ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೊಧಿ ದಿನ 2022: ಇತಿಹಾಸ, ಥೀಮ್

|
Google Oneindia Kannada News

ಡ್ರಗ್ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ವಿಶ್ವ ಡ್ರಗ್ ಡೇ ಎಂದೂ ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ. ಪ್ರತಿ ವರ್ಷ ಪ್ರಪಂಚದಾದ್ಯಂತದ ವಿವಿಧ ಸಂಸ್ಥೆಗಳು ವಿಶ್ವ ಮಾದಕವಸ್ತು ದಿನವನ್ನು ಆಚರಿಸುತ್ತವೆ. ಜೊತೆಗೆ ಸಮಾಜಕ್ಕೆ ನಿಷೇಧಿತ ಮಾದಕವಸ್ತುಗಳು ಉಂಟುಮಾಡುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ.

"ಆರೋಗ್ಯ ಮತ್ತು ಮಾನವೀಯ ಬಿಕ್ಕಟ್ಟುಗಳಲ್ಲಿನ ಮಾದಕವಸ್ತು ಸವಾಲುಗಳನ್ನು ಪರಿಹರಿಸುವುದು" 2022 ರ ಡ್ರಗ್ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನದ ವಿಷಯವಾಗಿದೆ. ಅಫ್ಘಾನಿಸ್ತಾನ ಮತ್ತು ಉಕ್ರೇನ್‌ನಲ್ಲಿ ವ್ಯಾಪಕವಾದ ಮಾನವೀಯ ಬಿಕ್ಕಟ್ಟುಗಳ ಹಿನ್ನೆಲೆಯಲ್ಲಿ COVID-19 ಸಾಂಕ್ರಾಮಿಕವು ಪ್ರಮುಖ ಜಾಗತಿಕ ಆರೋಗ್ಯ ಬಿಕ್ಕಟ್ಟಾಗಿ ಮುಂದುವರಿದಿರುವಾಗ ಥೀಮ್ ಅನ್ನು ಆಯ್ಕೆ ಮಾಡಲಾಗಿದೆ.

ಇತಿಹಾಸ

1987 ಡಿಸೆಂಬರ್‌ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್‌ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಎಂದು ಘೋಷಿಸಲಾಯಿತು.

 International Day against Drug Abuse and Illicit Trafficking 2022

ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್‌ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ.

 International Day against Drug Abuse and Illicit Trafficking 2022

ಮಾದಕ ವ್ಯಸನ ಮುಕ್ತ ಪ್ರಪಂಚದ ಗುರಿಯನ್ನು ಸಾಧಿಸುವಲ್ಲಿ ಕ್ರಿಯೆ ಮತ್ತು ಸಹಕಾರವನ್ನು ಬಲಪಡಿಸಲು ದಿನವನ್ನು ಆಚರಿಸಲಾಗುತ್ತದೆ.

English summary
The International Day Against Drug Abuse and Illegal Trafficking is also known as World Drug Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X