Goa NesX Polsstart Exit Poll 2022: ಗೋವಾದಲ್ಲಿ ಅತಂತ್ರ ಫಲಿತಾಂಶ?
ಪಣಜಿ, ಮಾರ್ಚ್ 07: ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 21. ಚುನಾವಣೋತ್ತರ ಸಮೀಕ್ಷೆಗಳು ಸೋಮವಾರ ಪ್ರಕಟವಾಗಿವೆ.
NesX Polsstart ಗೋವಾ ರಾಜ್ಯದ ಚುನಾವಣೆ ಬಗ್ಗೆ ಚುನಾವಣೋತ್ತರ ಸಮೀಕ್ಷೆ ನಡೆಸಿತ್ತು. ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಸೋಮವಾರ ಸಂಜೆ ಪ್ರಕಟವಾದ ಸಮೀಕ್ಷೆ ಹೇಳಿದೆ. ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ.
2017ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 13, ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು. ವಿವಿಧ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಸರ್ಕಾರ ರಚನೆ ಮಾಡಿತ್ತು.

2022ರ ಚುನಾವಣೆಯಲ್ಲಿ ಗೋವಾದಲ್ಲಿ ಬಿಜೆಪಿ 17-19 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾಂಗ್ರೆಸ್ 11 ರಿಂದ 13 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದೆ.

ಆಮ್ ಆದ್ಮಿ ಪಕ್ಷ ಗೋವಾದಲ್ಲಿ 1 ರಿಂದ 4 ಸ್ಥಾನಗಳಲ್ಲಿ ಜಯಗಳಿಸಲಿದೆ. ಇತರರು 2 ರಿಂದ 7 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಅಂದಾಜಿಸಿದೆ.
ಮತಗಳಿಕೆ ಎಷ್ಟು?; NesX Polsstart ಗೋವಾ ರಾಜ್ಯದಲ್ಲಿ ಬಿಜೆಪಿ ಶೇ 36.6ರಷ್ಟು ಮತ ಪಡೆಯಲಿದೆ. ಕಾಂಗ್ರೆಸ್ 28.4ರಷ್ಟು ಮತ, ಎಎಪಿ ಶೇ 7.2ರಷ್ಟು ಮತ್ತು ಇತರರು ಶೇ 27.8ರಷ್ಟು ಮತ ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.












Click it and Unblock the Notifications