ಹಾವೇರಿ-ಗದಗ ಲೋಕಸಭಾ ಕ್ಷೇತ್ರ ಪರಿಚಯ
Recommended Video

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಹಾವೇರಿ ಜಿಲ್ಲೆ. ಕಲೆ, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ತನ್ನದೇ ಆದ ಪರಂಪರೆಯನ್ನು ಹೊಂದಿರುವ ಜಿಲ್ಲೆ ಗದಗ. ಹಾವೇರಿ ಮತ್ತು ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ರಚನೆ ಮಾಡಲಾಗಿದೆ.
ಮೊದಲು ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಇವು ಒಳಪಡುತ್ತಿದ್ದವು. 2008ರಲ್ಲಿ ಗದಗ ಜಿಲ್ಲೆಯ ಮೂರು, ಹಾವೇರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ರಚನೆ ಆಯಿತು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ 21,44,547. ಇವರಲ್ಲಿ ಶೇ 71.69ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ, ಶೇ 28.31ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಶೇ 15.38ರಷ್ಟು ಎಸ್‌ಸಿ, ಶೇ 8.07ರಷ್ಟು ಎಸ್‌ಸಿ ಸಮುದಾಯದವರು ಇದ್ದಾರೆ.
2009ರಲ್ಲಿ ಮೊದಲ ಬಾರಿಗೆ ಲೋಕಸಭಾ ಕ್ಷೇತ್ರವಾಗಿ ಹಾವೇರಿ-ಗದಗ ರಾಜ್ಯ, ದೇಶದ ಜನರಿಗೆ ಪರಿಚಯವಾಯಿತು. ಮೊದಲ ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ ಅವರು 430293 ಮತಗಳನ್ನು ಪಡೆದು ಸಂಸತ್ ಪ್ರವೇಶಿಸಿದರು.

2014ರ ಚುನಾವಣೆಯಲ್ಲಿ ಶಿವಕುಮಾರ ಉದಾಸಿ ಅವರು 566790 ಮತಗಳನ್ನು ಪಡೆದು ಕಾಂಗ್ರೆಸ್‌ನ ಸಲೀಂ ಅಹಮದ್ ಅವರನ್ನು ಸೋಲಿಸಿ 2ನೇ ಬಾರಿಗೆ ಕ್ಷೇತ್ರದಿಂದ ಆಯ್ಕೆಯಾದರು. ಈ ಬಾರಿ ಮೂರನೇ ಚುನಾವಣೆಯನ್ನು ಕ್ಷೇತ್ರ ಎದುರಿಸುತ್ತಿದೆ.
ಕ್ಷೇತ್ರದ ಒಟ್ಟು ಮತದಾರರು 15,58,749 ರೂ.ಗಳು. 8,07,076 ಪುರುಷ, 7,51,673 ಮಹಿಳಾ ಮತದಾರರು ಇದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ 11,15,968 ಜನರು ಮತದಾನ ಮಾಡಿದ್ದರು. ಇವರಲ್ಲಿ 5,95,257 ಪುರುಷರು, 5,20,711 ಮಹಿಳೆಯರು.
133 ಚರ್ಚೆಗಳಲ್ಲಿ ಶಿವಕುಮಾರ್ ಉದಾಸಿ ಅವರು ಸಂಸತ್‌ನಲ್ಲಿ ಪಾಲ್ಗೊಂಡಿದ್ದಾರೆ. ಶೇ 93ರಷ್ಟು ಹಾಜರಾತಿಯನ್ನು ಅವರು ಹೊಂದಿದ್ದಾರೆ. 2019ರ ಚುನಾವಣೆಯಲ್ಲಿಯೂ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ನಿರೀಕ್ಷೆ ಇದೆ.
ಕ್ಷೇತ್ರದ ಸಮಸ್ಯೆಗಳು : ಹಾವೇರಿ ಜಿಲ್ಲೆಯಲ್ಲಿ ವರದಾ, ಗದಗ ಜಿಲ್ಲೆಯ ಗಡಿಭಾಗದಲ್ಲಿ ತುಂಗಭದ್ರಾ ನದಿ ಹರಿಯುತ್ತದೆ. ಗದಗಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಆದರೆ, ಎರಡೂ ನದಿ ಸೇರಿಸಿದರೆ ಕ್ಷೇತ್ರಕ್ಕೆ ಸಂಪೂರ್ಣ ನೀರಾವರಿ ಸೌಲಭ್ಯವನ್ನು ಮಾಡಬಹುದು ಎಂಬುದು ರೈತರ ಆಶಯ.

ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೆಗಳು ಇಲ್ಲ. ಜನಪ್ರತಿನಿಧಿಗಳು ಅಂತವುಗಳನ್ನು ತರಲು ಪ್ರಯತ್ನ ಪಟ್ಟಿಲ್ಲ ಎಂಬ ಆರೋಪವೂ ಇದೆ. ಆಯ್ಕೆಯಾದ ಜನಪ್ರತಿನಿಧಿಗಳು ಬಂದ ಅನುದಾನ ಖರ್ಚು ಮಾಡಿದ್ದಾರೆ ಹೊರತು ಹೊಸ ಯೋಜನೆಗಳನ್ನು ತಂದಿಲ್ಲ ಎಂಬುದು ಆರೋಪ.
ಹೊಸ ರೈಲ್ವೇ ಯೋಜನೆಗಳನ್ನು ಲೋಕಸಭಾ ಕ್ಷೇತ್ರಕ್ಕೆ ತಂದಿಲ್ಲ ಎಂಬ ಆರೋಪವಿದೆ. ಕ್ಷೇತ್ರದಿಂದ ಅಕ್ಕ-ಪಕ್ಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳನ್ನು ಜಾರಿಗೊಳಿಸಿದ್ದರೆ ಸಹಾಯಕವಾಗುತ್ತಿತ್ತು ಎಂಬ ವಾದವೂ ಇದೆ.
ಹಾವೇರಿ ಹತ್ತಿರ ಸಕ್ಕರೆ ಕಾರ್ಖಾನೆ ಇದೆ. ಕಾರ್ಖಾನೆಯನ್ನು 30 ವರ್ಷಗಳ ಅವಧಿಗೆ ಖಾಸಗಿ ಅವರಿಗೆ ಗುತ್ತಿಗೆ ನೀಡಲಾಗಿದೆ. ಖಾಸಗಿ ಅವರಿಗೆ ನೀಡದೆ ರೈತರೇ ನಿರ್ವಹಣೆ ಮಾಡುವಂತೆ ಅವಕಾಶ ಮಾಡಿಕೊಟ್ಟಿದ್ದರೆ ಸಹಾಯಕವಾಗುತ್ತಿತ್ತು ಎಂಬುದು ರೈತರ ಮಾತು.

ವಿಧಾನಸಭಾ ಕ್ಷೇತ್ರಗಳು : ಶಿರಹಟ್ಟಿ, ಗದಗ, ರೋಣ, ಹಾನಗಲ್ಲ, ಹಾವೇರಿ, ಬ್ಯಾಡಗಿ, ಹಿರೇಕೇರೂರ, ರಾಣೆಬೆನ್ನೂರ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications