IFFI 2022: 'ದಿ ಕಾಶ್ಮೀರ್ ಫೈಲ್ಸ್' ಅನ್ನು ಅಸಭ್ಯ ಚಿತ್ರವೆಂದ ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ನಿರ್ದೇಶಕ
ಪಣಜಿ, ನವೆಂಬರ್ 28: ಭಾರತದ 53 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಸೋಮವಾರ ಕೆಲವು ವಿವಾದಾತ್ಮಕ ಹೇಳಿಕೆಗಳೊಂದಿಗೆ ಕೊನೆಗೊಂಡಿತು. ಸಮಾರೋಪ ಸಮಾರಂಭದಲ್ಲಿ, ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಿತ್ರ ನಿರ್ದೇಶಕ ನಾಡವ್ ಲ್ಯಾಪಿಡ್ ಅವರು ವಿವೇಕ್ ಅಗ್ನಿಹೋತ್ರಿ ಅವರ ಹಿಂದಿ ಚಲನಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಅನ್ನು ಟೀಕಿಸಿದರು.
'ದಿ ಕಾಶ್ಮೀರ್ ಫೈಲ್ಸ್' ಚಿತ್ರವು ಸಿದ್ದಾಂತವೊಂದನ್ನು ಪ್ರಚಾರ ಮಾಡುವ ಸರಕಾಗಿದೆ ಎಂದು ಹೇಳಿದರು.
ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ನಾಡವ್, 'ಈ ಚಿತ್ರೋತ್ಸವದ 15ನೇ ಚಿತ್ರ, ದಿ ಕಾಶ್ಮೀರ್ ಫೈಲ್ಸ್‌ನಿಂದ ನಾವೆಲ್ಲರೂ ವಿಚಲಿತರಾಗಿದ್ದೇವೆ ಮತ್ತು ಆಘಾತಕ್ಕೊಳಗಾಗಿದ್ದೇವೆ. ಅದು ಅಪಾಯಕಾರಿ ಸಿದ್ಧಾಂತವೊಂದನ್ನು ಪ್ರಚಾರ ಮಾಡುವ ಅಸಭ್ಯ ಚಲನಚಿತ್ರ' ಎಂದು ಟೀಕಿಸಿದ್ದಾರೆ.

'ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತ ಚಿತ್ರವಲ್ಲ ಇದು ಎಂದು ಭಾಸವಾಯಿತು. ವೇದಿಕೆಯಲ್ಲಿ ನಿಮ್ಮೊಂದಿಗೆ ಈ ಭಾವನೆಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ನನಗೆ ಸಂಪೂರ್ಣವಾಗಿ ಸ್ವಾತಂತ್ರ್ಯವಿದೆ. ಈ ಚಿತ್ರೋತ್ಸವದ ಮನೋಭಾವವು ಕಲೆಗೆ ಮತ್ತು ಜೀವನಕ್ಕೆ ಅಗತ್ಯವಾದ ವಿಮರ್ಶಾತ್ಮಕ ಚರ್ಚೆಯನ್ನು ಸಹ ಸ್ವೀಕರಿಸುವುದಾಗಿದೆ' ಎಂದು ನಾಡವ್ ಅಭಿಪ್ರಾಯ ಪಟ್ಟಿದ್ದಾರೆ.
ಕಳೆದ ವಾರ ಚಿತ್ರೋತ್ಸವದಲ್ಲಿ ದಿ ಕಾಶ್ಮೀರ್ ಫೈಲ್ಸ್ ಅನ್ನು ಪ್ರದರ್ಶಿಸಲಾಯಿತು. ಕಾಶ್ಮೀರ್ ಫೈಲ್ಸ್ ಅನ್ನು ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ. ಮಾರ್ಚ್ 11 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಈ ಚಿತ್ರವು 1990 ರಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ ಹತ್ಯೆಗಳು ಮತ್ತು ವಲಸೆಯ ಸುತ್ತಲಿನ ಕತೆಯನ್ನು ಹೊಂದಿದೆ.

ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರವು ಉತ್ತಮ ಕಲೆಕ್ಷನ್ ಮಾಡಿದ್ದರೂ, ಹಲವರ ಟೀಕೆಗಳಿಗೆ ಗುರಿಯಾಗಿದೆ.
#Breaking: #IFFI Jury says they were “disturbed and shocked” to see #NationalFilmAward winning #KashmirFiles, “a propoganda, vulgar movie” in the competition section of a prestigious festival— organised by the Govt of India.
🎤 Over to @vivekagnihotri sir…
@nadavlapi
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications