Goa Times Now Veto Exit Poll 2022: ಯಾರಿಗೂ ಬಹುಮತವಿಲ್ಲ
ಪಣಜಿ, ಮಾರ್ಚ್ 07: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.
ಗೋವಾ ವಿಧಾನಸಭೆ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ನಡೆಯಲಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 21. ಸೋಮವಾರ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ.
Times Now Veto Your Voice ಗೋವಾ ರಾಜ್ಯದ ಚುನಾವಣೆ ಬಗ್ಗೆ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಕಾಂಗ್ರೆಸ್ 16 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾದರೂ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಸಮೀಕ್ಷೆ ಹೇಳಿದೆ.


ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 14 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ 2ನೇ ಸ್ಥಾನಗಳಿಸಲಿದೆ. ಎಎಪಿ ಪಕ್ಷ 4ರಲ್ಲಿ ಇತರರು 6 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಅಂದಾಜಿಸಿದೆ.
ಎಕ್ಸಿಟ್ ಪೋಲ್ ಸಮೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್, "ನಾವು ಗೋವಾದಲ್ಲಿ ಎಲ್ಲರಿಗೂ ಅಚ್ಚರಿ ಉಂಟು ಮಾಡಲಿದ್ದೇವೆ. ಕಾಂಗ್ರೆಸ್ & ಬಿಜೆಪಿ ಬಳಿಕ ರಾಜ್ಯದಲ್ಲಿ ಮಾನ್ಯತೆ ಪಡೆದ ಪಕ್ಷ ಎಎಪಿ" ಎಂದು ಹೇಳಿದರು.
ಚುನಾವಣೋತ್ತರ ಸಮೀಕ್ಷೆ ಬಗ್ಗೆ ಪ್ರತಿಕ್ರಿಯೆ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, "ಬಿಜೆಪಿ ಬಹುಮತ ಪಡೆಯುವಷ್ಟು ಸ್ಥಾನವನ್ನುಗಳಿಸಲಿದೆ. ನಮಗೆ ಚುನಾವಣೋತ್ತರ ಮೈತ್ರಿಯ ಅವಶ್ಯಕತೆ ಇಲ್ಲ" ಎಂದರು.












Click it and Unblock the Notifications