Goa India TV-Ground Zero Exit Poll 2022: ಕಾಂಗ್ರೆಸ್‌ಗೆ ಬಹುಮತ

ಪಣಜಿ, ಮಾರ್ಚ್ 07: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಅಧಿಕಾರ ಪಡೆಯಲು ಮ್ಯಾಜಿಕ್ ನಂಬರ್ 21.

ಗೋವಾದ 40 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ. ಸೋಮವಾರ ಸಂಜೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಕಳೆದ ಬಾರಿಯೂ ಗೋವಾದಲ್ಲಿ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿತ್ತು.

India TV-Ground Zero ಗೋವಾ ಚುನಾವಣೆ ಬಗ್ಗೆ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಕಾಂಗ್ರೆಸ್ 20 ರಿಂದ 25 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಸಮೀಕ್ಷೆ ವರದಿ ಹೇಳಿದೆ.

Goa Election India TV-Ground Zero Exit Poll Results 2022 In Kannada

ಬಿಜೆಪಿ 10 ರಿಂದ 14 ಸ್ಥಾನಗಳಲ್ಲಿ ಜಯಗಳಿಸಲಿದೆ. ಟಿಎಂಸಿ-ಎಂಜಿಪಿ ಮೈತ್ರಿಕೂಟ ಚುನಾವಣೆಯಲ್ಲಿ 3 ರಿಂದ 5, ಎಎಪಿ 1 ಮತ್ತು ಇತರರು 1 ರಿಂದ 3 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಅಂದಾಜಿಸಿದೆ.

Goa Election India TV-Ground Zero Exit Poll Results 2022 In Kannada

ಗೋವಾದಲ್ಲಿ 2017ರ ಚುನಾವಣೆಯಲ್ಲಿ ಬಿಜೆಪಿ 13, ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ವಿಫಲವಾಗಿ ಪ್ರತಿಪಕ್ಷದಲ್ಲಿ ಕುಳಿತಿತ್ತು. ವಿವಿಧ ಪಕ್ಷ, ಪಕ್ಷೇತರರ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿತ್ತು.

India TV-Ground Zero ಚುನಾವಣಾ ಸಮೀಕ್ಷೆ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟಿವಿ ಜೊತೆ ಮಾತನಾಡಿದ ಅವರು, "ಗೋವಾದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಡಬಲ್ ಇಂಜಿನ್‌ ಸರ್ಕಾರ ರಚನೆಯಾಗಲಿದೆ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+