ತಲೆಸುಡುವ ಬಿಸಿಲಲ್ಲಿ ಓಡಾಡುವ ಮುನ್ನ ಎಚ್ಚರ: ಇಲ್ಲಿದೆ ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ !
ಸಾಮಾನ್ಯವಾಗಿ ಬೇಸಿಗೆಯ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ತೀವ್ರಗತಿಯಲ್ಲಿ ಹರಡುತ್ತಿರುತ್ತವೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಿ ತಮ್ಮ ಆರೋಗ್ಯದ ಬಗ್ಗೆ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯತ್ತಲೂ ನಿಗಾ ವಹಿಸುವುದು ಅಗತ್ಯವಾಗಿದೆ.
ಬೇಸಿಗೆಯ ಕಾಲ ಆರಂಭವಾಗಿರುವುದರಿಂದ ಬಿಸಿಲಿನ ತಾಪ ಹೆಚ್ಚಾಗುತ್ತಾ ಹೋಗುತ್ತಿದೆ. ಹಾಗೆಂದು ಬಿಸಿಲಿಗೆ ಹೆದರಿ ತಣ್ಣಗೆ ಕೂರುವಂತೆಯೂ ಇಲ್ಲ. ಪ್ರತಿಯೊಬ್ಬರೂ ದೈನಂದಿನ ಕೆಲಸಗಳನ್ನು ಮಾಡಲೇ ಬೇಕಾಗಿದೆ. ಆದರೂ ತಮ್ಮ ನಿತ್ಯದ ಕೆಲಸಗಳ ನಡುವೆ ಬಿಸಿಲಿನಿಂದ ಆಗಬಹುದಾದ ಕೆಲವು ತೊಂದರೆಗಳನ್ನು ಅರಿತು ಒಂದಷ್ಟು ಮುಂಜಾಗ್ರತಾ ಕ್ರಮಕೈಗೊಳ್ಳುವುದು ಜಾಣತನವಾಗಲಿದೆ.
ಎಲ್ಲ ಕಾಲಗಳಲ್ಲಿಯೂ ನಾವು ಕೆಲಸ ಮಾಡಲೇ ಬೇಕಾಗುತ್ತದೆ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಬೇಸಿಗೆಯಲ್ಲಿ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಕಾಡಿದರೂ ಅಚ್ಚರಿಯಿಲ್ಲ. ಹೀಗಾಗಿ ಆ ಸಮಸ್ಯೆಗಳು ನಮ್ಮನ್ನು ಕಾಡದಂತೆ ನೋಡಿಕೊಳ್ಳಬೇಕಾದರೆ ಕೆಲವೊಂದು ಮುಂಜಾಗ್ರತೆ ವಹಿಸುವುದು ಒಳ್ಳೆಯದು.
ಮನೆಯಿಂದ ಹೊರಗೆ ಹೋಗಿ ಕೆಲಸ ಮಾಡುವವರು, ಬಿಸಿಲಲ್ಲಿ ಓಡಾಡುವವರು, ಬಿಸಿಲಲ್ಲಿ ನಿಂತು ಶ್ರಮದ ಕೆಲಸವನ್ನು ಮಾಡುವವರು ಒಂದಷ್ಟು ಎಚ್ಚರಿಕೆ ಮತ್ತು ಮಾರ್ಗೋಪಾಯಗಳನ್ನು ಮಾಡಿಕೊಂಡರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಸಾಮಾನ್ಯವಾಗಿ ಬೇಸಿಗೆಯ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ತೀವ್ರಗತಿಯಲ್ಲಿ ಹರಡುತ್ತಿರುತ್ತವೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಿ ತಮ್ಮ ಆರೋಗ್ಯದ ಬಗ್ಗೆ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯತ್ತಲೂ ನಿಗಾ ವಹಿಸುವುದು ಅಗತ್ಯವಾಗಿದೆ.

ಹಣ್ಣಿನ ರಸ, ಪಾನಕಗಳನ್ನು ಸೇವಿಸಿ
ಬೇಸಿಗೆಯ ದಿನಗಳಲ್ಲಿ ನಮಗೆ ನಾವೇ ಮಾಡಿಕೊಳ್ಳಬಹುದಾದ ಕೆಲವೊಂದು ಕ್ರಮಗಳಿದ್ದು ಅದನ್ನು ಸದಾ ಗಮನದಲ್ಲಿಟ್ಟುಕೊಂಡರೆ ಒಳ್ಳೆಯದು. ಅದು ಏನೆಂದರೆ ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು, ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಬೇಕು, ಆಗಿಂದಾಗ್ಗೆ ನಿಧಾನವಾಗಿ ಧಾರಾಳಾವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಬೇಕು.
ಹಣ್ಣಿನ ರಸ, ಪಾನಕಗಳನ್ನು ಸೇವಿಸಬೇಕು. (ಕಾರ್ಬೊನೇಟೆಡ್ ಪಾನೀಯಗಳನ್ನು ವರ್ಜಿಸಿ ಕಾಫಿ, ಟೀ ಇತ್ಯಾದಿ ಆದಷ್ಟೂ ಕಡಿಮೆ ಕುಡಿಯಬೇಕು), ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತ್ರದಿಂದ ಬೆವರನ್ನು ಒರೆಸಬೇಕು. ನೀರು ಮಜ್ಜಿಗೆ, ಎಳನೀರು ಕುಡಿಯಬಹುದು. ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂತಿರುವ ಪಾದರಕ್ಷೆ ಧರಿಸಬೇಕು.

ದೇಹವನ್ನು ಅತಿಯಾಗಿ ತಕ್ಷಣ ತಂಪು ಮಾಡಬಾರದು
ಒಂದು ವೇಳೆ ಬಿಸಿಲಿನಲ್ಲಿ ಓಡಾಡುತ್ತಿದ್ದಾಗ ಬಿಸಿಲ ಝಳಕ್ಕೆ ಸಿಲುಕಿ ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡ ಬಡಿಸಿದಲ್ಲಿ ಕೂಡಲೇ ಅವರನ್ನು ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ, ಕೆಳಗೆ ಮಲಗಿಸಿ, ಕಾಲುಗಳನ್ನು ಮೇಲಕ್ಕೆತ್ತಿ ಅವರ ಹಣೆ, ಕತ್ತು, ಪಾದ ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಬೇಕು. (ತಂಪಾದ ಅಥವಾ ಐಸ್ ನೀರಿನಿಂದ ಒರೆಸಬಾರದು) ಅವರಿಗೆ ನಿಧಾನವಾಗಿ ಸ್ವಲ್ಪ ಸಕ್ಕರೆ, ಉಪ್ಪು ಬೆರೆತ ನೀರನ್ನು ಕುಡಿಸಬೇಕು.
ಆಘಾತಕ್ಕೊಳಗಾದ ವ್ಯಕ್ತಿಯ ಬಟ್ಟೆ, ಪಾದರಕ್ಷೆಗಳನ್ನು ಸಡಿಲಿಸಿ ತೆಗೆಯಬೇಕು. ತಂಪಾದ ನೆರಳಿರುವ ಜಾಗಕ್ಕೆ ಸ್ಥಳಾಂತರಿಸಿ ಗಾಳಿ ಬೀಸಬೇಕು. ತಣ್ಣಗಿನ ನೀರನ್ನು ವ್ಯಕ್ತಿಯ ಮೇಲೆ ಸಿಂಪಡಿಸುವುದು, ಯಾವುದೇ ಔಷಧ ನೀಡಬಾರದು, ದೇಹವನ್ನು ಅತಿಯಾಗಿ ತಕ್ಷಣ ತಂಪು ಮಾಡಬಾರದು. ಪ್ರಜ್ಞೆ ಬಂದ ನಂತರ ನಿಧಾನವಾಗಿ ಶುದ್ಧವಾದ ನೀರನ್ನು ಸ್ವಲ್ಪ ಸ್ವಲ್ಪವಾಗಿ ಸೇವಿಸಲು ನೀಡಬೇಕು. ಇವುಗಳು ಪ್ರಥಮ ಚಿಕಿತ್ಸೆಯಾಗಿದ್ದು, ನಂತರ ಆ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ನೀಡಬಹುದಾಗಿದೆ.

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ
ಬೇಸಿಗೆಯಲ್ಲಿ ವಿವಿಧ ಕಾರಣಕ್ಕೆ ಸಾಂಕ್ರಾಮಿಕ ಕಾಯಿಲೆಗಳು ಹರಡಬಹುದು. ಆ ಪೈಕಿ ಜಾಂಡೀಸ್, ಪೋಲಿಯೋ, ಕಾಲರಾ, ಕರುಳುಬೇನೆ, ವಿಷಮ ಶೀತ ಜ್ವರ, ಆಮಶಂಕೆ, ಇಲಿಜ್ವರ ಕಾಣಿಸಿಕೊಳ್ಳಬಹುದು ಇಷ್ಟೇ ಅಲ್ಲದೆ, ಕಲುಷಿತ ನೀರು ಹಾಗೂ ಕಲುಷಿತ ಆಹಾರ ಸೇವನೆ ಮೂಲಕ ಸೂಕ್ಷ್ಮಜೀವಿಗಳಿಂದ ವಾಂತಿ-ಭೇದಿಯೂ ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಆದುದರಿಂದ ಪ್ರತಿಯೊಬ್ಬರೂ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು.
ಬಿಸಿಯಾದ ಆಹಾರ ಪದಾರ್ಥಗಳನ್ನು ಉಪಯೋಗಿಸಬೇಕು. ಆಹಾರ ಪದಾರ್ಥಗಳನ್ನು ಮುಚ್ಚಿಡಬೇಕು. ರಸ್ತೆ ಬದಿಗಳಲ್ಲಿ, ಹೋಟೆಲ್‌ಗಳಲ್ಲಿ, ತೆರೆದಿಟ್ಟು ಮಾರುವ ಹಣ್ಣು ಹಂಪಲು ಹಾಗೂ ಆಹಾರ ಪದಾರ್ಥಗಳನ್ನು ಉಪಯೋಗಿಸಬಾರದು. ಹೋಟೆಲ್‌ಗಳಲ್ಲಿ ಕುಡಿಯಲು ಬಿಸಿ ನೀರನ್ನು ಕೇಳಿ ಪಡೆಯಬೇಕು. ಊಟಕ್ಕೆ ಮುಂಚಿತವಾಗಿ ಕೈಗಳನ್ನು ಶುಚಿಗೊಳಿಸಬೇಕು.

ಬೇಸಿಗೆಯಲ್ಲಿ ಕಾಡುವ ರೋಗಗಳು
ಬಯಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡದೆ ಶೌಚಾಲಯವನ್ನು ಬಳಸಬೇಕು. ಮಲ ವಿಸರ್ಜನೆ ನಂತರ ಕೈಗಳನ್ನು ಸೋಪಿನಿಂದ ತೊಳೆಯಬೇಕು. ವಾಂತಿಭೇದಿ ಕಾಣಿಸಿಕೊಂಡರೆ ಅತಿಯಾಗಿ ನೀರು ಸೇವಿಸಬೇಕು ಅಥವಾ ಓಆರ್‌ಎಸ್ ಪಾನಕ ಸೇವಿಸಬೇಕು. ಮನೆಯ ಒಳಗೆ, ಹೊರಗಡೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಜ್ವರ, ಕಾಮಾಲೆ, ವಾಂತಿಭೇದಿ, ರಕ್ತದೊಂದಿಗೆ ಭೇದಿ ಆಗುವುದು, ಹೊಟ್ಟೆನೋವು ಮತ್ತು ಭೇದಿ ರೋಗಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು.
ಇತ್ತೀಚೆಗಿನ ದಿನಗಳಲ್ಲಿ ಆರೋಗ್ಯದಲ್ಲಿ ಏರುಪೇರು ಸಾಮಾನ್ಯವಾಗಿದ್ದು, ನಿರ್ಲಕ್ಷ್ಯ ವಹಿಸುವುದಾಗಲೀ, ಅವರಿವರ ಸಲಹೆ ಪಡೆದು ತಾವೇ ಸ್ವತಃ ಔಷಧಿಗಳನ್ನು ಸೇವಿಸುವುದಾಗಲೀ ಮಾಡದೆ ಕೂಡಲೇ ವೈದ್ಯರನ್ನು ಭೇಟಿಯಾಗಿ ಸಲಹೆ ಪಡೆಯುವುದು ಉತ್ತಮ. ಮುಖ್ಯವಾಗಿ ನಮ್ಮ ದೇಹ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹುಮುಖ್ಯವಾಗಿದೆ.
-
ಬೆಂಗಳೂರಿನ ಸೋಂಪುರ ಕೆರೆ ಉಳಿವಿಗೆ ಜಲಮಂಡಳಿ ಮಾಸ್ಟರ್ ಪ್ಲಾನ್, ಸಂಸ್ಕರಣಾ ಘಟಕಕ್ಕೆ ಕಲುಷಿತ ನೀರು -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್











Click it and Unblock the Notifications