ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲು ಓದಿ: ಹೌದು ಭಾರತದಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆ ಪ್ರಮಾಣವಾದ್ರೂ ಎಷ್ಟು!?

|
Google Oneindia Kannada News

ನವದೆಹಲಿ, ಏಪ್ರಿಲ್ 27: ಭಾರತೀಯರ ಎದುರಿಗೆ ಓಮಿಕ್ರಾನ್ ರೂಪಾಂತರಿ ವೈರಸ್ ಎನ್ನುವ ಸವಾಲಿದೆ. ಕೋವಿಡ್-19 ಹೊಸ ತಳಿಯನ್ನು ನಿಯಂತ್ರಿಸುವುದಕ್ಕೆ ಲಸಿಕೆಯೊಂದೇ ಮದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಈಗಾಗಲೇ ಕರೆ ಕೊಟ್ಟಿದ್ದಾರೆ.
5 ವರ್ಷದ ಮಕ್ಕಳಿಗೂ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಬೇಕು. ದೊಡ್ಡವರೂ ಎರಡೂ ಡೋಸ್ ಲಸಿಕೆ ಪಡೆದುಕೊಳ್ಳಬೇಕು.

ಎರಡೂ ಡೋಸ್ ಹಾಕಿಸಿಕೊಂಡವರು ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು. ಒಟ್ಟಿನಲ್ಲಿ ರೋಗದಿಂದ ರಕ್ಷಣೆ ಪಡೆದುಕೊಳ್ಳಬೇಕಾದರೆ ಲಸಿಕೆ ಪಡೆದುಕೊಳ್ಳುವುದು ಅತ್ಯಗತ್ಯ ಎನ್ನುವ ಅರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೊನಾವೈರಸ್ ನಿಯಂತ್ರಣಕ್ಕಾಗಿ ಲಸಿಕೆ ವಿತರಣೆಗೆ ವೇಗ ನೀಡಲು ಪ್ರಧಾನಿ ಕರೆ ಕೊರೊನಾವೈರಸ್ ನಿಯಂತ್ರಣಕ್ಕಾಗಿ ಲಸಿಕೆ ವಿತರಣೆಗೆ ವೇಗ ನೀಡಲು ಪ್ರಧಾನಿ ಕರೆ

ಪ್ರಧಾನಮಂತ್ರಿಯವರೇನೋ ಲಸಿಕೆ ಹಾಕಿಸಿಕೊಳ್ಳಿರಿ ಅಂತಾ ಹೇಳುತ್ತಾರೆ. ಆದರೆ ನಮ್ಮ ದೇಶದಲ್ಲಿ ಉತ್ಪಾದನೆ ಆಗುತ್ತಿರುವ ಲಸಿಕೆ ಪ್ರಮಾಣವೆಷ್ಟು?, ಇದುವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸರಬರಾಜು ಆಗಿರುವ ಲಸಿಕೆ ಪ್ರಮಾಣವೆಷ್ಟು?, ಎಷ್ಟು ಜನರಿಗೆ ಎಷ್ಟು ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ?, ದೇಶದಲ್ಲಿ ಬಾಕಿ ಉಳಿದಿರುವ ಕೋವಿಡ್-19 ಲಸಿಕೆ ಪ್ರಮಾಣ ಎಷ್ಟಿದೆ ಎಂಬುದರ ಕುರಿತು ಒಂದು ವಿಸ್ತೃತ ವರದಿ ಇಲ್ಲಿದೆ ಓದಿ.

 ಕೊರೊನಾವೈರಸ್ ಲಸಿಕೆ ವಿತರಣೆಗೆ ವೇಗ ನೀಡಲು ಪ್ರಧಾನಿ ಸಲಹೆ

ಕೊರೊನಾವೈರಸ್ ಲಸಿಕೆ ವಿತರಣೆಗೆ ವೇಗ ನೀಡಲು ಪ್ರಧಾನಿ ಸಲಹೆ

ವಿದೇಶಗಳಿಗೆ ಹೋಲಿಸಿದರೆ ಈಗ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಹಂತದಲ್ಲಿ ನಾವು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಕೋವಿಡ್-19 ಎನ್ನುವುದು ನಮ್ಮ ಪಾಲಿಗೆ ಸರ್ಪ್ರೈಸ್ ಅಂತೂ ಆಗಿರಲಿಲ್ಲ. ನಾವು ಅದರ ಜೊತೆಗೆ ಬದುಕಬೇಕಿದೆ. ಓಮಿಕ್ರಾನ್ ರೂಪಾಂತರ ಮತ್ತು ಉಪ ಪ್ರಬೇಧಗಳ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಭಾರತದಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ಮತ್ತಷ್ಟು ವೇಗ ನೀಡಬೇಕಾಗಿದೆ. ದೇಶದ ಅರ್ಹ ಫಲಾನುಭವಿಗಳಲ್ಲಿ ಶೇ. 96ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಿದ್ದಾರೆ. 15 ವರ್ಷಕ್ಕಿಂತ ಮೇಲ್ಪಟ್ಟ ಅರ್ಹರಲ್ಲಿ ಶೇ.85ರಷ್ಟು ಜನರು ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 ವಿವಿಧ ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ವಿವಿಧ ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕಳೆದ 2021ರ ಜನವರಿ 16ರಂದು ಮೊದಲ ಬಾರಿಗೆ ಕೋವಿಡ್-19 ಲಸಿಕೆಯ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಫೆಬ್ರವರಿ 2ರಂದು ಎರಡನೇ ಹಂತದಲ್ಲಿ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಿಸಲಾಯಿತು. ಮಾರ್ಚ್ 1ರಿಂದ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥತೆಯನ್ನು ಹೊಂದಿರುವವರಿಗೆ ಕೋವಿಡ್-19 ಲಸಿಕೆ ವಿತರಿಸಲು ಶುರು ಮಾಡಲಾಯಿತು. ತದನಂತರ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಿಸಲು ಅನುಮತಿ ನೀಡಲಾಗಿತ್ತು. ಮೇ 1ರ ನಂತರದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸುವುದಕ್ಕೆ ಅನುಮತಿಸಲಾಗಿತ್ತು.

2022ರ ಜನವರಿ 3ರಂದು 15 ರಿಂದ 18 ವಯೋಮಾನದವರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರವು ಅನುಮೋದನೆಯನ್ನು ನೀಡಿತು. ಇದರ ಬೆನ್ನಲ್ಲೇ ಮಾರ್ಚ್ 16ರಂದು 12 ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವುದಕ್ಕೆ ಅನುಮತಿ ನೀಡಲಾಯಿತು. ಹೀಗೆ ಹಂತ-ಹಂತವಾಗಿ ಲಸಿಕೆ ವಿತರಣೆಗೆ ದೇಶದಲ್ಲಿ ಅನುಮತಿ ನೀಡಲಾಗಿದೆ.

 ಬೂಸ್ಟರ್ ಡೋಸ್ ತೆಗೆದುಕೊಳ್ಳುವುದಕ್ಕೆ ಕೇಂದ್ರದ ಅನುಮತಿ

ಬೂಸ್ಟರ್ ಡೋಸ್ ತೆಗೆದುಕೊಳ್ಳುವುದಕ್ಕೆ ಕೇಂದ್ರದ ಅನುಮತಿ

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈಗಾಗಲೇ ಘೋಷಿಸಿದೆ. ಮೊದಲ ಎರಡು ಅಲೆಗಳ ನಂತರ ಆರಂಭಿಸಲಾದ ಲಸಿಕೆ ವಿತರಣೆ ಅಭಿಯಾನದಿಂದ ಸಾವಿನ ಪ್ರಕರಣಗಳು ಮತ್ತು ತೀವ್ರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಎರಡು ಡೋಸ್ ಲಸಿಕೆ ಪಡೆದುಕೊಂಡವರು ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೂ ಅನುಮತಿ ನೀಡಲಾಗಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಾವು ಎರಡನೇ ಡೋಸ್ ಪಡೆದುಕೊಂಡು 9 ತಿಂಗಳು ಕಳೆದಿದ್ದರೆ ಮೂರನೇ ಡೋಸ್ ಲಸಿಕೆಯನ್ನೂ ಪಡೆದುಕೊಳ್ಳಬಹುದು.

 ಒಟ್ಟು 188 ಕೋಟಿ ಡೋಸ್ ಲಸಿಕೆ ವಿತರಣೆ

ಒಟ್ಟು 188 ಕೋಟಿ ಡೋಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಲಸಿಕೆ ವಿತರಣೆಯನ್ನು ಈವರೆಗೂ ವೇಗವಾಗಿ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 1,88,19,40,971 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. 12 ರಿಂದ 14 ವರ್ಷ ವಯೋಮಾನದ ಮಕ್ಕಳಿಗೆ 2,75,34,619 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ಇದರ ಮಧ್ಯೆ ವೈದ್ಯರು ಮತ್ತು ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ಅನ್ನೂ ಕೂಡ ಉಚಿತವಾಗಿ ವಿತರಿಸಲಾಗುತ್ತಿದೆ. ಇದುವರೆಗೂ 2,72,46,893 ಮಂದಿಗೆ ಬೂಸ್ಟರ್ ಡೋಸ್ ಅನ್ನು ನೀಡಲಾಗಿದೆ.

 5 ವರ್ಷ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ

5 ವರ್ಷ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ವಿತರಿಸುವುದಕ್ಕೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರ ಮಂಗಳವಾರ ಅನುಮೋದನೆ ನೀಡಿದೆ. ದೇಶದಲ್ಲಿ 6 ರಿಂದ 12 ವರ್ಷ ಮಕ್ಕಳನ್ನು ಕೋವಿಡ್-19 ಸೋಂಕಿನಿಂದ ರಕ್ಷಿಸವುದಕ್ಕಾಗಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಕೊವ್ಯಾಕ್ಸಿನ್ ಲಸಿಕೆಯ ಜೊತೆಗೆ ಮತ್ತೊಂದು ಲಸಿಕೆಗೂ ಅನುಮೋದನೆ ನೀಡಲಾಗಿದೆ. ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ಬಯೋಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯನ್ನು 5 ರಿಂದ 11 ವರ್ಷದ ಮಕ್ಕಳ ಮೇಲೆ ತುರ್ತು ಬಳಸುವುದಕ್ಕೆ ಅನುಮೋದನೆ ನೀಡಲಾಗಿದೆ. ಆ ಮೂಲಕ 5 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕೋವಿಡ್-19 ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡುವುದಕ್ಕೆ ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ.

 ದೇಶದಲ್ಲಿ ಕೋವಿಡ್-19 ಲಸಿಕೆ ಲಭ್ಯತೆ

ದೇಶದಲ್ಲಿ ಕೋವಿಡ್-19 ಲಸಿಕೆ ಲಭ್ಯತೆ

ಕೇಂದ್ರ ಸರ್ಕಾರದಿಂದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಹಂತದಲ್ಲಿ ಶೇ.75ರಷ್ಟು ಕೊರೊನಾವೈರಸ್ ಲಸಿಕೆಗಳು ಭಾರತದಲ್ಲಿಯೇ ಉತ್ಪಾದನೆ ಆಗುತ್ತಿವೆ. ಇದುವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1,92,88,44,535 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ. ಇದರ ಹೊರತಾಗಿ ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯದ ಬಳಿ 19,70,98,585 ಡೋಸ್ ಲಸಿಕೆ ಬಾಕಿ ಉಳಿದಿದೆ. ಈ ಬಳಕೆಯಾಗದೇ ಉಳಿದ ಲಸಿಕೆಯನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿಯೇ ಲಸಿಕೆ ವಿತರಣೆಗೆ ವೇಗ ಒದಗಿಸುವುದಕ್ಕೆ ಕೇಂದ್ರ ಸರ್ಕಾರವು ನಿರ್ಧರಿಸಿದೆ. ಇದರ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಸಿಕೆಗೆ ವೇಗ ನೀಡಲು ಕರೆ ಕೊಟ್ಟಿರುವುದಕ್ಕೆ ದೇಶದ ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕೂಡ ಒಂದು ಕಾರಣವಾಗಿದೆ.

 ದೇಶದಲ್ಲಿ ಒಂದೇ ದಿನ 3,569 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3,569 ಮಂದಿಗೆ ಕೊವಿಡ್

ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 3,569 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 151 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2,252 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,065,666ಕ್ಕೆ ಏರಿಕೆಯಾಗಿದೆ. ಈ ಪೈಕಿ 42,525,563 ಸೋಂಕಿತರು ಗುಣಮುಖರಾಗಿದ್ದರೆ, 522,374 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 17,729 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಹಿಂದಿ ರಾಷ್ಟ್ರಭಾಷೆ ವಿವಾದದಲ್ಲಿ ಅಜಯ್ ದೇವಗನ್ ಕೀಳು ಮನಸ್ಥಿತಿ ಬಿಚ್ಚಿತ್ತ ನೀನಾಸಂ ಸತೀಶ್ | Oneindia Kannada

English summary
How Much Covid-19 Vaccine Doses Available Across india; Know the Number of Vaccination till this date.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X