ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

India TV Opinion Poll: ಯುಪಿಯಲ್ಲಿ ಬಿಜೆಪಿಗೆ ಗೆಲುವಿನ ಯೋಗ

|
Google Oneindia Kannada News

ಲಕ್ನೋ, ಜನವರಿ 18: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವು ಎರಡನೇ ಬಾರಿ ಗದ್ದುಗೆ ಏರಲಿದೆ ಎಂದು ಚುನಾವಣಾಪೂರ್ವ ಅಭಿಪ್ರಾಯ ಸಂಗ್ರಹ ಸಮೀಕ್ಷೆ ಹೇಳಿದೆ.

ಗ್ರೌಂಡ್ ಜೀರೋ ರಿಸರ್ಚ್‌ನ ಅಭಿಪ್ರಾಯ ಸಂಗ್ರಹದ ಪ್ರಕಾರ, ಭಾರತೀಯ ಜನತಾ ಪಕ್ಷವು ಉತ್ತರ ಪ್ರದೇಶದಲ್ಲಿ ಸತತ ಎರಡನೇ ಅವಧಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ನುಡಿದಿದೆ.

ಯುಪಿ ಬಿಜೆಪಿ ಪಕ್ಷದ ಶುದ್ಧೀಕರಣ ವಿಚಾರ: ಸದ್ಯಕ್ಕೆ ಉದಾರತೆ ತೋರಿದ ಬಿಜೆಪಿಯುಪಿ ಬಿಜೆಪಿ ಪಕ್ಷದ ಶುದ್ಧೀಕರಣ ವಿಚಾರ: ಸದ್ಯಕ್ಕೆ ಉದಾರತೆ ತೋರಿದ ಬಿಜೆಪಿ

ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಪೈಕಿ ಆಡಳಿತಾರೂಢ ಕೇಸರಿ ಪಕ್ಷವು 230 ರಿಂದ 235 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟವು 160 ರಿಂದ 165 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ 3 ರಿಂದ 7 ಹಾಗೂ ಬಿಎಸ್ಪಿ 2 ರಿಂದ 5 ಸ್ಥಾನಗಳನ್ನು ಪಡೆಯುತ್ತವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬರುತ್ತದೆ.

India TV Opinion Poll: BJP set for comfortable win in Uttar Pradesh in Yogi Adityanaths leadership

ಯೋಗಿ ಆದಿತ್ಯನಾಥ್ ಗೆಲುವು ಖಚಿತ:

ಗೋರಖ್‌ಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ ಫೈರ್‌ಬ್ರಾಂಡ್ ನಾಯಕ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪಕ್ಷದ ಭದ್ರಕೋಟೆಯಿಂದ ಗೆಲುವು ಸಾಧಿಸಲಿದ್ದಾರೆ. ಕಳೆದ 1971ರಲ್ಲಿ ಸೋತ ತ್ರಿಭುವನ್ ನಾರಾಯಣ ಸಿಂಗ್ ನಂತರ ಮುಖ್ಯಮಂತ್ರಿಯಾಗಿ ಜಿಲ್ಲೆಯಿಂದ ಸ್ಪರ್ಧಿಸಿದ ಎರಡನೇ ನಾಯಕ ಯೋಗಿ ಆದಿತ್ಯನಾಥ್ ಆಗಿದ್ದಾರೆ.

ಉತ್ತರ ಪ್ರದೇಶದ ಪೂರ್ವಾಂಚಲ್ ಪ್ರದೇಶದಲ್ಲಿ ಬರುವ ಗೋರಖ್‌ಪುರವು ಹಿಂದಿನಿಂದಲೂ ಕೇಸರಿ ಪಕ್ಷದ ಭದ್ರಕೋಟೆಯಾಗಿದೆ. ಗೋರಖ್‌ಪುರದಿಂದ ಯೋಗಿ ಆದಿತ್ಯನಾಥ್ 1998 ರಿಂದ ದಾಖಲೆಯ ಐದು ಅವಧಿಗೆ ಸಂಸತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ 2017ರಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ವಿಧಾನ ಪರಿಷತ್ತಿಗೆ ಆಯ್ಕೆಯಾದರು.

ಪೂರ್ವಾಂಚಲ ಪ್ರದೇಶವು 2007ರ ಚುನಾವಣೆಯಿಂದ ರಾಜಕೀಯ ಬಣ್ಣ ಬದಲಾಯಿಸುತ್ತಲೇ ಬಂದಿದೆ. ಪ್ರತಿ ಬಾರಿ ಚುನಾವಣೆಯಲ್ಲಿ ವಿಜೇತರನ್ನು ಬೆಂಬಲಿಸುತ್ತಾ ಬಂದಿದೆ. ಈ ಹಿನ್ನೆಲೆ ಗೋರಖ್‌ಪುರದಿಂದ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ತನ್ನ 2017ರ ಫಲಿತಾಂಶವನ್ನು ಮರಳಿ ಪಡೆದುಕೊಳ್ಳುವ ನಿರೀಕ್ಷೆಯಲ್ಲಿದೆ. ತದನಂತರ ಲಕ್ನೋದಲ್ಲಿ ಮತ್ತೆ ಪಕ್ಷವು ಸರ್ಕಾರವನ್ನು ರಚಿಸುವುದಕ್ಕೆ ಸಾಧ್ಯವಾಗುತ್ತದೆ.

ಉತ್ತರ ಪ್ರದೇಶದಲ್ಲಿ ಚುನಾವಣೆ ಪೈಪೋಟಿ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

2017 ಉತ್ತರ ಪ್ರದೇಶ ಚುನಾವಣೆ ಫಲಿತಾಂಶ

Recommended Video

Virat Kohli ನಾಯಕತ್ವದ ಬಳಿಕ ಹೊಸ ಅಧ್ಯಾಯ ಶುರು ಮಾಡ್ತಾರಾ | Oneindia Kannada

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

English summary
India TV Opinion Poll: BJP set for comfortable win in Uttar Pradesh in CM Yogi Adityanath's leadership.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X