ಸಮೀಕ್ಷೆ; ಗೋವಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ!
ಪಣಜಿ, ಜನವರಿ 28; ಗೋವಾ ವಿಧಾನಸಭೆ ಚುನಾವಣೆ ಬಗ್ಗೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ನಡೆದಿದೆ. ಫೆಬ್ರವರಿ 14ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಅಂದಾಜಿಸಲಾಗಿದೆ. ಆದರೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ ಎಂದು ಸಮೀಕ್ಷೆ ಹೇಳಿದೆ.
Zee News-DesignBoxed 40 ಸದಸ್ಯ ಬಲದ ಗೋವಾ ವಿಧಾನಸಭೆ ಚುನಾವಣೆ ಕುರಿತು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿವೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 21.
ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಪ್ರಸ್ತುತ ರಾಜ್ಯದ ಆಡಳಿತ ಪಕ್ಷವಾಗಿರುವ ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯಲಿದೆ. ಬಿಜೆಪಿ 15-19 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.
ಗೋವಾದ ಮುಖ್ಯಮಂತ್ರಿ ಹುದ್ದೆಗೆ ಶೇ 30ರಷ್ಟು ಜನರು ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಪ್ರಮೋದ್ ಸಾವಂತ್ ಬೆಂಬಲಿಸಿದ್ದಾರೆ. ಕಾಂಗ್ರೆಸ್ ನಾಯಕ ದಿಗಂಬರ್ ಕಾಮತ್ ಪ್ರಬಲ ಪೈಪೋಟಿ ನೀಡಿದ್ದು ಶೇ 27ರಷ್ಟು ಜನ ಬೆಂಬಲ ಪಡೆದಿದ್ದಾರೆ.

ಯಾವ ಪಕ್ಷಕ್ಕೆ ಎಷ್ಟು ಸೀಟು
ಈ ಬಾರಿಯ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 15-19 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾಂಗ್ರೆಸ್ 14 ರಿಂದ 18 ಸ್ಥಾನಗಳಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 17, ಬಿಜೆಪಿ 13 ಸ್ಥಾನಗಳಲ್ಲಿ ಗೆದ್ದಿತ್ತು. ಬಿಜೆಪಿ ದೊಡ್ಡ ಪಕ್ಷವಾದರೂ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ಈ ಬಾರಿಯೂ ಸಹ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಸಮೀಕ್ಷೆ ಹೇಳಿದೆ.

ಎಎಪಿ, ಇತರ ಪಕ್ಷಗಳು
ಗೋವಾ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿರುವ ಚುನಾವಣೆಯಲ್ಲಿ 0-2 ಸ್ಥಾನ ಪಡೆಯಬಹುದು ಎಂದು ಸಮೀಕ್ಷೆ ಹೇಳಿದೆ. ಗೋವಾದ ಪ್ರಾದೇಶಿಕ ಪಕ್ಷ ಎಂಜಿಪಿ 2-5, ಜಿಎಫ್‌ಪಿ 1-2 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಅಂದಾಜಿಸಿದೆ. ಈ ಬಾರಿ ಚುನಾವಣಾ ಕಣದಲ್ಲಿ ಟಿಎಂಸಿ ಪಕ್ಷದ ಅಭ್ಯರ್ಥಿಗಳಿದ್ದಾರೆ. ಆದರೆ ಪಕ್ಷ ಎಷ್ಟು ಸ್ಥಾನ ಗೆಲ್ಲಲಿದೆ. ಎಂದು ಸಮೀಕ್ಷೆ ಹೇಳಿಲ್ಲ.

ಯಾರಿಗೆ ಎಷ್ಟು ಮತಗಳು?
ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಜೊತೆಗೆ ಶೇ 31ರಷ್ಟು ಮತಗಳನ್ನು ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಪಕ್ಷ ಶೇ 29, ಎಎಪಿ ಮತ್ತು ಎಂಜಿಪಿ ಶೇ 11ರಷ್ಟು ಮತಗಳನ್ನು ಪಡೆಯಲಿವೆ. ಜಿಎಫ್‌ಪಿ ಶೇ 3 ಮತ್ತು ಇತರರು ಶೇ 15ರಷ್ಟು ಮತಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.
ದಕ್ಷಿಣ ಗೋವಾದಲ್ಲಿ 17 ಸ್ಥಾನಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್ 6-8 ಸ್ಥಾನಗಳನ್ನು ಪಡೆಯಲಿವೆ. ಎಎಪಿ 0-1 ಸ್ಥಾನಗಳಲ್ಲಿ ಜಯಗಳಿಸಲಿದೆ. ಇತರರು 0-1 ಸ್ಥಾನಗಳನ್ನು ಪಡೆಯಲಿವೆ ಎಂದು ಅಂದಾಜಿಸಲಾಗಿದೆ.
ಮತಗಳಿಕೆ ಪ್ರಮಾಣದಲ್ಲಿ ಕಾಂಗ್ರೆಸ್ ಶೇ 32, ಬಿಜೆಪಿ ಶೇ 23ರಷ್ಟು, ಎಎಪಿ ಶೇ 13, ಎಂಜಿಪಿ ಶೇ 13, ಎಂಜಿಪಿ ಶೇ 3 ಮತ್ತು ಜಿಎಫ್‌ಪಿ ಶೇ 16ರಷ್ಟು ಮತಗಳಿಸಲಿವೆ ಎಂದು ಸಮೀಕ್ಷೆ ಹೇಳಿದೆ.

ಮುಖ್ಯಮಂತ್ರಿ ಅಭ್ಯರ್ಥಿ ಯಾರು?
ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ಪ್ರಮೋದ್ ಸಾವಂತ್ ಉತ್ತಮ ಆಯ್ಕೆ ಎಂದು ಶೇ 30ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್‌ನ ದಿಗಂಬರ್ ಕಾಮತ್ ಪರವಾಗಿ ಶೇ 27ರಷ್ಟು ಜನರು ಮತದಾನ ಮಾಡಿದ್ದಾರೆ. ಬಿಜೆಪಿಯ ವಿಶ್ವಜಿತ್ ರಾಣೆ ಪರವಾಗಿ ಶೇ 11ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications