Get Updates
Get notified of breaking news, exclusive insights, and must-see stories!

'ಉಕ್ಕಿನ ಮನುಷ್ಯ' ಸರ್ದಾರ್ ಪಟೇಲ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ಯಾರು?

Recommended Video

      Sardar Vallabhai Patel Birth Anniversary : ಜಗತ್ತಿನ ಅತೀ ಎತ್ತರದ ಸರ್ದಾರ್ ಪ್ರತಿಮೆ ನಿರ್ಮಿಸಿದ ಶಿಲ್ಪಿ ಯಾರು?

      ಅಹಮದಾಬಾದ್, ಅಕ್ಟೋಬರ್ 28: ಸ್ವತಂತ್ರ ಭಾರತದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ನೆನಪಿಗಾಗಿ 'ಏಕತೆಯ ಪ್ರತಿಮೆ'(statue of unity) ಯನ್ನು ನಿರ್ಮಿಸುವ ಗುತ್ತಿಗೆ ಪಡೆದಿದ್ದು ಲಾರ್ಸನ್ ಅಂಡ್ ಟರ್ಬೋ (ಎಲ್ ಅಂಡ್ ಟಿ) ಕಂಪೆನಿ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಪ್ರತಿಮೆ ನಿರ್ಮಿಸಿದ ಶಿಲ್ಪಿ ಯಾರು ಎಂಬುದು ಹೆಚ್ಚು ಪ್ರಚಲಿತವಾಗಿಲ್ಲ.

      ವಿಶ್ವದ ಅತಿ ಎತ್ತರದ ಪ್ರತಿಮೆ ನಿರ್ಮಿಸಿರುವ ಶಿಲ್ಪಿ ರಾಮ್ ವಾನ್ಜಿ ಸುತಾರ್. ಸುತಾರ್ ವಿನ್ಯಾಸದ ಈ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31ರಂದು ಲೋಕಾರ್ಪಣೆ ಮಾಡಲಿದ್ದಾರೆ. ಅಂದು ಸರ್ದಾರ್ ಪಟೇಲ್ ಅವರ 143ನೇ ಜನ್ಮದಿನ ಮಹೋತ್ಸವವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಗಿದೆ.

      ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್‌ರ ಈ ಬೃಹತ್ ಪ್ರತಿಮೆಯು 182 ಮೀಟರ್ (ಸುಮಾರು 597 ಅಡಿ) ಎತ್ತರವಿರುವುದು ಹಾಗೂ ಅದನ್ನು ದಕ್ಷಿಣ ಗುಜರಾತ್‌ನಲ್ಲಿ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರಿನಲ್ಲಿ ನಿರ್ಮಿಸಲಾಗಿದೆ.

      ರಾಮ್ ವಾನ್ಜಿ ಸುತಾರ್ ಅವರ ಹಿನ್ನಲೆ

      ರಾಮ್ ವಾನ್ಜಿ ಸುತಾರ್ ಅವರ ಹಿನ್ನಲೆ

      ಮಹಾರಾಷ್ಟ್ರದ ಧೂಳಿಯಾ ಜಿಲ್ಲೆಯ ಗೊಂಡುರ್ ನಲ್ಲಿ 19 ಫೆಬ್ರವರಿ 1925ರಂದು ಸುತಾರ್ ಜನಿಸಿದರು. 1952ರಲ್ಲಿ ಪ್ರಮೀಳಾ ಅವರನ್ನು ವರಿಸಿದರು. ದಂಪತಿಯ ಪುತ್ರ ಅನಿಲ್ ಕೂಡಾ ಶಿಲ್ಪಿಯಾಗಿದ್ದಾರೆ.

      1999ರಲ್ಲಿ ಪದ್ಮಶ್ರೀ, 2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. 2018ರ ಅಕ್ಟೋಬರ್ ನಲ್ಲಿ ಟಾಗೋರ್ ಪ್ರಶಸ್ತಿ ಸಿಕ್ಕಿದೆ.

      ಚಿತ್ರ ಕೃಪೆ: wikibio

      ಪ್ರತಿಮೆ ಆರಂಭದಲ್ಲಿ ನೀಡಿದ್ದ ಖರ್ಚು ವೆಚ್ಚದ ಲೆಕ್ಕ

      ಪ್ರತಿಮೆ ಆರಂಭದಲ್ಲಿ ನೀಡಿದ್ದ ಖರ್ಚು ವೆಚ್ಚದ ಲೆಕ್ಕ

      ಇದರಲ್ಲಿ 1347 ಕೋಟಿ ರೂ. ಮುಖ್ಯ ಪ್ರತಿಮೆಗೆ ಖರ್ಚಾಗಲಿದೆ. 235 ಕೋಟಿ ರೂ. ವಸ್ತು ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ ಗೆ ತಗುಲಲಿದೆ. 83 ಕೋಟಿ ರೂ. ಹಣವು ಪ್ರತಿಮೆ ಮತ್ತು ಸೇತುವೆಗೆ ಸಂಪರ್ಕ ಕಲ್ಪಿಸಲು ಖರ್ಚಾಗಲಿದೆ. ಎಲ್ ಅಂಡ್ ಟಿ ಸಂಸ್ಥೆ 15 ವರ್ಷಗಳ ಕಾಲ ನಿರ್ವಹಣೆ ಹೊಣೆ ಹೊರಲಿದ್ದು, ಇದಕ್ಕಾಗಿ 657 ಕೋಟಿ ರೂ. ಹಣವನ್ನು ಪಡೆಯಲಿದೆ.

      ಒಟ್ಟು ಯೋಜನಾ ವೆಚ್ಚ 2500 ಕೋಟಿ ಮೀರಿದೆ

      ಒಟ್ಟು ಯೋಜನಾ ವೆಚ್ಚ 2500 ಕೋಟಿ ಮೀರಿದೆ

      75 ಸಾವಿರ ಕ್ಯೂಬಿಕ್ ಮೀಟರ್ ಕಾಂಕ್ರಿಟ್, 5700 ಮೆಟ್ರಿಕ್ ಟನ್ ಕಬ್ಬಿಣ, 18,500 ಉಕ್ಕು, 22,500 ಕಂಚು ಸೇರಿದಂತೆ ಮತ್ತಿತರ ವಸ್ತುಗಳನ್ನು ಬಳಸಿಕೊಳ್ಳಲಾಗುತ್ತದೆ. 3400 ನೌಕರರು, 250 ಇಂಜಿನಿಯರ್ ಗಳು ಸಾಧು ಬೇಟ್ ದ್ವೀಪದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

      ಗುಜರಾತಿನ ನರ್ಮದಾ ಜಿಲ್ಲೆಯ ಕೇವದಿಯಾ ಪ್ರದೇಶದಲ್ಲಿರುವ ಸರ್ದಾರ್ ಸರೋವರ್ ಡ್ಯಾಮ್ ಪಕ್ಕ ಪ್ರತಿಮೆ ನಿರ್ಮಿಸಲಾಗುತ್ತಿದೆ. ಒಟ್ಟು ಯೋಜನಾ ವೆಚ್ಚ 2,063 ಕೋಟಿ ರು ಗೂ ಅಧಿಕ ಎಂದು ಅಂದಿನ ಆನಂದಿ ಬೇನ್ ಅವರ ಗುಜರಾತ್ ಸರ್ಕಾರದ ಅಧಿಕೃತ ವೆಬ್ ತಾಣಗಳು ಈ ಹಿಂದೆ ಘೋಷಿಸಿತ್ತು

      ರಾಷ್ಟ್ರೀಯ ಏಕತಾ ದಿನ ಆಚರಣೆ

      ರಾಷ್ಟ್ರೀಯ ಏಕತಾ ದಿನ ಆಚರಣೆ

      ದೇಶದ ಏಕತೆಗಾಗಿ ಸರ್ಧಾರ್ ಪಟೇಲ್ ಅವರು ನಡೆಸಿದ ಹೋರಾಟ ಮತ್ತು ಅವರ ಸಂದೇಶವನ್ನು ಸಾರುವುದು ಈ ದಿನಾಚರಣೆಯ ಉದ್ದೇಶ. ಈ ನಿಟ್ಟಿನಲ್ಲಿ ಪಟೇಲ್ ಅವರಿಗೆ ಸೂಕ್ತ ಗೌರವ ನೀಡಲು ಅವರ ಜನ್ಮದಿನವನ್ನು "ರಾಷ್ಟ್ರೀಯ ಏಕತಾ ದಿನ"ವನ್ನಾಗಿ ಆಚರಿಸಲು ಪ್ರಧಾನಿ ನಿರ್ಧರಿಸಿದ್ದಾರೆ.

      ಅಕ್ಟೋಬರ್ 31ರಂದು ಮೋದಿಯವರು ಬೀದಿಗಿಳಿದು ಭಾಷಣಗಳನ್ನ ಮಾಡುವುದರ ಜೊತೆಗೆ ರೇಡಿಯೋದಲ್ಲೂ ಭಾಷಣ ಮಾಡಲಿದ್ದಾರೆ. ಅಂದು ಸಂಜೆ ಪೊಲೀಸ್ ಪೆರೇಡನ್ನೂ ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ರಾಷ್ಟ್ರೀಯ ಮಟ್ಟದಲ್ಲಿ ಏಕತಾ ಮ್ಯಾರಥಾನ್ ನಡೆಸಲಾಗುತ್ತದೆ, ಎನ್ ಸಿಸಿ, ಹೋಮ್ ಗಾರ್ಡ್, ಗೃಹರಕ್ಷಕ ದಳ ಮುಂತಾದ ಪಡೆಗಳ ಪಥ ಸಂಚಲನ ಕೂಡಾ ಇರುತ್ತದೆ. ಇದರಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

      ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್

      ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್

      ಗುಜರಾತಿನ ಕರಮ್ ಸಂದ್ ನಲ್ಲಿ 1875ರ ಅಕ್ಟೋಬರ್ 31ರಂದು ಜನಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕಾನೂನು ಪದವಿ ಪಡೆದಿದ್ದರೂ ಗಾಂಧೀಜಿ ಅವರ ಕರೆಗೆ ಓಗೊಟ್ಟು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಧುಮುಕಿ ಸ್ವತಂತ್ರ ಭಾರತಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು.

      ಸ್ವಾತಂತ್ಯ ಸಿಕ್ಕ ನಂತರ ರಾಜ್ಯಗಳ ಪುನರ್ ವಿಂಗಡನೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ಸುಮಾರು 500ಕ್ಕೂ ಅಧಿಕ ರಾಜಮನೆತನ ಅಡಿಯಲ್ಲಿದ್ದ ರಾಜ್ಯಗಳನ್ನು ನೆಹರೂ ಸರ್ಕಾರದ ಸುಪರ್ದಿಗೆ ತಂದರು. ಇದಲ್ಲದೆ ಗುಜರಾತಿನ ಖೇದ, ಬೊರ್ಸದ್, ಬಾರ್ಡೋಲಿಗಳಲ್ಲಿ ರೈತರ ಪರ ಹೋರಾಟದಲ್ಲೂ ಪಟೇಲ್ ಅವರು ಪಾಲ್ಗೊಂಡಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+