ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಪ್ರಮಾಣಪತ್ರ ತಿದ್ದುಪಡಿ ಮಾಡುವುದು ಹೇಗೆ?

|
Google Oneindia Kannada News

ನವದೆಹಲಿ, ಜೂನ್ 09: ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ನಂತರದಲ್ಲಿ ನೀವು ಪಡೆದಿರುವ ಪ್ರಮಾಣಪತ್ರದಲ್ಲಿ ಲೋಪದೋಷಗಳಿವೆಯೇ. ಕೊವಿನ್ ಅಪ್ಲಿಕೇಷನ್ ಮೂಲಕ ನಿಮ್ಮ ಸರ್ಟಿಫಿಕೇಟ್ ನಲ್ಲಿ ಆಗಿರುವ ತಪ್ಪುಗಳನ್ನು ನೀವೇ ತಿದ್ದಿಕೊಳ್ಳುವುದಕ್ಕೆ ಅವಕಾಶವಿದೆ.

ಕೊವಿಡ್-19 ಲಸಿಕೆ ಸ್ವೀಕೃತಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿರುವ ಹೆಸರು, ಲಿಂಗ, ಜನ್ಮ ದಿನಾಂಕ ಅಥವಾ ವರ್ಷವನ್ನು ಪರಿಷ್ಕರಹಿಸುವ ಅನುಮತಿ ನೀಡಲಾಗಿದೆ. ಭಾರತೀಯ ಕೇಂದ್ರ ಸರ್ಕಾರವು ಆರೋಗ್ಯ ಸೇತು ಅಪ್ಲಿಕೇಶನ್ ಮುಖೇನವಾಗಿ ಪ್ರಮಾಣ ಪತ್ರ ಹಾಗೂ ಮಾಹಿತಿ ಪಡೆಯುವುದಕ್ಕೆ ಸಾಧ್ಯವಾಗುತ್ತದೆ.

ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ನಂತರದಲ್ಲಿ ಈ ಕುರಿತು ಪ್ರಮಾಣಪತ್ರ ಎಲ್ಲಿ ಸಿಗುತ್ತದೆ. ಕೊವಿಡ್-19 ಲಸಿಕೆ ಸ್ವೀಕೃತಿ ಪ್ರಮಾಣಪತ್ರವನ್ನು ಪಡೆಯುವುದು ಹೇಗೆ. ಲಸಿಕೆ ಹಾಕಿಸಿಕೊಂಡಿರುವ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೆ ಯಾವ ವಿಧಾನವನ್ನು ಬಳಸಬೇಕು ಎಂಬುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಹೆಸರು, ಲಿಂಗ, ಜನ್ಮ ದಿನಾಂಕ ಪರಿಷ್ಕರಣೆಯ ವಿಧಾನ

ಹೆಸರು, ಲಿಂಗ, ಜನ್ಮ ದಿನಾಂಕ ಪರಿಷ್ಕರಣೆಯ ವಿಧಾನ

ಮೊದಲ ಹಂತ: http://cowin.gov.in ಗೆ ಭೇಟಿ ನೀಡಿ

ಎರಡನೇ ಹಂತ: 10 ಅಂಕಿಗಳ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪಡೆಯಿರಿ

ಮೂರನೇ ಹಂತ: ಮೊಬೈಲ್ ಸಂಖ್ಯೆಗೆ ಬರುವ ಆರು ಅಂಕಿಗಳ OTP ಅನ್ನು ನಮೂದಿಸಿರಿ

ನಾಲ್ಕನೇ ಹಂತ: Verify And Proceed ಕ್ಲಿಕ್ ಮಾಡಿ

ಐದನೇ ಹಂತ: ಖಾತೆ ವಿವರ(Account Details)ದ ಮೇಲೆ ಕ್ಲಿಕ್ ಮಾಡಿರಿ

ಆರನೇ ಹಂತ: ಸಮಸ್ಯೆಯನ್ನು ಗುರುತಿಸಿರಿ

ಏಳನೇ ಹಂತ: 'ಸಮಸ್ಯೆ ಏನು?' ಎಂಬುದರ ಅಡಿಯಲ್ಲಿ ಇರುವ 'ಪ್ರಮಾಣಪತ್ರದಲ್ಲಿ ಪರಿಷ್ಕರಣೆ' (ಕರೆಕ್ಷನ್ ಇನ್ ಸರ್ಟಿಫಿಕೇಟ್) ಕ್ಲಿಕ್ ಮಾಡಿ

ಎಂಟನೇ ಹಂತ: ಹೆಸರು, ಲಿಂಗ, ಜನ್ಮ ದಿನಾಂಕದ ಪೈಕಿ ಯಾವುದರಲ್ಲಿ ಸಮಸ್ಯೆಯಿದೆ ಎಂಬುದನ್ನು ಗುರುತಿಸಿ ಅದರ ಮೇಲೆ ಕ್ಲಿಕ್ ಮಾಡಿ

ಒಂಬತ್ತನೇ ಹಂತ: 'ಮುಂದುವರಿಸಿ' ಮೇಲೆ ಕ್ಲಿಕ್ ಮಾಡುವ ಮೂಲಕ ಬಯಸಿದ ಬದಲಾವಣೆಗಳನ್ನು ಮಾಡಿರಿ

ಒಂದು ಗಂಟೆಯಲ್ಲಿ 1 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ

ಒಂದು ಗಂಟೆಯಲ್ಲಿ 1 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 144 ದಿನಗಳಲ್ಲಿ 23,90,58,360 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,58,652 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 22,67,842 ಜನರಿಗೆ ಮೊದಲ ಡೋಸ್ ಹಾಗೂ 2,90,810 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಹಂತಗಳಲ್ಲಿ ಲಸಿಕೆ ವಿತರಣೆ

ದೇಶದಲ್ಲಿ ಮೂರು ಹಂತಗಳಲ್ಲಿ ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಕಳೆದ 24 ಗಂಟೆಗಳಲ್ಲಿ 92,596 ಜನರಿಗೆ ಕೊರೊನಾವೈರಸ್

ಕಳೆದ 24 ಗಂಟೆಗಳಲ್ಲಿ 92,596 ಜನರಿಗೆ ಕೊರೊನಾವೈರಸ್

ದೇಶದಲ್ಲಿ ಒಂದೇ ದಿನ 92,596 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,62,664 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2219 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು 2,90,89,069 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,75,04,126 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,53,528 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 12,31,415 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
How Can Change Name, Gender, Date Of Birth In Covid-19 Certificate: Read Here The Steps.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X