ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ ಶಿವಪುರ ಧ್ವಜ ಸತ್ಯಾಗ್ರಹ
ಸ್ವಾತಂತ್ರ್ಯ ದಿನಾಚರಣೆ ಹತ್ತಿರವಾಗುತ್ತಿದೆ. ಕರ್ನಾಟಕದಲ್ಲಿನ ಸ್ವಾತಂತ್ರ್ಯ ಹೋರಾಟಗಳ ಬಗ್ಗೆ ಮಾನಾಡುವಾಗ ಶಿವಪುರ ಧ್ವಜ ಸತ್ಯಾಗ್ರಹವನ್ನು ನೆನಪು ಮಾಡಿಕೊಳ್ಳಬೇಕು. ಈ ಚಳವಳಿ ರಾಜ್ಯದ ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚುವಲ್ಲಿ ಯಶಸ್ವಿಯಾಗಿತ್ತು.
ಮಂಡ್ಯ ಜಿಲ್ಲೆಯ ಮದ್ದೂರು ಸಮೀಪ ಶಿಂಷಾ ನದಿ ತೀರದಲ್ಲಿ ಶಿವಪುರ. 1938ರ ಏಪ್ರಿಲ್ 10ರಿಂದ ಮೂರು ದಿನ ನಡೆದ ಶಿವಪುರ ಧ್ವಜ ಸತ್ಯಾಗ್ರಹ ರಾಜ್ಯದ ಹಲವು ಭಾಗಗಳಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿಯಾಯಿತು.
ಮೈಸೂರು ಸಂಸ್ಥಾನದ ಜನರಲ್ಲಿಯೂ ಸ್ವಾತಂತ್ರ್ಯದ ಕಲ್ಪನೆ ಉಂಟಾಗಿ ಸರ್ಕಾರದ ವಿರುದ್ಧ ಆಂದೋಲನ ಆರಂಭವಾಯಿತು. ಬೆಂಗಳೂರು, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ಚಳವಳಿಯಲ್ಲಿ ತೊಡಗಿದ್ದ ನಾಯಕರನ್ನು ಸರ್ಕಾರ ಬಂಧಿಸಿತು.

ವಿವಿಧ ನಾಯಕರ ಬಂಧನಕ್ಕೆ ಅಂಜದ ಜನರು 1938 ಜನವರಿ 26ರಂದು ಸ್ವರಾಜ್ಯ ದಿನಾಚರಣೆಯನ್ನು ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸ್ವರಾಜ್ಯ ದಿನಾಚರಣೆ ವೇಳೆ ಜನರ ಮೇಲೆ ಲಾಠಿ ಪ್ರಹಾರ ನಡೆಸಲಾಯಿತು.
ಮೈಸೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದಿತು. ಅನೇಕ ಮುಖಂಡರು ತ್ರಿವರ್ಣ ಧ್ವಜ ಹಾರಿಸಿದರು. ಆಗ ಅವರನ್ನು ಬಂಧಿಸಲಾಯಿತು. ಇದರಿಂದ ರೊಚ್ಚಿಗೆದ್ದ ನಾಯಕರು ಮೈಸೂರಿನ ಹೊರಗೆ ಧ್ವಜ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದರು.
ಶಿವಪುರದಲ್ಲಿ ಧ್ವಜ ಸತ್ಯಾಗ್ರಹ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ತಿರುಮಲಗೌಡ ಅವರ ಜಮೀನಿನಲ್ಲಿ ಧ್ವಜಸ್ತಂಭ ನಿಲ್ಲಿಸಲಾಯಿತು. ಆದರೆ, ಮೈಸೂರು ಮ್ಯಾಜಿಸ್ಟ್ರೇಟರು ಮದ್ದೂರು ಸುತ್ತಮತ್ತ ಒಂದು ತಿಂಗಳ ಕಾಲ ಸಭೆ, ಮೆರವಣಿಗೆ, ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದರು.
ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿ 1938 ಏಪ್ರಿಲ್ 9ರಂದು ಟಿ.ಸಿದ್ದಲಿಂಗಯ್ಯ ಅವರ ಆಧ್ಯಕ್ಷತೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಹಲವರನ್ನು ಬಂಧಿಸಲಾಯಿತು. ಮೂರು ದಿನಗಳ ಧ್ವಜ ಸತ್ಯಾಗ್ರಹ ನಾಡಿನಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೊತ್ತಿಸಿತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications