ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

IFFI 2022: 'ದಿ ಕಾಶ್ಮೀರ್‌ ಫೈಲ್ಸ್‌' ಅನ್ನು ಅಸಭ್ಯ ಚಿತ್ರವೆಂದ ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ನಿರ್ದೇಶಕ

|
Google Oneindia Kannada News

ಪಣಜಿ, ನವೆಂಬರ್ 28: ಭಾರತದ 53 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಸೋಮವಾರ ಕೆಲವು ವಿವಾದಾತ್ಮಕ ಹೇಳಿಕೆಗಳೊಂದಿಗೆ ಕೊನೆಗೊಂಡಿತು. ಸಮಾರೋಪ ಸಮಾರಂಭದಲ್ಲಿ, ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಿತ್ರ ನಿರ್ದೇಶಕ ನಾಡವ್ ಲ್ಯಾಪಿಡ್ ಅವರು ವಿವೇಕ್ ಅಗ್ನಿಹೋತ್ರಿ ಅವರ ಹಿಂದಿ ಚಲನಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಅನ್ನು ಟೀಕಿಸಿದರು.

'ದಿ ಕಾಶ್ಮೀರ್‌ ಫೈಲ್ಸ್‌' ಚಿತ್ರವು ಸಿದ್ದಾಂತವೊಂದನ್ನು ಪ್ರಚಾರ ಮಾಡುವ ಸರಕಾಗಿದೆ ಎಂದು ಹೇಳಿದರು.

ದೆಹಲಿಯಲ್ಲಿ ಕೇಜ್ರಿವಾಲ್ V/s ಕೇಸರಿ ಗ್ಯಾಂಗ್ ಜಿದ್ದಿಗೆ ಕಾರಣವಾಗಿದ್ದು ಹೇಗೆ ಕಾಶ್ಮೀರ್ ಫೈಲ್ಸ್? ದೆಹಲಿಯಲ್ಲಿ ಕೇಜ್ರಿವಾಲ್ V/s ಕೇಸರಿ ಗ್ಯಾಂಗ್ ಜಿದ್ದಿಗೆ ಕಾರಣವಾಗಿದ್ದು ಹೇಗೆ ಕಾಶ್ಮೀರ್ ಫೈಲ್ಸ್?

ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ನಾಡವ್, 'ಈ ಚಿತ್ರೋತ್ಸವದ 15ನೇ ಚಿತ್ರ, ದಿ ಕಾಶ್ಮೀರ್ ಫೈಲ್ಸ್‌ನಿಂದ ನಾವೆಲ್ಲರೂ ವಿಚಲಿತರಾಗಿದ್ದೇವೆ ಮತ್ತು ಆಘಾತಕ್ಕೊಳಗಾಗಿದ್ದೇವೆ. ಅದು ಅಪಾಯಕಾರಿ ಸಿದ್ಧಾಂತವೊಂದನ್ನು ಪ್ರಚಾರ ಮಾಡುವ ಅಸಭ್ಯ ಚಲನಚಿತ್ರ' ಎಂದು ಟೀಕಿಸಿದ್ದಾರೆ.

IFFI 2022 jury head Nadav Lapid calls The Kashmir Files propaganda vulgar movie

'ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾತ್ಮಕ ವಿಭಾಗಕ್ಕೆ ಸೂಕ್ತ ಚಿತ್ರವಲ್ಲ ಇದು ಎಂದು ಭಾಸವಾಯಿತು. ವೇದಿಕೆಯಲ್ಲಿ ನಿಮ್ಮೊಂದಿಗೆ ಈ ಭಾವನೆಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ನನಗೆ ಸಂಪೂರ್ಣವಾಗಿ ಸ್ವಾತಂತ್ರ್ಯವಿದೆ. ಈ ಚಿತ್ರೋತ್ಸವದ ಮನೋಭಾವವು ಕಲೆಗೆ ಮತ್ತು ಜೀವನಕ್ಕೆ ಅಗತ್ಯವಾದ ವಿಮರ್ಶಾತ್ಮಕ ಚರ್ಚೆಯನ್ನು ಸಹ ಸ್ವೀಕರಿಸುವುದಾಗಿದೆ' ಎಂದು ನಾಡವ್‌ ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ವಾರ ಚಿತ್ರೋತ್ಸವದಲ್ಲಿ ದಿ ಕಾಶ್ಮೀರ್‌ ಫೈಲ್ಸ್‌ ಅನ್ನು ಪ್ರದರ್ಶಿಸಲಾಯಿತು. ಕಾಶ್ಮೀರ್ ಫೈಲ್ಸ್ ಅನ್ನು ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ. ಮಾರ್ಚ್ 11 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಈ ಚಿತ್ರವು 1990 ರಲ್ಲಿ ಕಣಿವೆಯಿಂದ ಕಾಶ್ಮೀರಿ ಪಂಡಿತರ ಹತ್ಯೆಗಳು ಮತ್ತು ವಲಸೆಯ ಸುತ್ತಲಿನ ಕತೆಯನ್ನು ಹೊಂದಿದೆ.

IFFI 2022 jury head Nadav Lapid calls The Kashmir Files propaganda vulgar movie

ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ದಿ ಕಾಶ್ಮೀರ್‌ ಫೈಲ್ಸ್‌ ಚಿತ್ರವು ಉತ್ತಮ ಕಲೆಕ್ಷನ್‌ ಮಾಡಿದ್ದರೂ, ಹಲವರ ಟೀಕೆಗಳಿಗೆ ಗುರಿಯಾಗಿದೆ.

English summary
The 53rd International Film Festival of India ended with some controversial comments on Monday. At the closing ceremony, jury head, Israeli filmmaker Nadav Lapid criticised Vivek Agnihotri's Hindi film The Kashmir Files on stage, calling it 'propaganda',
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X