಜಿ.ಟಿ ದೇವೇಗೌಡ ಅವರು 2004ರಲ್ಲಿ ಮೊದಲ ಬಾರಿಗೆ ಹುಣಸೂರಿನಿಂದ ವಿಧಾನಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಆದರೆ, ಅದೇ ವರ್ಷ ನಡೆದ ಸಂಸತ್ ಚುನಾವಣೆಯಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತರು.
ಈ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷವನ್ನು ತೊರೆದ ಜಿ.ಟಿ ದೇವೇಗೌಡರು 2007ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. 2013ರಲ್ಲಿ ಬಿಜೆಪಿಯಲ್ಲಾದ ರಾಜಕೀಯ ಬೆಳೆವಣಿಗಳ ಬಳಿಕ ಜಿ.ಟಿ.ದೇವೇಗೌಡ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೇ ನೀಡಿದರು. ಬಿ.ಎಸ್.ಯಡಿಯೂರಪ್ಪ ಬಿಜೆಪಿ ತೊರೆದ ನಂತರ ಬಿಜೆಪಿಯಲ್ಲಿ ಉಳಿಯಬೇಕೋ ಅಥವಾ ಕೆಜೆಪಿ ಸೇರುವುದೇ ಎನ್ನುವ ಗೊಂದಲದಲ್ಲಿ ಸಿಲುಕಿದ್ದ ಮಾಜಿ ಸಚಿವ ಜಿ.ಟಿ.ದೇವೇಗೌಡರು ಕೊನೆಗೂ ಒಂದು ನಿರ್ಧಾರ ಮಾಡಿ ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಸೇರ್ಪಡೆಯಾದರು.
ಈವರೆಗೂ ಹುಣಸೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ಜೆಡಿಎಸ್ ಸೇರ್ಪಡೆಗೊಂಡ ಬಳಿಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನು ಮಾಡಿದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಫರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದರು. ಇನ್ನು ಈ ಐದು ವರ್ಷಗಳ ಅವಧಿ ಮುಗಿದ ಬಳಿಕ ಎದುರಾದ 2018ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿತ್ತು.

ಮೊದಲಿನಿಂದಲೂ ಕಾಂಗ್ರೆಸ್ ಜೆಟಿಎಸ್ ನಡುವಿನ ಜಿದ್ದಾಜಿದ್ದಿಯ ಅಂಕಣವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡರ ವಿರುದ್ಧ ಸ್ಫರ್ಧಿಸಿದಾಗ ಎಲ್ಲರ ಚಿತ್ತವನ್ನು ತನ್ನಡೆಗೆ ಇರಿಸಿಕೊಂಡಿತ್ತು. ಜಿದ್ದಾಜಿದ್ದಿಯ ಪೈಪೋಟಿ ಭರ್ಜರಿ ಪ್ರಚಾರಗಳಲ್ಲಿ ಚುನಾವಣೆ ಮುಗಿದಿದ್ದು, ಕೇವಲ 37,279 ಮತಗಳನ್ನು ಗಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಿ.ಟಿ ದೇವೇಗೌಡರು 61,351 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಐತಿಹಾಸಿಕ ಗೆಲುವು ಸಾಧಿಸಿದರು.
2018ರ ವಿಧಾನಸಭಾ ಚುನಾವಣೆಯ ಬಳಿಕ ರಚನೆಗೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜಿ.ಟಿ.ದೇವೇಗೌಡರು ಕರ್ನಾಟಕದ ಉನ್ನತ ಶಿಕ್ಷಣ ಸಚಿವರಾಗಿದ್ದರು. ಮೈತ್ರಿ ಸರ್ಕಾರದ ಪಥನ ಬಳಿಕ ಶಾಸಕರಾಗಿ ತಮ್ಮ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರು ಅಭಿವೃದ್ಧಿ ಕೆಲಸಗಳತ್ತ ತೊಡಗಿಸಿಕೊಂಡಿದ್ದರು.
ಕೆಲವು ವಿಚಾರಗಳಿಂದ ಜೆಡಿಎಸ್ ವಿರುದ್ಧ ಅಸಮಾಧಾನಗೊಂಡಿದ್ದ ಜಿ.ಟಿ.ದೇವೇಗೌಡರು ಜೆಡಿಎಸ್ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನುವ ವಿಚಾರ ರಾಜಕೀಯ ವಲಯದಲ್ಲಿ ಹೆಚ್ಚಿನ ಚರ್ಚೆ ಹುಟ್ಟುಹಾಕಿತ್ತು. ಇದಕ್ಕೆ ಪುಷ್ಟಿ ಎನ್ನುವಂತೆ ಜಿ.ಟಿ ದೇವೇಗೌಡರು ಹಲವು ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಜೊತೆ ವೇದಿಕೆ ಹಂಚಿಕೊಂಡಿದ್ದರು. ಈ ಬೆಳೆವಣಿಗೆಯನ್ನು ಗಮನಿಸಿದ ಜೆಡಿಎಸ್ ಮುಖಂಡರು ಜಿ.ಟಿ.ದೇವೇಗೌಡರ ನಿವಾಸಕ್ಕೆ ತೆರಳಿ ಮನವೊಲಿಸುವ ಯತ್ನ ಮಾಡಿದ್ದರು. ಆದರೆ ಜಿ.ಟಿ ದೇವೇಗೌಡರು ತಮ್ಮ ನಿರ್ಧಾರವನ್ನು ಬದಲಾಯಿಸಿರಲಿಲ್ಲ.
ಬಳಿಕ ಮಾಜಿ ಪ್ರಧಾನಿ ದೇವೇಗೌಡರು ಜಿ.ಟಿ ದೇವೇಗೌಡರ ನಿವಾಸಕ್ಕೆ ತೆರಳಿ ಮನವೊಲಿಸಿದ್ದರು. ದೇವೇಗೌಡರ ಭೇಟಿ ಬಳಿಕ ಮನಸ್ಸು ಬದಲಾಯಿಸಿದ್ದ ಜಿ.ಟಿ ದೇವೇಗೌಡರು ಜೆಡಿಎಸ್ ಬಿಟ್ಟು ಹೋಗಲ್ಲ ಎಂದು ಕಣ್ಣೀರಿಟ್ಟಿದ್ದರು. ಮುಂದಿನ ಚುನಾವಣೆಯಲ್ಲಿ ದೇವೇಗೌಡರು ಕಂಡ ಕನಸು ನನಸು ಮಾಡುತ್ತೇವೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ. ಕುಮಾರಸ್ವಾಮಿಯವರನ್ನು ಸಿಎಂ ಮಾಡುತ್ತೇನೆ ಎನ್ನುವ ನಿರ್ಧಾರಕ್ಕೆ ಬಂದಿದ್ದು, ಸದ್ಯ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದ್ದಾರೆ.
ಇನ್ನು ಈ ಬಾರಿ ಜಿ.ಟಿ ದೇವೇಗೌಡರು ತಮ್ಮ ಪುತ್ರನನ್ನು ಚುನಾವಣಾ ಕಣಕ್ಕಿಕಿಳಿಸಲು ಸಜ್ಜಾಗಿದ್ದು, ಹರೀಶ್ ಗೌಡರ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಇನ್ನು ಜೆಟಿ. ದೇವೇಗೌಡರು https://www.facebook.com/GTDMLA/ ಫೇಸ್‌ಬುಕ್ ಖಾತೆ ಮೂಲಕ ಜನರ ಸಂಪರ್ಕದಲ್ಲಿರುತ್ತಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications