India TV ಸಮೀಕ್ಷೆ: ಉತ್ತರಾಖಂಡದಲ್ಲಿ ಮ್ಯಾಜಿಕ್ ನಂಬರ್ ಯಾರಿಗೆ?

ಉತ್ತರಾಖಂಡ ರಾಜ್ಯದ 70 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತಗಳಲ್ಲಿ ಚುನಾವಣೆ ನಿಗದಿಯಾಗಿದೆ. ವಿವಿಧ ಮಾಧ್ಯಮಗಳು, ಖಾಸಗಿ ಸಂಸ್ಥೆಗಳು ಜನಾಭಿಪ್ರಾಯ ಸಂಗ್ರಹಿಸಿ ಚುನಾವಣಾ ಪೂರ್ವ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತಿವೆ. India TV ಸಮೀಕ್ಷೆ ಭಾನುವಾರದಂದು ಹೊರಬಂದಿದ್ದು, ಉತ್ತರಾಖಂಡ ರಾಜ್ಯದಲ್ಲಿ ಬಿಜೆಪಿಗೆ ಗೆಲುವು ಅಷ್ಟು ಸುಲಭವಲ್ಲ, ಮ್ಯಾಜಿಕ್ ನಂಬರ್ 36 ದಾಟಲು ಹೆಣಗಾಡಬೇಕು ಎಂದು ಹೇಳಿದೆ.

ದೇವಭೂಮಿ, ಋಷಿಗಳ ನಾಡು ಉತ್ತರಾಖಂಡದಲ್ಲಿ ಪ್ರಮುಖವಾಗಿ ಗುಡ್ಡಗಾಡು ಹಾಗೂ ನಗರ ಪ್ರದೇಶ ನಡುವಿನ ಮತ ಗಳಿಕೆ ನಿರ್ಣಾಯಕವಾಗಲಿದೆ ಎಂಬ ಅಭಿಪ್ರಾಯ ಬಂದಿದೆ. ಗುಡ್ಡಗಾಡು ಪ್ರದೇಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಾಗಿದ್ದು, ಈ ಮತಗಳನ್ನು ಬಿಜೆಪಿ ಕಿತ್ತುಕೊಳ್ಳುವಲ್ಲಿ ಯಶಸ್ವಿಯಾದರೆ ಮ್ಯಾಜಿಕ್ ನಂಬರ್ ದಾಟುವುದು ಸುಲಭವಾಗಲಿದೆ. ಹಾಗೂ ಮತ್ತೊಮ್ಮೆ ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚಲಿದೆ ಇಲ್ಲದಿದ್ದರೆ, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮ್ಯಾಜಿಕ್ ನಂಬರ್ ದಾಟಲು ಪೈಪೋಟಿ ಏರ್ಪಡಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಉತ್ತರಾಖಂಡದ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸಿತ್ತು. ಕಾಂಗ್ರೆಸ್ ಪಕ್ಷ ಕೇವಲ 11 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

ಸ್ಥಾನ ಗಳಿಕೆ

ಸ್ಥಾನ ಗಳಿಕೆ

ಇಂಡಿಯಾ ಟಿವಿ ಸಮೀಕ್ಷೆಯ ಪ್ರಕಾರ, 70 ಸದಸ್ಯರ ಶಾಸಕಾಂಗ ಸಭೆಯಲ್ಲಿ ಬಿಜೆಪಿ 33-35 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದು, ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಮತ್ತೊಂದೆಡೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾನ ಹೆಚ್ಚಿಸಿಕೊಳ್ಳಲಿದ್ದು, 34-35 ಸ್ಥಾನಗಳನ್ನು ಗೆಲ್ಲುವ ಮೂಲಕ ಪೈಪೋಟಿ ನೀಡಲಿದೆ ಎಂದು ಸಮೀಕ್ಷೆ ಹೇಳಿದೆ. ಆಮ್ ಆದ್ಮಿ ಪಕ್ಷ ಚೊಚ್ಚಲ ಬಾರಿಗೆ 0-1 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಇತರ ಪಕ್ಷಗಳು ಮತ್ತು ಸ್ವತಂತ್ರರು 0-2 ಸ್ಥಾನಗಳನ್ನು ಪಡೆಯಬಹುದು. ಬಹುಜನಸಮಾಜ ಪಕ್ಷ ಯಾವುದೇ ಸೀಟು ಗಳಿಸುವುದಿಲ್ಲ. ಪರಿಸ್ಥಿತಿ ಅತಂತ್ರವಾದರೆ ಪಕ್ಷೇತರರು ಕಿಂಗ್ ಮೇಕರ್ ಗಳಾಗಿದ್ದಾರೆ.

ಶೇಕಡಾವಾರು ಮತಗಳಿಕೆ

ಶೇಕಡಾವಾರು ಮತಗಳಿಕೆ

ಇಂಡಿಯಾ ಟಿವಿ ಸಮೀಕ್ಷೆಯ ಪ್ರಕಾರ, 70 ಸದಸ್ಯರ ಶಾಸಕಾಂಗ ಸಭೆಯಲ್ಲಿ ಬಿಜೆಪಿ ಶೇ 45 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದು ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಮತ್ತೊಂದೆಡೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಶೇ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರತಿಪಕ್ಷವಾಗಲಿದೆ ಎಂದು ಸಮೀಕ್ಷೆ ಹೇಳಿದೆ. ಬಹು ಜನ ಸಮಾಜವಾದಿ ಪಕ್ಷ ಶೇ 1 ರಷ್ಟು ಮತಗಳಿಸಬಹುದು. ಆಮ್ ಆದ್ಮಿ ಪಕ್ಷ ಶೇ 7, ಇತರ ಪಕ್ಷಗಳು ಮತ್ತು ಸ್ವತಂತ್ರರು ಶೇ 1 ಸ್ಥಾನಗಳನ್ನು ಪಡೆಯಬಹುದು ಎಂದು ಹೇಳಿದೆ.

ಸಿಎಂ ಸ್ಥಾನಕ್ಕೆ ಯಾರು ಸೂಕ್ತ?

ಸಿಎಂ ಸ್ಥಾನಕ್ಕೆ ಯಾರು ಸೂಕ್ತ?

ಮೊದಲಿಗೆ ಬಂದ ಒಂದೆರಡು ಸಮೀಕ್ಷೆಗಳಲ್ಲಿ ಉತ್ತಮ ಸ್ಕೋರ್ ಮಾಡಿದ್ದ ಹರೀಶ್ ರಾವತ್ ಅವರ ವಿರುದ್ಧ ಇತ್ತೀಚಿನ ಸಮೀಕ್ಷೆಗಳಲ್ಲಿ ಅಭಿಮತ ಬಂದಿದೆ. ಇಂಡಿಯಾ ಟಿವಿ ಸಮೀಕ್ಷೆಯಲ್ಲೂ ಇದೇ ರೀತಿ ಅಭಿಪ್ರಾಯ ಬಂದಿದ್ದು, ಶೇ 44ರಷ್ಟು ರಾವತ್ ಪರ ಜನಾಭಿಪ್ರಾಯ ಬಂದಿದೆ. ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಅವರ ಕಾರ್ಯಾವಧಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದರೂ ಶೇ 41ರಷ್ಟು ಮತ ಬಂದಿದೆ.

2017ರಲ್ಲಿ ಫಲಿತಾಂಶವೇನು?

2017ರಲ್ಲಿ ಫಲಿತಾಂಶವೇನು?

ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಉತ್ತರಾಖಂಡದ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸಿತ್ತು. ಕಾಂಗ್ರೆಸ್ ಪಕ್ಷ ಕೇವಲ 11 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.

ಫೆ.14ರಂದು ಮತದಾನ ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ. ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+