Jagadish Shettar Profile: ಹ್ಯಾಟ್ರಿಕ್ ಗೆಲುವು ಕಂಡ ಮಾಜಿ ಮುಖ್ಯಮಂತ್ರಿಯ ವ್ಯಕ್ತಿ ಪರಿಚಯ
ಉತ್ತರ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದು, 6 ಬಾರಿ ಶಾಸಕರಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್ ಸದ್ಯಕ್ಕೆ ಪಕ್ಷದಿಂದ ಸಾಕಷ್ಟು ಅಂತರವನ್ನ ಕಾಯ್ದೆಕೊಂಡಿದ್ದಾರೆ ಎನ್ನಲಾಗಿದೆ.
ಜಗದೀಶ್ ಶೆಟ್ಟರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಬಿಜೆಪಿ ಶಾಸಕರು. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರು. 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಸಚಿವರಾಗಿ, ವಿಧಾನನಸಭೆ ಸ್ವೀಕರ್ ಆಗಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.
ಜಗದೀಶ್ ಶೆಟ್ಟರ್ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಗ್ರಾಮದಲ್ಲಿ 17 ಡಿಸೆಂಬರ್ 1955 ರಂದು ಜನಿಸಿದರು. ತಂದೆ ಎಸ್.ಎಸ್.ಶೆಟ್ಟರ್ ಮತ್ತು ತಾತಿ ಬಸವೇನಮ್ಮ. ಜನದೀಶ್ ಶೆಟ್ಟರ್ ಅವರ ತಂದೆ ಎಸ್ ಎಸ್ ಶೆಟ್ಟರ್ ಅವರು ಜನಸಂಘದ ಹಿರಿಯ ಕಾರ್ಯಕರ್ತರಾಗಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಐದು ಬಾರಿ ಆಯ್ಕೆಯಾದರು. ನಂತರ ಹುಬ್ಬಳ್ಳಿ-ಧಾರವಾಡದ ಮೊದಲ ಜನಸಂಘದ ಮೇಯರ್ ಆದರು. ಜಗದೀಶ್ ಶೆಟ್ಟರ್ ಅವರ ಚಿಕ್ಕಪ್ಪ ಸದಾಶಿವ ಶೆಟ್ಟರ್ ಅವರು ವಿಧಾನಸಭೆಗೆ ಆಯ್ಕೆಯಾದ ದಕ್ಷಿಣ ಭಾರತದ ಜನಸಂಘದ ನಾಯಕರಾಗಿದ್ದರು. ನಂತರ 1967 ರಲ್ಲಿ ಹುಬ್ಬಳ್ಳಿ ನಗರದಲ್ಲಿ ಆಯ್ಕೆಯಾದರು.

ಜಗದೀಶ್ ಶೆಟ್ಟರ್ ಅವರು ಬಿಕಾಂ ಪದವಿ ಪಡೆದು ನಂತರ ಎಲ್ ಎಲ್ ಬಿ ಪದವಿ ಪಡೆದು ಹುಬ್ಬಳ್ಳಿಯಲ್ಲಿ 20 ವರ್ಷಗಳ ಕಾಲ ವಕೀಲಿ ವೃತ್ತಿ ನಡೆಸುತ್ತಿದ್ದರು. ಜಗದೀಶ್ ಶೆಟ್ಟರ್ ಹಾಗೂ ಶಿಲ್ಪಾ ದಂಪತಿಗೆ ಪ್ರಶಾಂತ್ ಮತ್ತು ಸಂಕಲ್ಪ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಬಣಜಿಗ ಉಪಪಂಗಡಕ್ಕೆ ಸೇರಿದವರಾಗಿದ್ದಾರೆ.
ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ ನಾಯಕ ರಾಜ್ಯದ 21ನೇ ಮುಖ್ಯಮಂತ್ರಿಯಾಗಿ 10 ತಿಂಗಳ ಕಾಲ ಆಡಳಿತ ನಡೆಸಿದ್ದಾರೆ ಮಾಜಿ ಮುಖ್ಯಮಂತ್ರಿಯಾಗಿದ್ದರೂ 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು.
1990 ಹುಬ್ಬಳ್ಳಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ನೇಮಕರಾಗಿದ್ದರು.1994 ಧಾರವಾಡ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕರಾಗಿದ್ದು, ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದರು. 1996 ಕರ್ನಾಟಕ ರಾಜ್ಯ ಬಿಜೆಪಿಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. 1999 ಎಸ್. ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ನೇಮಕರಾಗಿದ್ದರು. 2004 ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರದಿಂದ ಮೂರನೇ ಬಾರಿಗೆ 26000 ಮತಗಳ ಅಂತರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.

2006 ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2008 ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದು, 2009 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದಾರೆ.
ಜುಲೈ 2012 ರಲ್ಲಿ, ಬಿಎಸ್ ಯಡಿಯೂರಪ್ಪ ಅವರ ನಿಷ್ಠೆಯಿಂದಾಗಿ ಹಲವಾರು ಬಿಜೆಪಿ ಶಾಸಕರು ಡಿವಿ ಸದಾನಂದ ಗೌಡರ ಬದಲಿಗೆ ಶೆಟ್ಟರ್ ಅವರನ್ನು ನೇಮಿಸಬೇಕೆಂದು ಕರೆ ನೀಡಿದರು. ಹಲವು ಗೊಂದಲಗಳ ನಂತರ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಪ್ರಮಾಣವಚನ ಸ್ವೀಕರಿಸಿದರು. 12 ಜುಲೈ 2012 ರಂದು ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2013ರ ಮೇ 8 ರವರೆಗೆ ಅಧಿಕಾರದಲ್ಲಿದ್ದರು. ಇನ್ನೂ 2013 ಶೆಟ್ಟರ್ ಮತ್ತೆ ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಗೆಲುವು ಸಾಧಿಸಿದರು ಮತ್ತು ತಮ್ಮ ಪಕ್ಷ ಚುನಾವಣೆಯಲ್ಲಿ ಸೋತಿದ್ದರಿಂದ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು.
ಮೇ 2013 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ಶೆಟ್ಟರ್ ಅವರನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತು. ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ವಿಫಲವಾದ ಕಾರಣ ಶೆಟ್ಟರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ತಮ್ಮ ರಾಜೀನಾಮೆಯನ್ನು 8 ಮೇ 2013 ರಂದು ಕರ್ನಾಟಕದ ರಾಜ್ಯಪಾಲರಿಗೆ ಸಲ್ಲಿಸಿದರು. ಮೇ 2013 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕವನ್ನು ವಶಪಡಿಸಿಕೊಂಡಿದ್ದರಿಂದ ಬಿಜೆಪಿ ದೊಡ್ಡ ನಷ್ಟವನ್ನು ಅನುಭವಿಸಿತು.
2013 ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗ ಪ್ರತಿಪಕ್ಷದ ನಾಯಕರಾದರು.ಇನ್ನೂ 2018 ಚುನಾವಣೆಯಲ್ಲಿ ಸ್ಪರ್ಧಿಸಿ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯದರು.
2019 ಸಚಿವರಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರ್ಪಡೆಯಾದರು. 2021 ಜುಲೈ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ನವರು ರಾಜೀನಾಮೆ ನೀಡಿದ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಅವರ ಹೆಸರು ಸಹ ಮುಖ್ಯಮಂತ್ರಿ ರೇಸ್ ನಲ್ಲಿ ಕೇಳಿ ಬಂದಿತ್ತು. ನಂತರ ಹಲವು ಚರ್ಚೆ ಹಾಗೂ ಬಿ ಎಸ್ ಯಡಿಯೂರಪ್ಪ ನವರ ಮಾರ್ಗದರ್ಶನದಂತೆ ಬಸವರಾಜ ಬೊಮ್ಮಾಯಿ ಅವರನ್ನ ಹೈಕಮಾಂಡ್ ಮುಖ್ಯಮಂತ್ರಿಯಾಗಲು ಗ್ರೀನ್ ಸಿಗ್ನಿಲ್ ನೀಡಿದರು.
ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನವನ್ನ ನಿರಾಕರಿಸಿದ್ದು, ಸದ್ಯ 2023 ರ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಈ ಬಾರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಬಹುತೇಕ ಸಿಗಲಿದೆ.












Click it and Unblock the Notifications