Vijayanagara Constituency: ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ, ಬಿಜೆಪಿಗೆ ಸಿಗುವುದೇ ಹೊಸ ಮುಖ?
ವಿಜಯನಗರ ಹಾಲಿ ಶಾಸಕ ಆನಂದ್ ಸಿಂಗ್ ತನ್ನ ಮಗನಿಗೆ ಟಿಕೆಟ್ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ವತಃ ಅವರಿಗೂ ಟಿಕೆಟ್ ಖಚಿತವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ವಿಜಯನಗರ (ಹೊಸಪೇಟೆ), ಫೆಬ್ರವರಿ. 23: ಹೊಸ ಜಿಲ್ಲೆಯಾಗಿ ರೂಪಗೊಂಡ ಬಳಿಕ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿರುವ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಭರ್ಜರಿ ಪೈಪೋಟಿ ಇದ್ದರೆ, ಬಿಜೆಪಿಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ದೊರೆಯುವುದೋ ಇಲ್ಲವೋ ಎಂಬ ಲೆಕ್ಕಾಚಾರ ನಡೆಯುತ್ತಿದೆ. ಜಾತಿ ಲೆಕ್ಕಾಚಾರದ ಮೇಲೆ ಎಲ್ಲಾ ಪಕ್ಷಗಳ ಕಣ್ಣಿದೆ.
2019ರ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಆನಂದ್ ಸಿಂಗ್, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ವಿರುದ್ಧ 30, 125 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯ ಸಮಯದಲ್ಲಿ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆಯಾಗಿ ಗೆದ್ದಿದ್ದರು, ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಯಿಂದ ಕಣಕ್ಕಿಳಿದು ಮತ್ತೆ ಭಾರಿ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಮಗನಿಗಾಗಿ ಟಿಕೆಟ್ ಕೇಳಿದ ಬಿಜೆಪಿ ಶಾಸಕ ಆನಂದ್ ಸಿಂಗ್!
ಹೊಸ ಜಿಲ್ಲೆಯಲ್ಲಿ ಹೆಗಾದರೂ ಮಾಡಿ ಅಧಿಕಾರ ಉಳಿಸಿಕೊಲ್ಳಬೇಕು ಎನ್ನುತ್ತಿರುವ ಬಿಜೆಪಿ, ಇತ್ತೀಚಿನ ಚುನಾವಣಾ ತಂತ್ರಗಳಲ್ಲಿ ಕೆಲವು ಬದಲಾವಣೆ ಮಾಡಿಕೊಂಡಿದೆ. ಹಲವು ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಭಯವಿದೆ. ಗುಜರಾತ್ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡದೆ ಬದಲಾವಣೆ ಮಾಡಿದ್ದ ಬಿಜೆಪಿ ರಾಜ್ಯದಲ್ಲಿಯೂ ಅದೇ ಮಾರ್ವನ್ನು ಅನುಸರಿಸಲಿದೆ ಎನ್ನಲಾಗಿದೆ. ಹೀಗಾಗಿಯೇ ಹಾಲಿ ಶಾಸಕ ಆನಂದ್ ಸಿಂಗ್ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ.
ಇದರ ವದಂತಿ ಬೆನ್ನಲ್ಲೆ ವಿಜಯನಗರ ಹಾಲಿ ಶಾಸಕ ಆನಂದ್ ಸಿಂಗ್ ತನ್ನ ಮಗನಿಗೆ ಟಿಕೆಟ್ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ವತಃ ಅವರಿಗೂ ಟಿಕೆಟ್ ಖಚಿತವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ವಿಜಯನಗರ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಬೇಕಿರುವ ಭಾರತೀಯ ಜನತಾ ಪಕ್ಷ, ಹೊಸ ಜಿಲ್ಲೆಯಲ್ಲಿ ಪಕ್ಷದಿಂದ ಹೊಸ ಮುಖವನ್ನು ಹುಡುಕುತ್ತಿದೆಯೇ ಎಂಬ ಬಗ್ಗೆ ಚರ್ಚೆಗಳೂ ಬಿಜೆಪಿ ವಲಯದಲ್ಲಿಯೇ ನಡೆಯುತ್ತಿವೆ.

ಬಿಜೆಪಿ ಅಭ್ಯರ್ಥಿಯಾಗಲಿದ್ದಾರಾ ರಾಣಿ ಸಂಯುಕ್ತಾ?
ವಿಜಯನಗರ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, 2008 ರಿಂದಲೂ ಕ್ಷೇತ್ರದಲ್ಲಿ ಸತತವಾಗಿ ನಾಲ್ಕು ಸಲ ಗೆಲುವು ದಾಖಲಿಸಿದ್ದಾರೆ. 2008, 2013ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ, 2018ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದರು. ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಪುನಃ ಬಿಜೆಪಿ ತೆಕ್ಕೆಗೆ ಜಾರಿದ್ದರು. ವಿಜಯನಗರ ಜಿಲ್ಲೆ ರಚನೆ ವಿಷಯ ಮುಂದಿಟ್ಟುಕೊಂಡು 2019ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆಯೇ ಎಂಬುದು ಇನ್ನು ಅಂತಿಮವಾಗಿಲ್ಲ.
ವಿಜಯನಗರ ಎಂದರೆ ಆನಂದ್ ಸಿಂಗ್ ಎನ್ನುತ್ತಿದ್ದವರಿಗೆ ಈಗ ಬಿಜೆಪಿ ನಾಯಕಿ ರಾಣಿ ಸಂಯುಕ್ತಾ ಹೆಸರು ಕೇಳಿಬರುತ್ತಿದೆ. ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂಬ ಹಿರಿಯ ನಾಯಕರ ಭರವಸೆಯಲ್ಲಿ ಅವರು ಪ್ರಚಾರವನ್ನು ಆರಂಭಿಸಿದ್ದಾರೆ ಎಂಬ ವಿಷಯ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಒಟ್ಟಾರೆ, ಕ್ಷೇತ್ರದಲ್ಲಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆ ಮತ್ತು ಆನಂದ್ ಸಿಂಗ್ ವರ್ಚಸ್ಸು ಎರಡು ಸೇರಿದರೇ ಪಕ್ಷ ಇಲ್ಲಿ ಅಧಿಖಾರ ಹಿಡಿಯಬಹಿದಿ ಎನ್ನಲಾಗಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ಉದ್ದ!
ಇತ್ತ, ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಉದ್ದವಾಗಿಯೇ ಇದೆ. ಟಿಕೆಟ್ ಕೋರಿ ಬರೋಬ್ಬರಿ ಹನ್ನೆರಡು ಮಂದಿ ಆಕಾಂಕ್ಷಿಗಲು ಅರ್ಜಿ ಸಲ್ಲಿಸಿದ್ದಾರೆ. ಟ೨ಇಕೆಟ್ ನೀಡುವಂತೆ ಮನವೊಲಿಸಲು ದೆಹಲಿ, ಬೆಂಗಳೂರಿಗೆ ಓಡಾಟುತ್ತಿರುವುದು ಕಾಣಿಸದ ವಿಷಯವೇನಲ್ಲ. ಆಕಾಂಕ್ಷಿಗಳ ಪಟ್ಟಿಯಲ್ಲಿ ವಿಜಯನಗರ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಶಾಸಕ ಎಚ್. ಆರ್. ಗವಿಯಪ್ಪ ಕೂಡ ಸೇರಿದ್ದಾರೆ. ಮಾಜಿ ಶಾಸಕ ಎಚ್. ಆರ್. ಗವಿಯಪ್ಪ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದಾಗ ಬಿಜೆಪಿಗೆ ಸೇರಿದ್ದರು. ಇತ್ತೀಚೆಗೆ ಮತ್ತೆ ಕಾಂಗ್ರೆಸ್‌ಗೆ ಬಂದಿದ್ದಾರೆ.
ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಗವಿಯಪ್ಪ 2018ರ ಚುನಾವಣೆಯ ಸಮಯದಲ್ಲಿ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದಾಗ ಗವಿಯಪ್ಪಗೆ ಟಿಕೆಟ್ ಕೈ ತಪ್ಪಿತು. ಆಗ ಅವರು ಬಿಜೆಪಿ ಸೇರಿದ್ದರು. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 74,986 ಮತಗಳನ್ನು ಪಡೆದು ಸೋತಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಆನಂದ್ ಸಿಂಗ್ 83,214 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆದರೆ ಒಂದೇ ವರ್ಷದಲ್ಲಿ ವಿಜಯನಗರ ಪ್ರತ್ಯೇಕ ಜಿಲ್ಲೆಯಾಗಬೇಕು. ಜಿಂದಾಲ್‌ಗೆ ಭೂಮಿ ಪರಭಾರೆ ಮಾಡಬಾರದು ಎಂಬ ಬೇಡಿಕೆ ಮುಂದಿಟ್ಟುಕೊಂಡು ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದರು.

ಎಸ್‌ಸಿ, ಎಸ್‌ಟಿ ಸಮುದಾಯದ ಮತಗಳು ಹೆಚ್ಚು!
ಕಾಂಗ್ರೆಸ್ ಟಿಕೆಟ್ ಕೋರಿ 12 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಮಾಜಿ ಶಾಸಕ ಎಚ್.ಆರ್. ಗವಿಯಪ್ಪ, ಮುಖಂಡರಾದ ರಾಜಶೇಖರ್ ಹಿಟ್ನಾಳ್, ಸಿರಾಜ್ ಶೇಖ್, ಮಹಮ್ಮದ್ ಇಮಾಮ್ ನಿಯಾಜಿ, ಸೈಯ್ಯದ್ ಮಹಮ್ಮದ್ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿದೆ. ಈ ಪಟ್ಟಿಯಲ್ಲಿಯೂ ಕಾಮಗ್ರೆಸ್‌ಗೆ ವಾಪಸ್ ಆಗಿರುವ ಮಾಜಿ ಶಾಸಕ ಗವಿಯಪ್ಪ ಅಥವಾ ರಾಜಶೇಖರ್ ಹಿಟ್ನಾಳ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ.
ಮತದಾರರ ಸಂಖ್ಯೆ ನೋಡುವುದಾದರೇ, ವಿಜಯನಗರ ಅಸೆಂಬ್ಲಿಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತದಾರರು ಸುಮಾರು 48,293 ಆಗಿದ್ದು, ಪರಿಶಿಷ್ಟ ಪಂಗಡ (ಎಸ್‌ಟಿ) ಮತದಾರರು ಸುಮಾರು 38,540 ಇದ್ದಾರೆ. ಮುಸ್ಲಿಂ ಮತದಾರರು ಸುಮಾರು 49,592 ಇದ್ದು, ಇದರ ಜೊತೆಗೆ ಕುಎಉಬರು, ಲಿಂಗಾಯತರು, ಬ್ರಾಹ್ಮಣರು ಸೇರಿಕೊಂಡಿದ್ದಾರೆ. ಗ್ರಾಮೀಣ ಮತದಾರರು ಸುಮಾರು 54,859 ಇದ್ದರೇ, ನಗರ ಪ್ರದೇಶದ ಮತದಾರರು ಸುಮಾರು 1,81,319 ಇದೆ.
ಒಟ್ಟಾರೆ, ಟಿಕೆಟ್ ಘೋಷನೆಯಾಗದೇ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎನ್ನುವುದನ್ನು ನಿರ್ಧರಿಸಲು ಸಾಧ್ಯವಿಲ್ಲ. ಬಿಜೆಪಿಯಿಂದ ಮತ್ತೆ ಆನಂದ್ ಸಿಂಗ್ ನಿಲ್ಲುತ್ತಾರೆಯೇ ಅಥವಾ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತಾರೆಯೇ ಅಥವಾ ಬಿಜೆಪಿ ಹೊಸ ಮುಖವನ್ನು ತಂದು ಕೂರಿಸಲಿದೆಯೇ ತಿಳಿಯದು. ಕಾಂಗ್ರೆಸ್ ಶೀಘ್ರದಲ್ಲಿ 130 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಾಗಿ ಹೇಳಿರುವ ಕಾರಣ ಆದಷ್ಟು ಬೇಗ ಟಿಕೆಟ್ ಗೊಂದಲಕ್ಕೆ ತೆರಬೀಳಲಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications