ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ವಿವರ
ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದೆ. ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇಂತಹ ಸಮಯದಲ್ಲಿ ಯೋಜನೆ ಉಪಯೋಗಕ್ಕೆ ಬರುತ್ತದೆ.
ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಇಂತಹ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ 'ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ' ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು 2012ರಲ್ಲಿ ಜಾರಿಗೆ ತಂದಿದೆ.

ಯೋಜನೆಯಡಿ ಸಿಗುವ ಸೌಲಭ್ಯಗಳು; ಈ ಯೋಜನೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸುತ್ತದೆ. ವಯೋಮಿತಿ 20 ರಿಂದ 70 ವರ್ಷಗಳು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತದೆ.
ಯೋಜನೆಗೆ ಅರ್ಹರಾಗಲು ಚಾಲಕರು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯ. ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ. ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮಂಡಳಿಯ ನಿಯಮಾನುಸಾರ ಅಧಿಸೂಚಿಸಲ್ಪಟ್ಟ ಆಯಾಯ ಜಿಲ್ಲೆಯ ನೋಂದಣಿ ಅಧಿಕಾರಿಗಳಿಂದ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.
ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಮರಣ ಹೊಂದಿದಲ್ಲಿ ಅವರ ನಾಮ ನಿರ್ದೇಶಿತರಿಗೆ ರೂ. 5 ಲಕ್ಷ ಪರಿಹಾರ ಸಿಗಲಿದೆ. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ ಫಲಾನುಭವಿಗಳಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ. 2 ಲಕ್ಷದವರೆಗೆ ಪರಿಹಾರ ಸಿಗುತ್ತದೆ. ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ, ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ಗರಿಷ್ಟ ರೂ. 50 ಸಾವಿರವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು. 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ, ಗರಿಷ್ಠ ರೂ. 1 ಲಕ್ಷದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುತ್ತದೆ.
ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ 1 ವರ್ಷದೊಳಗೆ ಮಂಡಳಿಗೆ ಫಲಾನುಭವಿ/ ನಾಮ ನಿರ್ದೇಶಿತರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ, ಫಲಾನುಭವಿಯ ನಾಮ ನಿರ್ದೇಶಿತರು ಕ್ಲೇಮ್ ಅರ್ಜಿಯ ಜೊತೆಗೆ ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಪ್ರಥಮ ವರ್ತಮಾನ ವರದಿ ಮತ್ತು ಊರ್ಜಿತ ಚಾಲನಾ/ ನಿರ್ವಾಹಕ ಪರವಾನಗಿ ಹಾಗೂ ಕ್ಲೀನರ್‌ಗಳು ನೋಂದಣಿ ಗುರುತಿನ ಚೀಟಿ ಲಗತ್ತಿಸಿ ಸಲ್ಲಿಸಬೇಕು.
ಅಪಘಾತದಿಂದ ದುರ್ಬಲತೆ ಉಂಟಾದಲ್ಲಿ ಕ್ಲೇಮ್ ಅರ್ಜಿಯ ಜೊತೆಗೆ ಊರ್ಜಿತ ಚಾಲನಾ/ ನಿರ್ವಾಹಕ ಪರವಾನಗಿ/ ಬ್ಯಾಡ್ಜ್, ಕ್ಲೀನರ್‌ಗಳು ನೋಂದಣಿ ಗುರುತಿನ ಚೀಟಿ, ಪ್ರಥಮ ವರ್ತಮಾನ ವರದಿ ಮತ್ತು ಒಳರೋಗಿ ಆಸ್ಪತ್ರೆ ವೆಚ್ಚ ಹಿಂಪಡೆಯಲು ವೈದ್ಯಕೀಯ ಪ್ರಮಾಣ ಪತ್ರ/ ಬಿಲ್‍ಗಳ ಮೂಲ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಸ್ವೀಕರಿಸಿದ ಕ್ಲೇಮ್ ಅರ್ಜಿಯ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅರ್ಹರಿದ್ದಲ್ಲಿ, ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
ಶೈಕ್ಷಣಿಕ ಸಹಾಯ; ಅಪಘಾತದಿಂದ ಮರಣ ಹೊಂದಿದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ, 1 ನೇ ತರಗತಿಯಿಂದ ಪದವಿ ಪೂರ್ವ/ 12 ನೇ ತರಗತಿಯ ವರೆಗೆ ವಾರ್ಷಿಕ ತಲಾ ರೂ. 10,000ಗಳ ಶೈಕ್ಷಣಿಕ ಧನ ಸಹಾಯ ನೀಡಲಾಗುವುದು.
ಶೈಕ್ಷಣಿಕ ಧನ ಸಹಾಯದ ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಅಥವಾ ನೇರವಾಗಿ ಮಂಡಳಿಗೆ ಸಲ್ಲಿಸಬಹುದು. ಈ ಅರ್ಜಿಯನ್ನು ಪರಿಶೀಲಿಸಿ, ಧನ ಸಹಾಯದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications