ಹರ್ಯಾಣ ಚುನಾವಣೆ; ಎಬಿಪಿ-ಸಿವೋಟರ್ ಸಮೀಕ್ಷೆ ಫಲಿತಾಂಶ
ಚಂಡೀಗಢ್, ಅಕ್ಟೋಬರ್ 21 : ಹರ್ಯಾಣ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. 90 ಕ್ಷೇತ್ರಗಳಲ್ಲಿ ಬಿಜೆಪಿ 72ರಲ್ಲಿ ಗೆಲುವು ಸಾಧಿಸಲಿದೆ ಎಂದು ಎಬಿಪಿ-ಸಿವೋಟರ್ ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಿತು. ಶೇ 61.92ರಷ್ಟು ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಹರ್ಯಾಣದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ.

ಎಬಿಪಿ-ಸಿವೋಟರ್ ಸಮೀಕ್ಷೆ ಪ್ರಕಾರ ಹರ್ಯಾಣದಲ್ಲಿ ಬಿಜೆಪಿ 72, ಕಾಂಗ್ರೆಸ್ 8 ಮತ್ತು ಇತರ ಪಕ್ಷಗಳು 10 ಕ್ಷೇತ್ರಗಳಲ್ಲಿ ಜಯಗಳಿಸಲಿವೆ. ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಹರ್ಯಾಣದಲ್ಲಿ ಬಿಜೆಪಿ ಶೇ 44, ಕಾಂಗ್ರೆಸ್ ಶೇ 28, ಜೆಜೆಪಿ 17 ಮತ್ತು ಇತರರು ಶೇ 11ರಷ್ಟು ಮತಗಳಿಕೆಯನ್ನು ಪಡೆಯಲಿವೆ.
ಹರ್ಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿವೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು ಗಮನಿಸಿದರೆ ಬಿಜೆಪಿ ಮೈತ್ರಿಕೂಟ 63, ಕಾಂಗ್ರೆಸ್-ಎನ್‌ಸಿಪಿ 16 ಮತ್ತು ಇತರರು 11 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ.












Click it and Unblock the Notifications