Get Updates
Get notified of breaking news, exclusive insights, and must-see stories!

Karnataka Assembly Elections 2023: ಬೆಂಗಳೂರು ಕೇಂದ್ರದ ಟಿಕೆಟ್ ಆಕಾಂಕ್ಷಿಗಳು

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಬೆಂಗಳೂರು ಕೇಂದ್ರ ಕ್ಷೇತ್ರದ ಹಾಲಿ ಸಂಸದ ಬಿಜೆಪಿಯ ಪಿ.ಸಿ. ಮೋಹನ್. ಈ ಕ್ಷೇತ್ರದಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತದೆ.

ಶಿವಾಜಿನಗರ, ಶಾಂತಿನಗರ, ಸರ್ವಜ್ಞ ನಗರ, ಚಾಮರಾಜಪೇಟೆ, ಮಹದೇವಪುರ, ಗಾಂಧಿನಗರ, ರಾಜಾಜಿನಗರ ಮತ್ತು ಸಿ ವಿ ರಾಮನ್ ನಗರ ಇಷ್ಟು ವಿಧಾನಸಭಾ ಕ್ಷೇತ್ರಗಳು ಈ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ.

ಬೆಂಗಳೂರಿನ ಹೃದಯಭಾಗ ಎನ್ನಬಹುದಾದ ಈ ಕ್ಷೇತ್ರಗಳೂ ನಗರದ ಅಭಿವೃದ್ಧಿಗೆ ಭಾರಿ ಕೊಡುಗೆ ನೀಡುವಂತಹವು. ಆದರೂ ಇಲ್ಲಿಯೂ ಅನೇಕ ಸಮಸ್ಯೆಗಳಿವೆ. ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇದ್ದರೇ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರ ಜೆಡಿಎಸ್‌ನ ಒಬ್ಬ ಶಾಸಕರು ಇಲ್ಲಿಲ್ಲ.

ಮಕರ ಸಂಕ್ರಾಂತಿ ವಿಶೇಷ ಪುಟ

ಹಾಗಾದರೇ ಈ ಬಾರಿ ಹಾಲಿ ಶಾಸಕರಿಗೆ ಪಕ್ಷ ಮಣೆ ಹಾಕಲಿದೆಯೋ, ಹೊಸ ಮುಖಗಳಿಗೆ ಟಿಕೆಟ್ ನೀಡಲಿದೆಯೋ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಕ್ಷೇತ್ರಗಳ ಶಾಸಕರುಗಳು ಮತ್ತು ಟಿಕೆಟ್ ಆಕಾಂಕ್ಷಿಗಳು ಯಾರು ಎಂಬುದು ಇಲ್ಲಿದೆ.

 ಶಿವಾಜಿನಗರ: ರಿಜ್ವಾನ್ ಅರ್ಷದ್ (ಕಾಂಗ್ರೆಸ್)

ಶಿವಾಜಿನಗರ: ರಿಜ್ವಾನ್ ಅರ್ಷದ್ (ಕಾಂಗ್ರೆಸ್)

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಿಜ್ವಾನ್ ಅರ್ಷದ್. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ 2019 ರಲ್ಲಿ ಗೆಲುವು ಸಾಧಿಸಿದ್ದರು. ಶಿವಾಜಿನಗರ ಕ್ಷೇತ್ರದಲ್ಲಿ ತಮ್ಮದೆ ಆದ ಛಾಪು ಹೊಂದಿರುವ ಇವರು, ಈ ಬಾರಿಯೂ ಕಾಂಗ್ರೆಸ್‌ನ ಆಯ್ಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಶಿವಾಜಿನಗರಕ್ಕೆ ಹೊಸ ರೂಪ ಕೊಟ್ಟಾಗಿದೆ. ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿರುವುದು ಇವರಿಗೆ ಮತ್ತೆ ಕಾಂಗ್ರೆಸ್ ಟಿಕೆಟ್ ನೀಡುವುದಲ್ಲಿ ಸಂಶಯವಿಲ್ಲ.

ಇನ್ನು ಭಾರತೀಯ ಜನತಾ ಪಾರ್ಟಿಯಿಂದ ಎಂ ಸರವಣಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. ಕಳೆದ ಬಾರಿ ಕಾಂಗ್ರೆಸ್‌ನ ರಿಜ್ವಾನ್ ಅರ್ಷದ್ ವಿರುದ್ಧ 13,521 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಈ ಬಾರಿ ಪೈಪೋಟಿ ನೀಡಲು ಸಜ್ಜಾಗಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ತನ್ವೀರ್ ಅಹ್ಮದ್ ನಿಂತಿದ್ದರು. ಆದರೆ, ಇಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಕೂಡ ಕಣಕ್ಕಿಳಿಯಲಿದ್ದಾರೆ.

 ಶಾಂತಿನಗರ: ಎನ್ ಎ ಹ್ಯಾರಿಸ್ (ಕಾಂಗ್ರೆಸ್)

ಶಾಂತಿನಗರ: ಎನ್ ಎ ಹ್ಯಾರಿಸ್ (ಕಾಂಗ್ರೆಸ್)

ಶಾಂತಿನಗರ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದು. 2018ರ ಕಳೆದ ಚುನಾವಣೆಯಲ್ಲಿ ಇಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್ ಎ ಹ್ಯಾರಿಸ್ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ಭದ್ರಕೋಟೆ ಎನ್ನಲಾಗುತ್ತಿರುವ ಈ ಕ್ಷೇತ್ರ ಕಳೆದ ಕೆಲವು ವರ್ಷಗಳೀಂದ ಭಾರಿ ಚರ್ಚೆಗೂ ಕಾರಣವಾಗಿದೆ. ಕ

ಉತ್ತಮ ಅಂತರದಿಂದ ಗೆಲುವು ಸಾಧಿಸಿದ್ದ ಹಾಲಿ ಶಾಸಕ ಹ್ಯಾರಿಸ್‌ಗೆ ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆಯಿದೆ. ಇನ್ನು, ಕಳೆದ ಬಾರಿ ಹ್ಯಾರಿಸ್ ಎದುರು ಸೋಲು ಕಂಡಿದ್ದ ಭಾರತೀಯ ಜನತಾ ಪಾರ್ಟಿಯ ವಸುದೇವ ಮೂರ್ತಿಗೆ ಈ ಬಾರಿ ಟಿಕೆಟ್ ಸಿಗುತ್ತದೆಯಾ ಎಂಬುದು ಕಾದು ನೋಡಬೇಕಿದೆ. 18, 205 ಮತಗಳ ಅಂತರದಿಂದ ಸೋಲು ಕಂಡಿದ್ದ ವಸುದೇವ ಮೂರ್ತಿ ಬದಲಿಗೆ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಲಿದೆಯಾ ಎಂಬುದು ಇನ್ನೇನು ತಿಳಿಯಲಿದೆ.

ಈ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಕಳೆದ ಬಾರಿ ಶ್ರೀಧರ ರೆಡ್ಡಿ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಈ ಬಾರಿ ಪಂಚರತ್ನ ಯಾತ್ರೆ ಎಂಬಂತಹ ಹಲವು ಕಾರ್ಯಕ್ರಮಗಳ ಮೂಲಕ ಜನರನ್ನು ತಲುಪುತ್ತಿರುವ ಜೆಡಿಎಸ್ ಇಲ್ಲಿ ಹೊಸ ಅಭ್ಯರ್ಥಿಗೆ ಮಣಿ ಹಾಕಬಹುದು.

 ಸರ್ವಜ್ಞ ನಗರ: ಕೆ ಜೆ ಜಾರ್ಜ್ (ಕಾಂಗ್ರೆಸ್)

ಸರ್ವಜ್ಞ ನಗರ: ಕೆ ಜೆ ಜಾರ್ಜ್ (ಕಾಂಗ್ರೆಸ್)

ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಸರ್ವಜ್ಞನಗರ ಕ್ಷೇತ್ರದ ಹಾಲಿ ಶಾಸಕ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಕೆ ಜೆ ಜಾರ್ಜ್. ಕಳೆದ ಮೂರು ಬಾರಿಯಿಂದಲೂ ಕ್ಷೇತ್ರದ ಮೇಲೆ ಹಿಡಿತ ಹೊಂದಿರುವ ಕೆ.ಜೆ.ಜಾರ್ಜ್ ಈ ಬಾರಿಯೂ ಇಲ್ಲಿಂದಲೇ ಸ್ಪರ್ಥಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕೆ.ಜೆ.ಜಾರ್ಜ್ ಅವರ ಭದ್ರಕೋಟೆಯಾಗಿರುವ ಸರ್ವಜ್ಞನಗರದಲ್ಲಿ ಕಳೆದ ಚುನಾವಣೆಯಲ್ಲಿ ಬರೋಬ್ಬರಿ 53,304 ಮತಗಳ ಅಂತರದಿಂದ ಗೆಲವು ಸಾಧಿಸಿದ್ದರು. 2008ರಿಂದಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಕೆ.ಜೆ. ಜಾರ್ಜ್ ಸ್ಪರ್ಧಿಸುತ್ತಿದ್ದಾರೆ.

ಬಿಜೆಪಿ ಇಲ್ಲಿ ಪ್ರತಿ ಬಾರಿಯೂ ತನ್ನ ಅಭ್ಯರ್ಥೀಗಳನ್ನು ಬದಲಿಸುತ್ತಲೆ ಇದೆ. ಕಳೆದ ಬಾರಿ ಭಾರತೀಯ ಜನತಾ ಪಾರ್ಟಿಯ ಎಂ ಎನ್ ರೆಡ್ಡಿ 53304 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಹೀಗಾಗಿ ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಮೇಲೆಯೇ ತಿಳಿಯಲಿದೆ.

 ಚಾಮರಾಜಪೇಟೆ: ಜಮೀರ್ ಅಹ್ಮದ್ ಖಾನ್ (ಕಾಂಗ್ರೆಸ್)

ಚಾಮರಾಜಪೇಟೆ: ಜಮೀರ್ ಅಹ್ಮದ್ ಖಾನ್ (ಕಾಂಗ್ರೆಸ್)

ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್. ಮೊದಲು ಜೆಡಿಎಸ್‌ ಪಕ್ಷದಲ್ಲಿದ್ದ ಜಮೀರ್ ಬಳಿಕ ಕಾಂಗ್ರೆಸ್ ಸೇರಿ, ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಚಾಮರಾಜಪೇಟೆ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. 2018 ರಲ್ಲಿ ಭಾರತೀಯ ಜನತಾ ಪಾರ್ಟಿಯ ಎಂ. ಲಕ್ಷ್ಮೀನಾರಾಯಣ ವಿರುದ್ಧ 33,137 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಬೆಂಗಳೂರು ನಗರದಲ್ಲಿ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕರಲ್ಲಿ ಇವರು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ.

2005 ರಿಂದಲೂ ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸೋಲು ಎಂಬುದು ಕಂಡಿಲ್ಲ. ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದರೂ ಗೆಲುವು ಅವರದ್ದೇ ಹೀಗಾಗಿ ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಅವರೇ.

ಬಿಜೆಪಿಯ ಎಂ ಲಕ್ಷ್ಮೀನಾರಾಯಣ ಅವರಿಗೆ ಮತ್ತೆ ಮಣೆ ಹಾಕುವ ಲೆಕ್ಕಾಚಾರಗಳಿವೆ. ಇಲ್ಲಿ ಜೆಡಿಎಸ್‌ ಕೂಡ ಮತಗಳನ್ನು ವಿಭಜಿಸಲಿದೆ. ಕಳೆದ ಬಾರಿ ಜೆಡಿಎಸ್‌ನಿಂದ ಅಲ್ತಾಫ್ ಸ್ಪರ್ಧಿಸಿದ್ದರು. ಈ ಬಾರಿ ಕುಮಾರಸ್ವಾಮಿ ಅವರ ಲೆಕ್ಕಾಚಾರ ಏನಿರಲಿದೆಯೋ?

 ಮಹದೇವಪುರ: ಅರವಿಂದ ಲಿಂಬಾವಳಿ ( ಬಿಜೆಪಿ)

ಮಹದೇವಪುರ: ಅರವಿಂದ ಲಿಂಬಾವಳಿ ( ಬಿಜೆಪಿ)

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪ್ರಮುಖ ವಿಧಾನಸಭಾ ಕ್ಷೇತ್ರ ಮಹದೇವಪುರ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಜಯ ಗಳಿಸಿದ್ದರು. ಮಹದೇವಪುರ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ.

ಕಳೆದ ಮೂರು ಬಾರಿಯಿಂದಲೂ ಭಾರತೀಯ ಜನತಾ ಪಾರ್ಟಿ ಯ ಅರವಿಂದ ಲಿಂಬಾವಳಿ ಗೆಲುವು ಸಾಧಿಸುತ್ತಿದ್ದಾರೆ. ಹೀಗಾಗಿ ಈ ಬಾರಿಯೂ ಅವರೇ ಬಿಜೆಪಿಯ ಅಭ್ಯರ್ಥಿಯಾಗಲಿದ್ದಾರೆ.

ಇನ್ನು, 2018 ರಲ್ಲಿ 17,784 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಎ. ಸಿ. ಶ್ರೀನಿವಾಸ್‌ಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆಯಿದೆ. ಕಳೆದೆರಡು ಬಾರಿಯಿಂದಲೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹದೇವಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ ಎ ಸಿ ಶ್ರೀನಿವಾಸ್‌. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿಯಿದೆ.

 ಗಾಂಧಿನಗರ: ದಿನೇಶ್ ಗುಂಡೂರಾವ್ (ಕಾಂಗ್ರೆಸ್)

ಗಾಂಧಿನಗರ: ದಿನೇಶ್ ಗುಂಡೂರಾವ್ (ಕಾಂಗ್ರೆಸ್)

ಗಾಂಧಿನಗರ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದು. 2018, ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯ ಗಳಿಸಿದ್ದರು.

2018 ರಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಗೆಲುವು ಸಾಧಿಸಿದ್ದರು. ಭಾರತೀಯ ಜನತಾ ಪಾರ್ಟಿಯ ಸಪ್ತಗಿರಿ ಗೌಡ 10,070 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.

ಈ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ದಿನೇಶ್ ಗುಂಡೂರಾವ್ ಗೆ ಟಿಕೆಟ್ ನೀಡುವುದರಲ್ಲಿ ಸಂಶಯವಿಲ್ಲ. 1999ರಿಂದ ಗಾಂಧಿನಗರದಲ್ಲಿ ಸೋಲಿಲ್ಲದ ಸರದಾರನಂತೆ ಗೆಲುವು ಸಾಧಿಸುತ್ತಾ ಬಂದಿರುವ ಇವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪುತ್ರ.

ಇಂಜಿನಿಯರಿಂಗ್ ಪದವೀಧರರಾದ ದಿನೇಶ್ ಗುಂಡೂರಾವ್ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದರು. ಯವ ಕಾಂಗ್ರೆಸ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಇನ್ನು, ಪಕ್ಷದಲ್ಲಿ ಹಲವು ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ಸಪ್ತಗಿರಿ ಗೌಡಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಯಿದೆ. ಆದರೆ, ಕಳೆದ ಬಾರಿ ಬಿಜೆಪಿ ಮತ್ತು ಜೆಡಿಎಸ್‌ನ ನಾರಾಯಣಸ್ವಾಮಿ ನಡುವೆ ತೀವ್ರ ಪೈಪೋಟಿಯಿತ್ತು. ಈ ಬಾರಿಯೂ ಜೆಡಿಎಸ್ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಗಳು ಹೆಚ್ಚು.

 ರಾಜಾಜಿನಗರ: ಎಸ್ ಸುರೇಶ್ ಕುಮಾರ್ (ಬಿಜೆಪಿ)

ರಾಜಾಜಿನಗರ: ಎಸ್ ಸುರೇಶ್ ಕುಮಾರ್ (ಬಿಜೆಪಿ)

ಚುನಾವಣಾ ಸಮರಕ್ಕೆ ಸಜ್ಜಾಗಿರುವ ರಾಜಾಜಿನಗರ ಕ್ಷೇತ್ರದ ಹಾಲಿ ಶಾಸಕ ಎಸ್ ಸುರೇಶ್ ಕುಮಾರ್. 2019ರ ಆಗಸ್ಟ್ 20 ರಿಂದ 26 ಜುಲೈ 2021 ರವರೆಗೆ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ರಾಜ್ಯ ಸಚಿವರಾಗಿದ್ದರು. ಇವರೇ ಈ ಬಾರಿಯೂ ರಾಜಾಜಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.

2018 ರಲ್ಲಿ ಭಾರತೀಯ ಜನತಾ ಪಾರ್ಟಿಯ ಎಸ್. ಸುರೇಶ್ ಕುಮಾರ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಜಿ. ಪದ್ಮಾವತಿ ವಿರುದ್ಧ 9,453 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದರು. ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿಯಲಿದ್ದು, ಜೆಡಿಎಸ್ ಹೇಳ ಹೆಸರಿಲ್ಲದಂತಿದೆ.

ಈ ಬಾರಿ ಕಾಂಗ್ರೆಸ್‌ನಿಂದ ಯುವ ನಾಯಕಿ ಭವ್ಯ ನರಸಿಂಹಮೂರ್ತಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಈಗಾಗಲೇ ಅವರು ಪ್ರಚಾರಕ್ಕಾಗಿ ಹಲವು ಕಸರತ್ತುಗಳನ್ನು ಆರಂಭಿಸಿದ್ದಾರೆ. ಇನ್ನು ಮಾಜಿ ಮೇಯರ್ ಪದ್ಮಾವತಿ ಮತ್ತು ಸಾ.ರಾ.ಗೋವಿಂದು ಹೆಸರು ಕೂಡಾ ಕಾಂಗ್ರೆಸ್ಸಿನಿಂದ ಕೇಳಿ ಬರುತ್ತಿದೆ.

 ಸಿ ವಿ ರಾಮನ್ ನಗರ: ಎಸ್. ರಘು (ಬಿಜೆಪಿ)

ಸಿ ವಿ ರಾಮನ್ ನಗರ: ಎಸ್. ರಘು (ಬಿಜೆಪಿ)

ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಸಿವಿ ರಾಮನ್ ನಗರ ಕ್ಷೇತ್ರದ ಹಾಲಿ ಶಾಸಕ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಎಸ್ ರಘು. ಈ ಬಾರಿಯೂ ಸಿವಿ ರಾಮನ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.

ಕಳೆದ ಬಾರಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಸಂಪತ್ ರಾಜ್ ವಿರುದ್ಧ 12, 227 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಈ ಬಾರಿಯೂ ಕಾಂಗ್ರೆಸ್‌ನಿಂದ ಸಂಪತ್ ರಾಜ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಒಟ್ಟು ಎಂಟು ಕ್ಷೇತ್ರಗಳಲ್ಲಿ ಒಟ್ಟು 18.33 ಲಕ್ಷ ಮತದಾರರಿದ್ದಾರೆ. ಇದರಲ್ಲಿ 9.51 ಲಕ್ಷ ಪುರುಷರು ಮತ್ತು 8.82 ಲಕ್ಷ ಮಹಿಳಾ ಮತದಾರರಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಯಾವುದೇ ಇದ್ದರೂ, ಇವೆಲ್ಲಾ ಸಂಭಾವ್ಯ ಅಭ್ಯರ್ಥಿಗಳಷ್ಟೇ. ಪಕ್ಷಗಳು ಅಧಿಕೃತವಾಗಿ ಘೋಷಿಸುವವರೆಗೂ ಯಾವ ಕ್ಷೇತ್ರದಿಂದ ಯಾರು ಕಣ್ಣಕ್ಕೆ ಇಳಿಯಲಿದ್ದಾರೆ ಎಂಬುದು ನಿಗೂಢವೇ ಸರಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+