ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಬಂಗಾರದ ಮೂಗುತಿ ಉಚಿತ!

|
Google Oneindia Kannada News

ನವದೆಹಲಿ, ಏಪ್ರಿಲ್ 07: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಹೆಚ್ಚುತ್ತಿದೆ. ಕೊವಿಡ್-19 ಲಸಿಕೆ ವಿತರಣೆ ಮೂಲಕ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯ ಸೂಚನೆ ನೀಡಿದೆ.

ಕೊರೊನಾವೈರಸ್ ಲಸಿಕೆ ಪಡೆಯುವುದಕ್ಕೆ ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆಯಿಂದ ಅಡ್ಡಪರಿಣಾಮದ ಭೀತಿ ಜನರನ್ನು ಕಾಡುತ್ತಿದೆ. ದೇಶದ ಗ್ರಾಮೀಣ ಪ್ರದೇಶದ ಜನರಲ್ಲಿ ನಮಗೇಕೆ ಲಸಿಕೆ ಎನ್ನುವ ಮನೋಭಾವ ಹೆಚ್ಚಾಗುತ್ತಿದೆ. ಇದರ ಮಧ್ಯೆಯೂ ದಾಖಲೆ ಪ್ರಮಾಣದಲ್ಲಿ ಲಸಿಕೆ ವಿತರಣೆ ನೀಡಲಾಗುತ್ತಿದೆ.

ಕೊರೊನಾ ಲಸಿಕೆ ವಿತರಣೆಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿದ ಭಾರತ ಕೊರೊನಾ ಲಸಿಕೆ ವಿತರಣೆಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿದ ಭಾರತ

ಗುಜರಾತ್‌ನಲ್ಲಿ ಕೊರೊನಾವೈರಸ್ ಲಸಿಕೆ ಬಗ್ಗೆ ಜನರಲ್ಲಿ ಇರುವ ತಪ್ಪು ಭಾವನೆಗಳನ್ನು ಹೋಗಲಾಡಿಸಬೇಕು. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಲು ಮುಂದೆ ಬರುವಂತೆ ಎಂಬ ದೃಷ್ಟಿಯಿಂದ ವಿಭಿನ್ನ ಹಾಗೂ ವಿಶೇಷ ಉಡುಗೊರೆ ನೀಡಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡವರಿಗೆ 'ಚಿನ್ನ'ದ ಉಡುಗೊರೆ ನೀಡುತ್ತಿರುವುದು ಇದೀಗ ಸಾಕಷ್ಟು ಸದ್ದು ಮಾಡಿದೆ.

ಲಸಿಕೆ ಪಡೆಯುವುದಕ್ಕೆ ಸಮುದಾಯದ ಪ್ರೋತ್ಸಾಹ

ಲಸಿಕೆ ಪಡೆಯುವುದಕ್ಕೆ ಸಮುದಾಯದ ಪ್ರೋತ್ಸಾಹ

ಗುಜರಾತ್‌ನ ರಾಜಕೋಟ್‌ನಲ್ಲಿ ಕೊರೊನಾವೈರಸ್ ಲಸಿಕೆ ಬಗ್ಗೆ ಪ್ರೋತ್ಸಾಹ ಮೂಡಿಸುವ ಉದ್ದೇಶದಿಂದ ಗೋಲ್ಡ್ ಸ್ಮಿತ್ ಸಮುದಾಯವು ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಕೊವಿಡ್-19 ಲಸಿಕೆ ಹಾಕಿಸಿಕೊಂಡ 751 ಮಹಿಳೆಯರಿಗೆ ಚಿನ್ನದ ಮೂಗುತಿಯನ್ನು ಉಡುಗೊರೆಯಾಗಿ ನೀಡಲಾಗಿದೆ. ಅದೇ ರೀತಿ ಲಸಿಕೆ ಪಡೆದ 580 ಪುರುಷರಿಗೆ ಹ್ಯಾಂಡ್ ಬ್ಲೆಂಡರ್‌ಗಳನ್ನು ನೀಡಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

ಗುಜರಾತ್‌ನಲ್ಲಿ ಲಸಿಕೆ ಜೊತೆ ಉಡುಗೊರೆ ಉಚಿತ

ಗುಜರಾತ್‌ನಲ್ಲಿ ಲಸಿಕೆ ಜೊತೆ ಉಡುಗೊರೆ ಉಚಿತ

ದೇಶಾದ್ಯಂತ ಏಪ್ರಿಲ್ 1ರಂದು 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾವೈರಸ್ ಲಸಿಕೆ ನೀಡುವ ಯೋಜನೆ ಘೋಷಿಸಲಾಯಿತು. ಅಂದಿನಿಂದ ಸಾರ್ವಜನಿಕರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮತ್ತು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಲಸಿಕೆ ಪಡೆದವರಿಗೆ ಉಡುಗೊರೆ ಉಚಿತ ಎಂಬ ಯೋಜನೆ ಪರಿಚಯಿಸಲಾಗಿದೆ. ಇದರ ಜೊತೆಗೆ ಗುಜರಾತ್ ಮೂಲದ ಖಾಸಗಿ ಕಂಪನಿಯೊಂದು ತನ್ನ ಸಂಸ್ಥೆ ಸಿಬ್ಬಂದಿಗೆ ಒಂದು ವಾರಗಳ ಕಾಲ ಉಚಿತವಾಗಿ ಕೊರೊನಾವೈರಸ್ ಲಸಿಕೆ ವಿತರಣೆಯ ಅಭಿಯಾನವನ್ನು ನಡೆಸಿತ್ತು.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಪಡೆದವರೆಷ್ಟು ಮಂದಿ?

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಪಡೆದವರೆಷ್ಟು ಮಂದಿ?

ದೇಶದಲ್ಲಿ ಪ್ರತಿನಿತ್ಯ ಸರಾಸರಿ 30,93,861 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 81 ದಿನಗಳಲ್ಲಿ 8,70,77,474 ಜನರಿಗೆ ಲಸಿಕೆ ನೀಡಲಾಗಿದೆ. ಮೊದಲ ಹಂತದಲ್ಲಿ 89,60,966 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 53,77,011 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಎರಡನೇ ಹಂತದಲ್ಲಿ 97,30,304 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 42,68,788 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ನಾಲ್ಕನೇ ಹಂತದ ಅಭಿಯಾನ

ಭಾರತದಲ್ಲಿ ನಾಲ್ಕನೇ ಹಂತದ ಅಭಿಯಾನ

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 2,00,51,197 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 3,96,769 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 3,44,18,802 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 8,61,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಕಥೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಕಥೆ

ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ ಮತ್ತೊಂದು ದಾಖಲೆ ಬರೆದಿದೆ. ದೇಶದಲ್ಲಿ ಒಂದೇ ದಿನ 1,15,736 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 59,856 ಸೋಂಕಿತರು ಗುಣಮುಖರಾಗಿದ್ದು, 630 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ಈವರೆಗೂ 1,17,92,135 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 8,43,473 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
To Encourage People To Take Covid-19 Vaccines, 751 Women Were Given Gold Nose Pins While 580 Men Were Given Hand Blenders For Taking The Coronavirus Jabs In Rajkot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X