ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಪರಿಚಯ

|
Google Oneindia Kannada News

ಲಿಂಗಾಯತ ಸಮುದಾಯದ ಪ್ರಭಾವ ಹೊಂದಿರುವ ಹಾವೇರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಹಿರೇಕೆರೂರು. ತರಕಾರಿ ಬೆಳೆಗಳಿಗೆ ಪ್ರಸಿದ್ಧಿ ಪಡೆದಿರುವ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ.

ಹೆಗ್ಗೇರಿಕೆರೆ ಹಿರೇಕೆರೂರು ಕ್ಷೇತ್ರದ ಪ್ರಮುಖ ಆಕರ್ಷಣೆಯಾಗಿದೆ. ಕೆರೆಯ ಸಮೀಪವಿರುವ ದುರ್ಗಾ ದೇವಿಯ ದೇವಾಲಯಕ್ಕೆ ಅಪಾರವಾದ ಭಕ್ತರಿದ್ದಾರೆ. ಇತಿಹಾಸ ಹೇಳುವಂತೆ ಮರಾಠರು ಆಳ್ವಿಕೆ ನಡೆಸುವಾಗ ದುರ್ಗಾ ದೇವಿಗೆ ಆಭರಣಗಳನ್ನು ನೀಡಿದ್ದಾರೆ.

ಹಾವೇರಿ ಜಿಲ್ಲೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಹಾವೇರಿ ಜಿಲ್ಲೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

2004ರಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಬಿ. ಸಿ. ಪಾಟೀಲ್ ಸರ್ಕಾರಿ ಉದ್ಯೋಗ ಬಿಟ್ಟು ಜೆಡಿಎಸ್‌ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದರು. ಆಗ ವಿಧಾನಸಭಾ ಕ್ಷೇತ್ರ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಮುಂದುವರೆದ ಕೋಳಿವಾಡ, ಸಚಿವ ಆರ್.ಶಂಕರ್ ಮಾತಿನ ಸಮರಮುಂದುವರೆದ ಕೋಳಿವಾಡ, ಸಚಿವ ಆರ್.ಶಂಕರ್ ಮಾತಿನ ಸಮರ

Haveri District Hirekerur Assembly Constituency Profile

ಹಿರೇಕೆರೂರು ಕ್ಷೇತ್ರದ ಪ್ರಭಾವಿ ಲಿಂಗಾಯತ ನಾಯಕ ಬಿ. ಸಿ. ಪಾಟೀಲ್. 2004, 2008 ಮತ್ತು 2018ರ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಸಿದ್ದರಾಮಯ್ಯ ಆಪ್ತರಾದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ಎದುರಾಗಿದೆ.

2018ರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದ ಏಕೈಕ ಕ್ಷೇತ್ರ ಹಿರೇಕೆರೂರು. ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಪಕ್ಷಕ್ಕಿದೆ. ಜಿಲ್ಲೆಯಲ್ಲಿ ಯಡಿಯೂರಪ್ಪ ಪ್ರಭಾವ ಹೆಚ್ಚಿದ್ದು ಕ್ಷೇತ್ರ ಕಳೆದುಕೊಳ್ಳುವ ಭೀತಿ ಕಾಂಗ್ರೆಸ್‌ನಲ್ಲಿದೆ.

ಏಲಕ್ಕಿ ನಾಡು ಹಾವೇರಿಯಲ್ಲಿ ಗೆದ್ದು ಬೀಗಿದ ಬಿಜೆಪಿಏಲಕ್ಕಿ ನಾಡು ಹಾವೇರಿಯಲ್ಲಿ ಗೆದ್ದು ಬೀಗಿದ ಬಿಜೆಪಿ

2004ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಬಿ. ಸಿ. ಪಾಟೀಲ್ 2008ರಲ್ಲಿ ಕಾಂಗ್ರೆಸ್‌ನಿಂದ ಗೆದ್ದರು. 2013ರ ಚುನಾವಣೆಯಲ್ಲಿ ಕೆಪಿಜೆಪಿಯ ಯು. ಬಿ. ಬಣಕಾರ್ ವಿರುದ್ಧ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ 94,238 ಪುರುಷರು ಹಾಗೂ 88554 ಜನ ಮಹಿಳೆಯರು ನಾಲ್ಕು ಜನ ಇತರರು ಸೇರಿದಂತೆ 1,82,796 ಮತದಾರರು ಇದ್ದಾರೆ.

2018ರ ಚುನಾವಣೆಯಲ್ಲಿ ಬಿ. ಸಿ. ಪಾಟೀಲ್ 72,461 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯ ಉಮೇಶ್‌ ಬಣಕಾರ್ 71,906 ಮತಗಳನ್ನು ಪಡೆದು ಸೋಲು ಕಂಡಿದ್ದರು. 3597 ಮತಗಳನ್ನು ಜೆಡಿಎಸ್ ಪಕ್ಷ ಪಡೆದಿತ್ತು. ಕ್ಷೇತ್ರದಲ್ಲಿ ಜೆಡಿಎಸ್‌ಗೆ ನೆಲೆಯೇ ಇಲ್ಲ.

555 ಮತಗಳಿಂದ ಯು. ಬಿ. ಬಣಕಾರ್ ಕಳೆದ ಚುನಾವಣೆಯಲ್ಲಿ ಸೋತಿದ್ದರು. ಈಗ ಅನರ್ಹಗೊಂಡಿರುವ ಶಾಸಕ ಬಿ. ಸಿ. ಪಾಟೀಲ್ ಬಿಜೆಪಿಗೆ ಬರುವುದು ಬೇಡ, ಅವರಿಗೆ ಉಪ ಚುನಾವಣೆ ಟಿಕೆಟ್ ನೀಡಬಾರದು ಎಂದು ಬಣಕಾರ್ ಮತ್ತು ಇತರ ಸ್ಥಳಿಯ ನಾಯಕರು ಬಿಜೆಪಿ ನಾಯಕರನ್ನು ಒತ್ತಾಯಿಸುತ್ತಿದ್ದಾರೆ.

English summary
By election schedule announced for Haveri district Hirekerur assembly seat. Know about candidates list, by election results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X