Karnataka Budget 2023 PDF ; ಬಜೆಟ್ ಕನ್ನಡ ಕಾಪಿ ಹೀಗೆ ಡೌನ್‌ಲೋಡ್ ಮಾಡಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್‌ನಲ್ಲಿ ಮಂಡನೆ ಮಾಡಿದ್ದಾರೆ. ಬಜೆಟ್ ಕನ್ನಡ ಪ್ರತಿ ಡೌನ್‌ಲೋಡ್ ಮಾಡುವುದು ಹೇಗೆ?
ಬೆಂಗಳೂರು, ಫೆಬ್ರವರಿ 17; ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಒಟ್ಟು ಬಜೆಟ್ ಗಾತ್ರ 309182 ಕೋಟಿ ರೂ. ಆಗಿದೆ.
ಶುಕ್ರವಾರ ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೂ ಮುನ್ನ ಬೆಂಗಳೂರಿನ ಆರ್. ಟಿ. ನಗರದ ಮುತ್ತಪ್ಪ ಬ್ಲಾಕ್‌ನ ಶ್ರೀ ಕಂಠೇಶ್ವರ ದೇವಾಲಯ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ಬಜೆಟ್‌ನ ಕನ್ನಡ ಪ್ರತಿ ಡೌನ್‌ಲೋಡ್ ಮಾಡಿ
ಇದಕ್ಕೂ ಮೊದಲು ಮುಖ್ಯಮಂತ್ರಿಗಳಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್‌ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸಂಪ್ರದಾಯದಂತೆ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಭಾಷಣಕ್ಕೆ ಅನುಮೋದನೆ ಪಡೆದುಕೊಂಡರು. 10.15ಕ್ಕೆ ಬಜೆಟ್ ಭಾಷಣವನ್ನು ಆರಂಭಿಸಿದರು.
ಮುಖ್ಯಮಂತ್ರಿಗಳು ತಮ್ಮ ಬಜೆಟ್ ಭಾಷಣದಲ್ಲಿ, ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 4.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ.
ಇದೇ ಸಂದರ್ಭದಲ್ಲಿ G-20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದಿರುವುದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಜಾಗತಿಕ ಮನ್ನಣೆ ಸಿಕ್ಕಿರುವ ಪ್ರತೀಕವಾಗಿದೆ. ನಾನು ಅವರನ್ನು ಹೃತೂರ್ವಕವಾಗಿ ಅಭಿನಂದಿಸುತ್ತೇನೆ. G-20 ಶೃಂಗಸಭೆಗೆ ಪೂರ್ವಭಾವಿಯಾಗಿ ರಾಜ್ಯದಲ್ಲಿ 14 ಸಭೆಗಳು ನಡೆಯುತ್ತಿರುವುದು, ರಾಜ್ಯದ ಪ್ರಗತಿಪರ ಚಿಂತನೆ ಹಾಗೂ ಮುನ್ನಡೆಯನ್ನು ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಲು ದೊರೆತ ಸುವರ್ಣವಕಾಶ ಎಂದು ಭಾವಿಸಿದ್ದೇನೆ ಎಂದರು.
ಮುಖ್ಯಮಂತ್ರಿಗಳು ಈ ಆಯವ್ಯಯವು ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯದ ಭರವಸೆಯಾಗಿದೆ. ಈ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಉಜ್ವಲ ಭವಿಷ್ಯವನ್ನು ಕಾರ್ಯಕ್ರಮಗಳನ್ನು ರೂಪಿಸುವ ಅನುಷ್ಠಾನಗೊಳಿಸುತ್ತಿರುವ ಸಾರ್ಥಕ ಭಾವದೊಂದಿಗೆ, ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ನಮ್ಮ ಕರ್ತವ್ಯಗಳು, ಗುರಿಗಳು ಹಾಗೂ ಫಲಿತಾಂಶಗಳ ದೂರದೃಷ್ಟಿಯೊಂದಿಗೆ ಆಯವ್ಯಯವನ್ನು ಮಂಡಿಸುತ್ತಿದ್ದೇನೆ ಎಂದರು.
ಹಣಕಾಸು ವರ್ಷದ ಮೊದಲ ಎರಡು ತಿಂಗಳಿನಲ್ಲಿಯೇ ಬಹಳಷ್ಟು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಮೂಲಕ ಆಯವ್ಯಯದ ಸಕಾಲಿಕ ಹಾಗೂ ತ್ವರಿತ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮಾನವ ಅಭಿವೃದ್ಧಿ ಮತ್ತು ಆರ್ಥಿಕ ಅಭಿವೃದ್ಧಿಗೆ ಸಮಾನ ಆದ್ಯತೆ ನೀಡಿ, ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ಮಾಡಲಾಗಿದೆ ಎಂದು ಭಾಷಣ ಆರಂಭಿಸಿದರು.
Download











Click it and Unblock the Notifications