• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಾವೇರಿ-ಗದಗ ಲೋಕಸಭಾ ಕ್ಷೇತ್ರ ಪರಿಚಯ

|
   Lok Sabha Election 2019 : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

   ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಹಾವೇರಿ ಜಿಲ್ಲೆ. ಕಲೆ, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ತನ್ನದೇ ಆದ ಪರಂಪರೆಯನ್ನು ಹೊಂದಿರುವ ಜಿಲ್ಲೆ ಗದಗ. ಹಾವೇರಿ ಮತ್ತು ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ರಚನೆ ಮಾಡಲಾಗಿದೆ.

   ಮೊದಲು ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಇವು ಒಳಪಡುತ್ತಿದ್ದವು. 2008ರಲ್ಲಿ ಗದಗ ಜಿಲ್ಲೆಯ ಮೂರು, ಹಾವೇರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ರಚನೆ ಆಯಿತು.

   ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ 21,44,547. ಇವರಲ್ಲಿ ಶೇ 71.69ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ, ಶೇ 28.31ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಶೇ 15.38ರಷ್ಟು ಎಸ್‌ಸಿ, ಶೇ 8.07ರಷ್ಟು ಎಸ್‌ಸಿ ಸಮುದಾಯದವರು ಇದ್ದಾರೆ.

   ತುಮಕೂರು ಲೋಕಸಭೆ: ಕಾಂಗ್ರೆಸ್ ಕೋಟೆಯಲ್ಲಿ ಬಿಜೆಪಿಗೊಂದು ಭರವಸೆಯ ಚುಕ್ಕಿ

   2009ರಲ್ಲಿ ಮೊದಲ ಬಾರಿಗೆ ಲೋಕಸಭಾ ಕ್ಷೇತ್ರವಾಗಿ ಹಾವೇರಿ-ಗದಗ ರಾಜ್ಯ, ದೇಶದ ಜನರಿಗೆ ಪರಿಚಯವಾಯಿತು. ಮೊದಲ ಚುನಾವಣೆಯಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ ಅವರು 430293 ಮತಗಳನ್ನು ಪಡೆದು ಸಂಸತ್ ಪ್ರವೇಶಿಸಿದರು.

   2014ರ ಚುನಾವಣೆಯಲ್ಲಿ ಶಿವಕುಮಾರ ಉದಾಸಿ ಅವರು 566790 ಮತಗಳನ್ನು ಪಡೆದು ಕಾಂಗ್ರೆಸ್‌ನ ಸಲೀಂ ಅಹಮದ್ ಅವರನ್ನು ಸೋಲಿಸಿ 2ನೇ ಬಾರಿಗೆ ಕ್ಷೇತ್ರದಿಂದ ಆಯ್ಕೆಯಾದರು. ಈ ಬಾರಿ ಮೂರನೇ ಚುನಾವಣೆಯನ್ನು ಕ್ಷೇತ್ರ ಎದುರಿಸುತ್ತಿದೆ.

   ಕ್ಷೇತ್ರದ ಒಟ್ಟು ಮತದಾರರು 15,58,749 ರೂ.ಗಳು. 8,07,076 ಪುರುಷ, 7,51,673 ಮಹಿಳಾ ಮತದಾರರು ಇದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ 11,15,968 ಜನರು ಮತದಾನ ಮಾಡಿದ್ದರು. ಇವರಲ್ಲಿ 5,95,257 ಪುರುಷರು, 5,20,711 ಮಹಿಳೆಯರು.

   133 ಚರ್ಚೆಗಳಲ್ಲಿ ಶಿವಕುಮಾರ್ ಉದಾಸಿ ಅವರು ಸಂಸತ್‌ನಲ್ಲಿ ಪಾಲ್ಗೊಂಡಿದ್ದಾರೆ. ಶೇ 93ರಷ್ಟು ಹಾಜರಾತಿಯನ್ನು ಅವರು ಹೊಂದಿದ್ದಾರೆ. 2019ರ ಚುನಾವಣೆಯಲ್ಲಿಯೂ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ನಿರೀಕ್ಷೆ ಇದೆ.

   ದಾವಣಗೆರೆ ಲೋಕಸಭಾ ಕ್ಷೇತ್ರದ ಪರಿಚಯ

   ಕ್ಷೇತ್ರದ ಸಮಸ್ಯೆಗಳು : ಹಾವೇರಿ ಜಿಲ್ಲೆಯಲ್ಲಿ ವರದಾ, ಗದಗ ಜಿಲ್ಲೆಯ ಗಡಿಭಾಗದಲ್ಲಿ ತುಂಗಭದ್ರಾ ನದಿ ಹರಿಯುತ್ತದೆ. ಗದಗಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಆದರೆ, ಎರಡೂ ನದಿ ಸೇರಿಸಿದರೆ ಕ್ಷೇತ್ರಕ್ಕೆ ಸಂಪೂರ್ಣ ನೀರಾವರಿ ಸೌಲಭ್ಯವನ್ನು ಮಾಡಬಹುದು ಎಂಬುದು ರೈತರ ಆಶಯ.

   ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೆಗಳು ಇಲ್ಲ. ಜನಪ್ರತಿನಿಧಿಗಳು ಅಂತವುಗಳನ್ನು ತರಲು ಪ್ರಯತ್ನ ಪಟ್ಟಿಲ್ಲ ಎಂಬ ಆರೋಪವೂ ಇದೆ. ಆಯ್ಕೆಯಾದ ಜನಪ್ರತಿನಿಧಿಗಳು ಬಂದ ಅನುದಾನ ಖರ್ಚು ಮಾಡಿದ್ದಾರೆ ಹೊರತು ಹೊಸ ಯೋಜನೆಗಳನ್ನು ತಂದಿಲ್ಲ ಎಂಬುದು ಆರೋಪ.

   ಹೊಸ ರೈಲ್ವೇ ಯೋಜನೆಗಳನ್ನು ಲೋಕಸಭಾ ಕ್ಷೇತ್ರಕ್ಕೆ ತಂದಿಲ್ಲ ಎಂಬ ಆರೋಪವಿದೆ. ಕ್ಷೇತ್ರದಿಂದ ಅಕ್ಕ-ಪಕ್ಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆಗಳನ್ನು ಜಾರಿಗೊಳಿಸಿದ್ದರೆ ಸಹಾಯಕವಾಗುತ್ತಿತ್ತು ಎಂಬ ವಾದವೂ ಇದೆ.

   ಲೋಕಸಭೆ ಚುನಾವಣೆ 2019: ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಪರಿಚಯ

   ಹಾವೇರಿ ಹತ್ತಿರ ಸಕ್ಕರೆ ಕಾರ್ಖಾನೆ ಇದೆ. ಕಾರ್ಖಾನೆಯನ್ನು 30 ವರ್ಷಗಳ ಅವಧಿಗೆ ಖಾಸಗಿ ಅವರಿಗೆ ಗುತ್ತಿಗೆ ನೀಡಲಾಗಿದೆ. ಖಾಸಗಿ ಅವರಿಗೆ ನೀಡದೆ ರೈತರೇ ನಿರ್ವಹಣೆ ಮಾಡುವಂತೆ ಅವಕಾಶ ಮಾಡಿಕೊಟ್ಟಿದ್ದರೆ ಸಹಾಯಕವಾಗುತ್ತಿತ್ತು ಎಂಬುದು ರೈತರ ಮಾತು.

   ವಿಧಾನಸಭಾ ಕ್ಷೇತ್ರಗಳು : ಶಿರಹಟ್ಟಿ, ಗದಗ, ರೋಣ, ಹಾನಗಲ್ಲ, ಹಾವೇರಿ, ಬ್ಯಾಡಗಿ, ಹಿರೇಕೇರೂರ, ರಾಣೆಬೆನ್ನೂರ.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Lok Sabha Elections 2019 : Gadag Haveri Lok Sabha constituency is one of the 28 Lok Sabha constituencies in Karnataka. BJP's Shiva Kumar Udasi sitting MP of the constituency.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more