ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಉದ್ಯಮಿ ಗೌತಮ್ ಅದಾನಿಗೆ 5ನೇ ಸ್ಥಾನ
ನವದೆಹಲಿ, ಏಪ್ರಿಲ್ 26: ಭಾರತದ ಉದ್ಯಮಿ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಜಗತ್ತಿನ ಐದನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಪ್ರಸಿದ್ಧ ಹೂಡಿಕೆದಾರ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.
ಫೋರ್ಬ್ಸ್ ವರದಿಯ ಪ್ರಕಾರ, 59 ವರ್ಷ ವಯಸ್ಸಿನ ಅದಾನಿ ಶುಕ್ರವಾರದ ಮಾರುಕಟ್ಟೆಯ ಅಂತ್ಯದ ವೇಳೆಗೆ 123.7 ಶತಕೋಟಿ ಡಾಲರ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ, ಬಫೆಟ್ ಅವರು 121.7 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿದ್ದಾರೆ.
ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಕೈಗಾರಿಕೋದ್ಯಮಿ ಗೌತಮ್ ಅದಾನಿ 2022 ರಲ್ಲಿ ತನ್ನ ಸಂಪತ್ತಿಗೆ 43 ಬಿಲಿಯನ್ ಡಾಲರ್ ಅನ್ನು ಸೇರ್ಪಡೆಯಾಗಿದೆ. ಇದು ಅವರ ಒಟ್ಟು ಆದಾಯದ ಮೌಲ್ಯವನ್ನು ಶೇ.56.2ರಷ್ಟು ಹೆಚ್ಚಿಸಿದೆ.

ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಅದಾನಿಗೆ 5ನೇ ಸ್ಥಾನ:
ಪ್ರಸಿದ್ಧ ಹೂಡಿಕೆದಾರ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿರುವ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. ಹಾಗಿದ್ದರೆ ಇವರಿಗಿಂತ ಮುಂದಿರುವ ನಾಲ್ಕು ಶ್ರೀಮಂತರ ಹೆಸರು ಮತ್ತು ಆಸ್ತಿ ಮೌಲ್ಯ ಎಷ್ಟಿದೆ ಎಂಬುದರ ಪಟ್ಟಿ ಇಲ್ಲಿದೆ.
ಜಗತ್ತಿನ ಟಾಪ್-5 ಶ್ರೀಮಂತರ ಪಟ್ಟಿ
1. ಎಲೋನ್ ಮಸ್ಕ್ 269.7 ಶತಕೋಟಿ ಡಾಲರ್
2. ಜೆಫ್ ಬೆಜೋಸ್ 170.2 ಶತಕೋಟಿ ಡಾಲರ್

3. ಬರ್ನಾರ್ಡ್ ಅರ್ನಾಲ್ಟ್ 167.9 ಶತಕೋಟಿ ಡಾಲರ್
4. ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ 130.2 ಶತಕೋಟಿ ಡಾಲರ್
5. ಗೌತಮ್ ಅದಾನಿ 123.70 ಶತಕೋಟಿ ಡಾಲರ್
ಅದಾನಿ ಗ್ರೂಪ್ ಬಗ್ಗೆ ತಿಳಿಯಿರಿ:
ಫೋರ್ಬ್ಸ್ ಪಟ್ಟಿ ಪ್ರಕಾರ ಜಗತ್ತಿನ ಟಾಪ್-5 ಶ್ರೀಮಂತರ ಪಟ್ಟಿಗೆ ಸೇರ್ಪಡೆ ಆಗಿರುವ ಗೌತಮ್ ಅದಾನಿ ಅವರು ಅದಾನಿ ಗ್ರೂಪ್‌ನ ಅಧ್ಯಕ್ಷರು ಮತ್ತು ಸಂಸ್ಥಾಪಕರಾಗಿದ್ದಾರೆ. ಈ ಅದಾನಿ ಗ್ರೂಪ್ ವಿಮಾನ ನಿಲ್ದಾಣಗಳಿಂದ ಬಂದರುಗಳವರೆಗೆ ಮತ್ತು ವಿದ್ಯುತ್ ಉತ್ಪಾದನೆಯಿಂದ ವಿತರಣೆಯವರೆಗೆ ಹಲವಾರು ವ್ಯವಹಾರಗಳನ್ನು ನಡೆಸುತ್ತದೆ. ಇದು ಅದಾನಿ ಎಂಟರ್‌ಪ್ರೈಸಸ್, ಅದಾನಿ ಗ್ರೀನ್ ಎನರ್ಜಿ ಮತ್ತು ಅದಾನಿ ಪವರ್ ಸೇರಿದಂತೆ ಭಾರತದಲ್ಲಿ ಆರು ಸಾರ್ವಜನಿಕವಾಗಿ ವ್ಯಾಪಾರಿ ಕಂಪನಿಗಳನ್ನು ಹೊಂದಿದೆ.
ಅದಾನಿ ಗ್ರೂಪ್ ಕಳೆದ ಏಪ್ರಿಲ್ 08 ರಂದು ಅಬುಧಾಬಿ ಮೂಲದ ಇಂಟರ್ ನ್ಯಾಷನಲ್ ಹೋಲ್ಡಿಂಗ್ ಕಂಪನಿ PJSC (IHC)ಯು ಮೂರು ಅದಾನಿ ಪೋರ್ಟ್ ಪೋಲಿಯೊ ಕಂಪನಿಗಳಲ್ಲಿ 2 ಬಿಲಿಯನ್ ಡಾಲರ್ ಹೂಡಿಕೆ ಮಾಡಿದೆ. ಅದಾನಿ ಗ್ರೀನ್ ಎನರ್ಜಿ (AGEL), ಅದಾನಿ ಟ್ರಾನ್ಸ್ಮಿಷನ್ (ATL), ಮತ್ತು ಅದಾನಿ ಎಂಟರ್ಪ್ರೈಸಸ್ (AEL).
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications