Government Employees Strike; ಸಂಜೆ ತನಕ ಕಾಲಾವಕಾಶ ಕೊಟ್ಟ ಸಿಎಸ್‌

ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಸರ್ಕಾರಿ ನೌಕರರ ಜೊತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸಭೆ ನಡೆಸಿದರು.

ಬೆಂಗಳೂರು, ಫೆಬ್ರವರಿ 28; ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಷ್ಕರ ನಡೆಸದಂತೆ ಸರ್ಕಾರಿ ನೌಕರರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಂಗಳವಾರ ಮಧ್ಯಾಹ್ನ ಮುಷ್ಕರಕ್ಕೆ ಕರೆ ನೀಡಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

Government Employees Strike Chief Secretary Meeting With Employees Union

7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಸರ್ಕಾರ ಸ್ಪಷ್ಟವಾದ ಲಿಖಿತ ಭರವಸೆ ನೀಡಬೇಕು. 2023-24ನೇ ಸಾಲಿನ ಬಜೆಟ್‌ನಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಯಾವುದೇ ಭರವಸೆ ಕೊಡದಿರುವ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ವಂದಿತಾ ಶರ್ಮಾ ನೌಕರರ ಮನವೊಲಿಕೆಗೆ ಪ್ರಯತ್ನ ನಡೆಸಿದರು. ಆದರೆ ನೌಕರರು ಸಹ ತಮ್ಮ ಪಟ್ಟನ್ನು ಬಿಡಲಿಲ್ಲ.

ಅಂತಿಮವಾಗಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ಮುಷ್ಕರ ವಾಪಸ್ ಪಡೆಯುವ ಕುರಿತು ಸಂಜೆಯೊಳಗೆ ತೀರ್ಮಾನ ಕೈಗೊಳ್ಳುವಂತೆ ಸಲಹೆ ನೀಡಿ ಸಭೆಯನ್ನು ಮುಕ್ತಾಯಗೊಳಿಸಿದ್ದಾರೆ. ಆದರೆ ಸಭೆಯ ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ, "ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯುವುದಿಲ್ಲ" ಎಂದು ಘೋಷಣೆ ಮಾಡಿದರು.

"ಮುಷ್ಕರ ಮುಂದುವರೆಸುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹೇಳಿದ್ದೇವೆ. ಆದರೆ ಅವರು ಸಮಯಾವಕಾಶ ಕೇಳಿದರು. ನಾವು ಹೋರಾಟ ಮುಂದುವರೆಸುತ್ತೇವೆ. ಸರ್ಕಾರ ಯಾವತ್ತೂ ಕರೆದರೂ ಸಭೆಗೆ ಬರುತ್ತೇವೆ. ನಾವೆಲ್ಲ ಒಟ್ಟಾಗಿದ್ದೇವೆ, ಸಾಮೂಹಿಕ ನಾಯಕತ್ವದಲ್ಲಿ ಹೋರಾಟ ನಡೆಸುತ್ತೇವೆ. ಮುಷ್ಕರ ಮಾಡೋದು ನಿಶ್ಚಿತವಾಗಿದೆ. ವಿಳಂಬ ಧೋರಣೆಯಾಗಿದೆ ಸರ್ಕಾರ ಇದನ್ನು ಸರಿಪಡಿಸಬೇಕು. ಅಮಾನತ್ತಿಗೂ ಹೆದರುವುದಿಲ್ಲ, ಎಸ್ಮಾ ಜಾರಿಗೆ ನಾವು ಹೆದರುವುದಿಲ್ಲ. ಸಿಎಂ ಯಾವುದೇ ಸಭೆ ನನನ್ನೂ ಕರೆದಿಲ್ಲ" ಎಂದು ಸಿ. ಎಸ್. ಷಡಕ್ಷರಿ ಹೇಳಿದರು.

cs shadakshari

"ಜನರಿಗೆ ತೊಂದರೆ ಆಗದಂತೆ ಮುಷ್ಕರ ಮಾಡುತ್ತೇವೆ. ನಮ್ಮ ಹೋರಾಟ ಅನಿವಾರ್ಯ ಹಂತಕ್ಕೆ ಬಂದಿದೆ‌‌. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಾರೆ. ಜನರು ಸಹ ನಮ್ಮ ಹೋರಾಟಕ್ಕೆ ಸಹಕಾರ ನೀಡಬೇಕು. ಬುಧವಾರ ನಡೆಯುವ ಉಪರಾಷ್ಟ್ರಪತಿ ಕಾರ್ಯಕ್ರಮಕ್ಕೆ ಮಾತ್ರ ಚಾಲಕರನ್ನು ನೀಡುತ್ತೇವೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾರೂ ಹೋಗುವುದಿಲ್ಲ. ಲಿಖಿತ ಭರವಸೆಗೆ ನಾವು ರಾಜಿಯಾಗಲ್ಲ. ಸರ್ಕಾರಿ ಆದೇಶ ಆದರೆ ಮಾತ್ರ ನಾವು ಕೆಲಸಕ್ಕೆ ಹಾಜರಾಗುತ್ತೇವೆ" ಎಂದು ಸ್ಪಷ್ಟಪಡಿಸಿದರು.

"ಸಾರ್ವಜನಿಕರಿಗೆ ಮನವಿ ಮಾಡುತ್ತೇನೆ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ನಮ್ಮ ಬೇಡಿಕೆಗೆ ಸ್ಪಂದಿಸಲು ಹೆಚ್ಚುವರಿಯಾಗಿ ಶೇ 16ರಷ್ಟು ವೆಚ್ಚವಾಗಲಿದೆ. ನಮಗೆ ಹೆಚ್ಚುವರಿ ತೆರಿಗೆ ಸಂಗ್ರಹ ಮಾಡುವ ಜವಾಬ್ದಾರಿ ನೀಡಲಿ. ದುಡಿಯುವ ಸಮಯ ಹೆಚ್ಚಳ ಮಾಡಲಿ" ಎಂದರು.

ನೌಕರರ ಬೇಡಿಕೆಗಳು

* ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 5 ವರ್ಷಗಳಿಗೊಮ್ಮೆ ವೇತನ ಭತ್ಯೆಗಳನ್ನು ಪರಿಷ್ಕರಿಸಿ ನೀಡಬೇಕಾಗಿದ್ದು, ಅದರಂತೆ ದಿನಾಂಕ 01-07-2022 ರಿಂದ 7ನೇ ವೇತನ ಆಯೋಗದ ಆರ್ಥಿಕ ಸೌಲಭ್ಯಗಳನ್ನು ಜಾರಿಗೊಳಿಸಬೇಕಾಗಿತ್ತು. ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ಕೃತ ವರದಿಯನ್ನು ಸರ್ಕಾರಕ್ಕೆ ಹಾಗೂ ವೇತನ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಸರ್ಕಾರ ಇದುವರೆವಿಗೂ ಅರ್ಹ ದಿನಾಂಕದಿಂದ ಸೌಲಭ್ಯ ನೀಡುವ ಯಾವುದೇ ಘೋಷಣೆ ಮಾಡಿರುವುದಿಲ್ಲ. ಆದ್ದರಿಂದ ನಿಲುವು ಸ್ಪಷ್ಟಪಡಿಸಬೇಕು.

* ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ 01/07/2022ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ. 40 ಫಿಟ್‌ಮೆಂಟ್ ಸೌಲಭ್ಯವನ್ನು ದಿನಾಂಕ 01/07/2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು.

* ಎನ್. ಪಿ. ಎಸ್. ರದ್ದುಗೊಳಿಸಿ ನೌಕರರನ್ನು ಓ. ಪಿ. ಎಸ್. ವ್ಯಾಪ್ತಿಗೆ ತರುವುದು. ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಂತೆ ಹಳೆ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿಯೂ ಜಾರಿಗೊಳಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+