ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರಿಚಯ

|
Google Oneindia Kannada News

ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಎರಡು ಮೂರು ದಿನದಲ್ಲಿ ಅವರು ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.

73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯರು. ಪ್ರಸ್ತುತ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರು. ನಾಲ್ಕು ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.

Breaking news; ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ Breaking news; ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ

2014ರ ಸೆಪ್ಟೆಂಬರ್‌ನಿಂದ ಗುಜರಾತ್ ಮೂಲದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ರಾಜ್ಯಪಾಲರ ಅವಧಿ 5 ವರ್ಷಗಳು. ವಜುಭಾಯಿ ವಾಲಾ ಅವಧಿ ಪೂರ್ಣಗೊಂಡಿದ್ದರೂ ನೂತನ ರಾಜ್ಯಪಾಲರ ನೇಮಕವಾಗಿರಲಿಲ್ಲ.

72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು 72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು

ಕೇಂದ್ರ ಗೃಹ ಸಚಿವಾಲಯ ರಾಜ್ಯಪಾಲರನ್ನು ಆಯ್ಕೆ ಮಾಡಿ ಅಂತಿಮ ಒಪ್ಪಿಗೆಗಾಗಿ ರಾಷ್ಟ್ರಪತಿಗಳಿಗೆ ಕಳಿಸುತ್ತದೆ. ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ನೇಮಕಾತಿ ಅಧಿಸೂಚನೆ ಪ್ರಕಟಿಸುವಾಗ ಮುಂದಿನ ಆದೇಶದ ತನಕ ಎಂಬ ಒಕ್ಕಣೆಯೊಂದಿಗೆ ಪ್ರಕಟಿಸಲಾಗುತ್ತದೆ. ಆದ್ದರಿಂದ ಅವಧಿ ಪೂರ್ಣಗೊಂಡರೂ ಮುಂದಿನ ಆದೇಶದ ತನಕ ರಾಜ್ಯಪಾಲರು ಮುಂದುವರೆಯಬಹುದಾಗಿದೆ.

ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ಕರ್ನಾಟಕದ ವಿವಿಧ ಸಚಿವರು, ಪ್ರತಿಪಕ್ಷದ ನಾಯಕರು ನೂತನ ರಾಜ್ಯಪಾಲರಾಗಿ ಆಯ್ಕೆಯಾದ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರು.

ಥಾವರ್ ಚಂದ್ ಗೆಹ್ಲೋಟ್

ಥಾವರ್ ಚಂದ್ ಗೆಹ್ಲೋಟ್

1948, ಮೇ 18ರಂದು ಥಾವರ್ ಚಂದ್ ಗೆಹ್ಲೋಟ್ ಮಧ್ಯಪ್ರದೇಶ ರಾಜ್ಯದ ನಾಗ್ಡಾ ಜಿಲ್ಲೆಯ ರುಪ್ಟಾ ಗ್ರಾಮದಲ್ಲಿ ಜನಿಸಿದರು. ದಲಿತ ಸಮುದಾಯಕ್ಕೆ ಸೇರಿದ ಇವರು ಪದವಿ ವ್ಯಾಸಂಗ ಮಾಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಪತ್ನಿ ಅನಿತಾ ಗೆಹ್ಲೋಟ್, ಮೂವರು ಪುತ್ರರು. ಪುತ್ರಿ ಯೋಗಿತಾ ಸೋಲಂಕಿ ಕೆಲವು ದಿನಗಳ ಹಿಂದೆ ಕೋವಿಡ್‌ಗೆ ಬಲಿಯಾಗಿದ್ದಾರೆ.

ರಾಜಕೀಯ ಜೀವನ

ರಾಜಕೀಯ ಜೀವನ

ಥಾವರ್ ಚಂದ್ ಗೆಹ್ಲೋಟ್ ಆರ್‌ಎಸ್‌ಎಸ್ ಮೂಲಕ ರಾಜಕೀಯಕ್ಕೆ ಬಂದಿದ್ದಾರೆ. ನಾಗ್ಡಾ ಜಿಲ್ಲೆಯ ನಗರ ಕಾರ್ಯವಾಹಕ್ ಆಗಿದ್ದರು. ಭಾರತೀಯ ಮಜ್ದೂರ್ ಸಂಘದ ಖಜಾಂಚಿಯಾಗಿ, ಕಾರ್ಯದರ್ಶಿಯಾಗಿದ್ದರು.1968 ರಿಂದ 71ರ ಅವಧಿಯಲ್ಲಿ ಕಾರ್ಮಿಕ ಹೋರಾಟದಲ್ಲಿ ತೊಡಗಿದ್ದಾಗ ಹಲವು ಬಾರಿ ಪೊಲೀಸರು ವಶಕ್ಕೆ ಪಡೆದಿದ್ದರು. 10 ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿಯೂ ಇದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಹ ಜೈಲುವಾಸ ಅನುಭವಿಸಿದ್ದಾರೆ.

ಲೋಕಸಭೆ ಸದಸ್ಯರಾಗಿ ಆಯ್ಕೆ

ಲೋಕಸಭೆ ಸದಸ್ಯರಾಗಿ ಆಯ್ಕೆ

1996 ರಿಂದ 2009ರ ತನಕ ಶಾಜಾಪುರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಡಾ. ಬಿ. ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. 2014ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾದರು. 2018ರಲ್ಲಿ ಮಧ್ಯಪ್ರದೇಶದಿಂದ 2ನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಕರ್ನಾಟಕ ಉಸ್ತುವಾರಿಯಾಗಿದ್ದರು

ಕರ್ನಾಟಕ ಉಸ್ತುವಾರಿಯಾಗಿದ್ದರು

ಥಾವರ್ ಚಂದ್ ಗೆಹ್ಲೋಟ್ ಬಿಜೆಪಿ ಪಕ್ಷ ಸಂಘಟನೆಯಲ್ಲಿಯೂ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. 2013ರಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. ಈಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎರಡು ಮೂರು ದಿನದಲ್ಲಿ ಅವರು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

English summary
​Thaawarchand Gehlot appointed as new governor of Karnataka. Here are the profile of the BJP leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X