ಕರ್ನಾಟಕ ಚುನಾವಣೆ ಫಲಿತಾಂಶ; ಬಿಜೆಪಿ ಮುಕ್ತವಾದ ಕೊಡಗು

ಮಡಿಕೇರಿ, ಮೇ 15; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆಯಾಗಿದೆ. ರಾಜ್ಯದ ಆಡಳಿತ ಪಕ್ಷವಾಗಿದ್ದ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಅದರಲ್ಲೂ ಸುಮಾರು ಎರಡು ದಶಕಗಳಿಂದ ಕೊಡಗು ಜಿಲ್ಲೆಯನ್ನು ಬಿಜೆಪಿ ಭದ್ರಕೋಟೆ ಮಾಡಿಕೊಂಡಿತ್ತು. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ.

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19 ಮತ್ತು ಇತರರು 4 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ (113) ಅಧಿಕ ಸ್ಥಾನದಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೊಡಗು ಜಿಲ್ಲೆ ಬಿಜೆಪಿ ಮುಕ್ತವಾಗಿದ್ದು, ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಬಿಜೆಪಿ ಪಾರುಪತ್ಯ ಅಂತ್ಯಗೊಂಡಿದೆ.

Karnataka Assembly Election Results 2023

ಕಾಂಗ್ರೆಸ್ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಿತ್ತು. ಮಡಿಕೇರಿಯಲ್ಲಿ ಡಾ. ಮಂಥರ್ ಗೌಡ 84879 ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. 2018ರ ಚುನಾವಣೆಯಲ್ಲಿ ಗೆದ್ದಿದ್ದ, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಅಪ್ಪಚ್ಚು ರಂಜನ್ 80477 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ವಿರಾಜಪೇಟೆ ಕ್ಷೇತ್ರದಲ್ಲಿ 2018ರಲ್ಲಿ ಗೆದ್ದಿದ್ದ, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಜಿ. ಬೋಪಯ್ಯ 79500 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನ ಎ. ಎಸ್. ಪೊನ್ನಣ್ಣ 83791 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ವಿಧಾನ ಪರಿಷತ್ ಸದಸ್ಯ ವೀಣಾ ಅಚ್ಚಯ್ಯ ಬಿಜೆಪಿ ಮುಕ್ತ ಕೊಡಗು ನಮ್ಮ ಗುರಿಯಾಗಿದೆ ಎಂದು ಹೇಳಿದ್ದರು. ಈ ಬಾರಿಯ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಜಿಲ್ಲೆಯಲ್ಲಿ ತಿರಸ್ಕರಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲುವ ಮೂಲಕ ಬಿಜೆಪಿಯ ಭದ್ರಕೋಟೆ ಛಿದ್ರವಾಗಿದೆ.

kodagu-results-2023

ಮಡಿಕೇರಿಯಲ್ಲಿ ಗೆದ್ದಿರುವ ಡಾ. ಮಂಥರ್ ಗೌಡ ತಂದೆ ಮಾಜಿ ಸಚಿವ, ಜೆಡಿಎಸ್ ನಾಯಕ ಎ. ಮಂಜು. ಹಾನಸ ಜಿಲ್ಲೆಯ ಅರಕಲಗೊಡು ಕ್ಷೇತ್ರದಲ್ಲಿ ಅವರು ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ತಂದೆ ಜೆಡಿಎಸ್‌ನಿಂದ, ಮಗ ಕಾಂಗ್ರೆಸ್‌ನಿಂದ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ.

ಬಿಜೆಪಿಯ ಅಪ್ಪಚ್ಚು ರಂಜನ್ 6 ಬಾರಿ ಚುನಾವಣೆ ಎದುರಿದ್ದು 5 ಬಾರಿ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು 16 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಅವರು 7ನೇ ಬಾರಿ ಚುನಾವಣಾ ಕಣಕ್ಕಿಳಿದಿದ್ದರು. ಡಾ. ಮಂಥರ್ ಗೌಡ ಮಡಿಕೇರಿಯಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಈ ಬಾರಿ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ವಿರಾಜಪೇಟೆ ಕ್ಷೇತ್ರ; ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕೆ. ಜಿ. ಬೋಪಯ್ಯ ಸೋಲು ಕಂಡಿದ್ದಾರೆ. 71 ವರ್ಷ ವಯಸ್ಸಿನ ಬೋಪಯ್ಯ 4 ಬಾರಿ ಗೆಲುವು ಸಾಧಿಸಿದ್ದು, ಈ ಬಾರಿ 5ನೇ ಚುನಾವಣೆ ಎದುರಿಸಿದ್ದರು. ಇದು ಕೊನೆಯ ಚುನಾವಣೆ ಎಂದು ಅವರು ಹೇಳಿದ್ದರು. ಆದರೆ ಸೋಲು ಕಂಡಿದ್ದು, ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದಾರೆ.

ಹೈಕೋರ್ಟ್‌ನ ವಕೀಲ, ಎ. ಕೆ. ಸುಬ್ಬಯ್ಯ ಪುತ್ರ ಎ. ಎಸ್. ಪೊನ್ನಣ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಜನರ ಜೊತೆ ಗುರುತಿಸಿಕೊಂಡಿದ್ದರು. ಕೆ. ಜಿ. ಬೋಪಯ್ಯ ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲೆಯ ಫಲಿತಾಂಶ

ಕ್ಷೇತ್ರ ಗೆಲುವು ಪಡೆದ ಮತಗಳು ಸೋತವರು ಪಡೆದ ಮತಗಳು
ಮಡಿಕೇರಿ ಡಾ. ಮಂಥರ್ ಗೌಡ (ಕಾಂಗ್ರೆಸ್) 84879 ಅಪ್ಪಚ್ಚು ರಂಜ್ ಎಂಪಿ (ಬಿಜೆಪಿ) 80477
ವಿರಾಜಪೇಟೆ ಎ. ಎಸ್. ಪೊನ್ನಣ್ಣ (ಕಾಂಗ್ರೆಸ್) 83791 ಕೆ. ಜಿ. ಬೋಪಯ್ಯ (ಬಿಜೆಪಿ) 79500
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+