ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಚಯ

|
Google Oneindia Kannada News

ಕರ್ನಾಟಕ ಸರ್ಕಾರ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಳಗಾವಿಯ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ ನೇಮಕವಾಗಿದ್ದು, ಅವರು ಗುರುವಾರ ಅಧಿಕಾರವನ್ನು ಸ್ವೀಕರಿಸಿದರು.

ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಂ. ಜಿ. ಹಿರೇಮಠರನ್ನು ಕೆ. ಆರ್. ಐ. ಡಿ. ಎಲ್. ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎಂ. ಜಿ. ಹಿರೇಮಠ ನಿತೇಶ್ ಪಾಟೀಲಗೆ ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು.

ಉತ್ತರ ಕನ್ನಡ ಮೂಲದ ಗುರುದತ್ತ ಹೆಗಡೆ ಈಗ ಧಾರವಾಡದ ಜಿಲ್ಲಾಧಿಕಾರಿ ಉತ್ತರ ಕನ್ನಡ ಮೂಲದ ಗುರುದತ್ತ ಹೆಗಡೆ ಈಗ ಧಾರವಾಡದ ಜಿಲ್ಲಾಧಿಕಾರಿ

ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ನಿತೇಶ್ ಪಾಟೀಲ ಅವರು ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರ ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ನೇಮಿಸಿದೆ.

 ಕರ್ನಾಟಕ; ಆಡಳಿತಕ್ಕೆ ಸರ್ಜರಿ, 17 ಐಎಎಸ್ ಅಧಿಕಾರಿಗಳ ವರ್ಗಾವಣೆ ಕರ್ನಾಟಕ; ಆಡಳಿತಕ್ಕೆ ಸರ್ಜರಿ, 17 ಐಎಎಸ್ ಅಧಿಕಾರಿಗಳ ವರ್ಗಾವಣೆ

Nititsh K Patil

ಬೆಳಗಾವಿ ಜಿಲ್ಲೆಯ ನಿಕಟಪೂರ್ವ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯವರೇ ಆಗಿದ್ದರು. ನಿತೇಶ್ ಪಾಟೀಲ 2012ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.

27 ಐಎಎಸ್ ಅಧಿಕಾರಿಗಳ ವರ್ಗಾವಣೆ 27 ಐಎಎಸ್ ಅಧಿಕಾರಿಗಳ ವರ್ಗಾವಣೆ

ನಿತೇಶ್ ಪಾಟೀಲ ಪರಿಚಯ; ನಿತೇಶ್ ಪಾಟೀಲ ಮೂಲತಃ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್‍ಎಸ್‍ಎಲ್‍ಸಿ ತನಕ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ ಓದಿ, ಬಳಿಕ ಎನ್‍ಆಯ್‍ಟಿ ಅಲಹಾಬಾದ್‍ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು.

ಕೆಲವು ಕಾಲ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. 2012 ರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು.

belagavi dc

ಪ್ರೊಬೇಷನರಿ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಣೆ ಮಾಡಿದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ವಾಣಿಜ್ಯ ತೆರಿಗೆ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಯಾಗುವ ಮೊದಲು ಧಾರವಾಡದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.

English summary
Nitish Kallanagowda Patil (Nititsh K Patil) took charge as deputy commissioner of the Belagavi. 2012 batch IAS officer worked as Dharwad DC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X