ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯಾ ಟಿವಿ, ಸಿಎನ್‌ಎಕ್ಸ್ ಸಮೀಕ್ಷೆ : ಜೆಡಿಎಸ್‌ಗೆ 2 ಸೀಟು

|
Google Oneindia Kannada News

ಬೆಂಗಳೂರು, ಏಪ್ರಿಲ್ 7 : ಲೋಕಸಭಾ ಚುನಾವಣೆ ಬಗ್ಗೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಜೆಡಿಎಸ್ 2 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.

ಇಂಡಿಯಾ ಟಿವಿ ಮತ್ತು ಸಿಎನ್‌ಎಕ್ಸ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಮಾರ್ಚ್ 24 ರಿಂದ 31ರ ತನಕ ದೇಶದ 543 ಕ್ಷೇತ್ರಗಳಲ್ಲಿ 65,100 ಜನರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿ ವರದಿ ತಯಾರಿಸಲಾಗಿದೆ.

ಇಂಡಿಯಾ ಟಿವಿ - ಸಿಎನ್ಎಕ್ಸ್ ರಾಜ್ಯವಾರು ಸಮೀಕ್ಷೆಯಲ್ಲಿ ಬಿಜೆಪಿಗೆ ಜಯಇಂಡಿಯಾ ಟಿವಿ - ಸಿಎನ್ಎಕ್ಸ್ ರಾಜ್ಯವಾರು ಸಮೀಕ್ಷೆಯಲ್ಲಿ ಬಿಜೆಪಿಗೆ ಜಯ

ಸಮೀಕ್ಷೆಯ ವರದಿ ಪ್ರಕಾರ ಎನ್‌ಡಿಎ ಮೈತ್ರಿಕೂಟ 275 ಸ್ಥಾನಗಳಲ್ಲಿ ಜಯಗಳಿಸಲಿದೆ. ಯುಪಿಎ ಮೈತ್ರಿಕೂಟ 147 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಇತರರು 121 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.

ವಿಡಿಪಿ ಸಮೀಕ್ಷೆ ಬಿಜೆಪಿಗೆ 17 ಸೀಟು, ಮಂಡ್ಯದಲ್ಲಿ ಸುಮಲತಾಗೆ ಜಯ!ವಿಡಿಪಿ ಸಮೀಕ್ಷೆ ಬಿಜೆಪಿಗೆ 17 ಸೀಟು, ಮಂಡ್ಯದಲ್ಲಿ ಸುಮಲತಾಗೆ ಜಯ!

India TV-CNX poll survey predicts 10 seats for Congress in Karnataka

ಕಾಂಗ್ರೆಸ್ ಪಕ್ಷ 97 ಸ್ಥಾನಗಳಲ್ಲಿ ಜಯಗಳಿಸಲಿದೆ. ಮಾರ್ಚ್ ಮೊದಲ ವಾರದಲ್ಲಿ ಇಂಡಿಯಾ ಟಿವಿ ಮತ್ತು ಸಿಎನ್‌ಎಕ್ಸ್ ನಡೆಸಿದ ಸಮೀಕ್ಷೆ ಎನ್‌ಡಿಎ ಮೈತ್ರಿಕೂಟ 285 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಿತ್ತು. ಈಗ ಅದು 10 ಸೀಟು ಕಡಿಮೆಯಾಗಿದೆ.

ಟೈಮ್ಸ್‌ ನೌ ಸಮೀಕ್ಷೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ 1 ಸ್ಥಾನ!ಟೈಮ್ಸ್‌ ನೌ ಸಮೀಕ್ಷೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ 1 ಸ್ಥಾನ!

ಸಮೀಕ್ಷೆಯ ವರದಿ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 2 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. 21 ಕ್ಷೇತ್ರದಲ್ಲಿ ಕಾಂಗ್ರೆಸ್, 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

English summary
India TV-CNX poll survey predicted 275 seat for NDA and 147 seat for UPA. In Karnataka BJP will win 16, 10 for Congress and 2 for JD(S).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X