Government employee; ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ವಿವರ
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗಾಗಿ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಜಾರಿಗೊಳಿಸಲಿದೆ. ಯೋಜನೆಯ ರೂಪುರೇಷೆ ತಯಾರಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಇದನ್ನು ಉದ್ಘಾಟಿಸಲಿದ್ದಾರೆ.
7ನೇ ವೇತನ ಆಯೋಗದ ಶಿಫಾರಸು ಜಾರಿಗಾಗಿ ಮುಷ್ಕರ ಆರಂಭಿಸಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೇತನ ಹೆಚ್ಚಳದ ಕೊಡುಗೆ ನೀಡಿದ್ದರು. ಶೇ 17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಲಾಗಿದೆ. ಇದು ಏಪ್ರಿಲ್ 2023ರಿಂದ ಜಾರಿಗೆ ಬರಲಿದೆ. ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕು ಎಂದು ನೌಕರರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲು ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ. ಈಗ ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗಾಗಿ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಜಾರಿಗೊಳಿಸಲಿದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾಹಿತಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಯೋಜನೆಯನ್ನು ಶೀಘ್ರದಲ್ಲೇ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಜಾರಿಗೊಳಿಸುವ ಕಾರ್ಯನೀತಿ ಬಗ್ಗೆ ಕೆಲವು ಆರಂಭಿಕ ಸೂಚನೆಗಳನ್ನು ನೀಡಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) (1963ರ ನಿಯಮಗಳು) ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಸರ್ಕಾರಿ ನೌಕರರು ಸರ್ಕಾರದ ಮಾನ್ಯತೆ ಹೊಂದಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ಪಡೆದ ವೈದ್ಯಕೀಯ ವೆಚ್ಚದ ಮರುಪಾವತಿಯನ್ನು ಸಿ. ಜಿ. ಹೆಚ್. ಎಸ್. ಚಿಕಿತ್ಸೆಯ ದರಪಟ್ಟಿಯನ್ವಯ ಆಯಾ ಇಲಾಖಾ ಹಂತದ ನಿಯಂತ್ರಣಾಧಿಕಾರಿಗೆ ಮಂಜೂರು ಮಾಡಲು ಕಲ್ಪಿಸಲಾಗಿದೆ. ಕೆಲವು ತುರ್ತು ಸಂದರ್ಭಗಳಲ್ಲಿ ನೋಂದಾಯಿತವಲ್ಲದ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚದ ಮರುಪಾವತಿಯನ್ನು ಸರ್ಕಾರದ ಹಂತದಲ್ಲಿ ನಿಯಮ ಸಡಿಲಿಸಿ ಮಂಜೂರು ಮಾಡಲಾಗುತ್ತಿದೆ. ಇದಲ್ಲದೆ ಹೊರರೋಗಿ ಚಿಕಿತ್ಸೆಗಳಿಗೆ ಗುರುತಿಸಿರುವ 19 ಖಾಯಿಲೆಗಳ ಸರ್ಕಾರವು ಚಿಕಿತ್ಸೆಗೆ ಸಂಬಂಧಿಸಿದಂತೆ ಭರಿಸಿದ ವೆಚ್ಚವನ್ನು ಅವಕಾಶ ಸರ್ಕಾರಿ ದೀರ್ಘಕಾಲಿಕ ನೌಕರರು ಮರುಪಾವತಿಸಲಾಗುತ್ತಿದೆ.

ಪ್ರಸ್ತುತ ಇರುವ ನಿಯಮಗಳ ಮಾಹಿತಿ
ಈಗ ಇರುವ ನಿಯಮಗಳಡಿ ಸರ್ಕಾರದಿಂದ ಅಂದಾಜು 500 ಖಾಸಗಿ ಆಸ್ಪತ್ರೆಗಳು ಹಾಗೂ 27 ವೈದ್ಯಕೀಯ ರೋಗ ನಿರ್ಧಾರ ಕೇಂದ್ರಗಳನ್ನು ಅಧಿಸೂಚಿಸಲಾಗಿದೆ. ಇದಲ್ಲದೇ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಅವಕಾಶವಿದೆ. ರಾಜ್ಯ ಸರ್ಕಾರವು 2015ರಲ್ಲಿ ಆರಂಭಿಸಿದ 'ಜ್ಯೋತಿ ಸಂಜೀವಿನಿ' ಯೋಜನೆಯಡಿಯಲ್ಲಿ ಏಳು ಮಾರಣಾಂತಿಕ ಖಾಯಿಲೆಗಳಾದ ಹೃದ್ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ರೋಗ, ಸುಟ್ಟಗಾಯ, ಅಪಘಾತ, ನವಜಾತ ಶಿಶು ಹಾಗೂ ಚಿಕ್ಕ ಮಕ್ಕಳ ಖಾಯಿಲೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಜ್ಯೋತಿ ಸಂಜೀವಿನಿ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಯೋಜನೆಯಡಿ 262 ಖಾಸಗಿ ಆಸ್ಪತ್ರೆಗಳನ್ನು ಅಧಿಸೂಚಿಸಲಾಗಿದೆ.
ಈಗಿರುವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುವಲ್ಲಿ ಹಾಗೂ ಅವರು ಭರಿಸಿದ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮರುಪಾವತಿ ಪಡೆಯುವಲ್ಲಿ ಅನುಸರಿಸಬೇಕಾದ ಕ್ಲಿಷ್ಟಕರ ವಿಧಿ ವಿಧಾನಗಳು ಹಾಗೂ ವಿಳಂಬ, ಹೊಸ ಚಿಕಿತ್ಸಾ ವಿಧಾನಗಳು ಲಭ್ಯವಿಲ್ಲದೇ ಇರುವುದು, ಖಾಸಗಿ ಆಸ್ಪತ್ರೆಗಳು ಸರ್ಕಾರಿ ನೌಕರರಿಗೆ ಚಿಕಿತ್ಸೆ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವುದು ಮತ್ತು ಖಾಸಗಿ ಆಸ್ಪತ್ರೆಗಳು ಸಿಜಿಎಚ್‌ಎಸ್ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸುತ್ತಿರುವುದು ಮುಂತಾದ ಹಲವಾರು ತೊಂದರೆಗಳನ್ನು ಅನುಭವಿಸುತ್ತಿರುವುದನ್ನು ಗಮನಿಸಲಾಗಿದೆ. ಇದಲ್ಲದೆ, ಒಂದೇ ಚಿಕಿತ್ಸೆಗೆ ಬೇರೆ ಬೇರೆ ಆಸ್ಪತ್ರೆಗಳು ವಿಭಿನ್ನ ದರಗಳನ್ನು ವಿಧಿಸುತ್ತಿರುವುದು, ಲಾಭದ ಉದ್ದೇಶದಿಂದ ಅನಾವಶ್ಯಕವಾಗಿ ರೋಗಿಗಳನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಳಿಗೆ ಒಳಪಡಿಸುತ್ತಿರುವುದು ಹಾಗೂ ಅನಾವಶ್ಯಕ ಮತ್ತು ದುಬಾರಿ ಔಷಧಿಗಳನ್ನು ಶಿಫಾರಸ್ಸು ಮಾಡುತ್ತಿರುವುದು ಮುಂತಾದ ಇತರೆ ಕೆಲವು ನ್ಯೂನ್ಯತೆಗಳು ಕೂಡ ಸರ್ಕಾರದ ಗಮನಕ್ಕೆ ಬಂದಿರುತ್ತವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2020-21ನೇ ಹಾಗೂ 2021-22ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಶಸ್ತ್ರಚಿಕಿತ್ಸಾ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ಒದಗಿಸುವ ಒಂದು ನೂತನ ಯೋಜನೆಯನ್ನು ಘೋಷಿಸಿರುತ್ತದೆ. ಈ ನೂತನ ಯೋಜನೆಯನ್ನು ರೂಪಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ಹಲವಾರು ಬಾರಿ ಸಮಾಲೋಚಿಸಲಾಗಿದೆ. ಅಂತಿಮವಾಗಿ, ರಾಜ್ಯ ಸರ್ಕಾರಿ ನೌಕರರಿಂದ ಮಾಸಿಕ ವಂತಿಕೆಯನ್ನು ಒಳಗೊಂಡ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (THE KARNATAKA AROGYA SANJEEVINI SCHEME - KASS) ಎಂಬ ಮಹತ್ವಾಕಾಂಕ್ಷಿ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಈ ಸಂಬಂಧ ಒಂದು ವಿಸ್ತ್ರತ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ, ಕೆಲವು ನಿರ್ಧಿಷ್ಟ ಉಲ್ಲೇಖಾಂಶಗಳೊಂದಿಗೆ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಅವರನ್ನು ಕೋರಲಾಗಿತ್ತು.
ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಈ ಯೋಜನೆಯ ವಿಸ್ತ್ರತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಯೋಜನಾ ವರದಿಯಲ್ಲಿನ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿದೆ. ಈ ಆದೇಶ ಹೊರಡಿಸಿದೆ. ಸರ್ಕಾರಕ್ಕೆ ಸಲ್ಲಿಸಿರುವ ಯೋಜನಾ ವರದಿಯನ್ನು ಸರ್ಕಾರವು ಪರಿಶೀಲಿಸಿ, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ನೂತನ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರವು ಆದೇಶಿಸಿದೆ.

ಯೋಜನೆ ಹೇಗೆ ಅನುಷ್ಠಾನವಾಗಲಿದೆ?
ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಬೆಂಗಳೂರು ಈ ಸಂಸ್ಥೆಯ ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ಆದೇಶಿಸಿದೆ. ಈ ಯೋಜನೆಯ ವಾಸ್ತವ ಕಾರ್ಯಾಚರಣೆಯು ಸರ್ಕಾರ ನಿರ್ಧರಿಸುವ ದಿನಾಂಕದಿಂದ ಜಾರಿಗೆ ಬರುತ್ತದೆ. ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ನೋಂದಣಿ ಪ್ರಕ್ರಿಯೆ, ತಂತ್ರಜ್ಞಾನ ಅಭಿವೃದ್ಧಿ, ಖಾಸಗಿ ಆಸ್ಪತ್ರೆಗಳೊಂದಿಗೆ ನೋಂದಾವಣೆ ಪುಕ್ರಿಯೆ, ಖಾಸಗಿ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳ ಸ್ಪಂದನೆ, ಆಯವ್ಯಯ ಬೇಡಿಕೆ, ಸರ್ಕಾರಿ ನೌಕರರ ಅನಿಸಿಕೆ/ ಪ್ರತಿಕ್ರಿಯೆ/ ಕುಂದು ಕೊರತೆಗಳು, ಯೋಜನೆಯ ಆರಂಭಿಕ ಅನುಭವ, ಮುಂತಾದ ಅಂಶಗಳನ್ನು ಅನುಷ್ಠಾನದಿಂದ ಲಭ್ಯವಾಗುವ ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಹಂತ ಹಂತವಾಗಿ ವಿಸ್ತರಿಸಿ ಜಾರಿಗೊಳಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ವೈದ್ಯಕೀಯ ಚಿಕಿತ್ಸೆ ಪಡೆಯಲು ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಗೆ ಸಂಬಂಧಿಸಿದಂತೆ ಪಸ್ತುತ ಜಾರಿಯಲ್ಲಿರುವ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ಗಳಿಗೆ ತಿದ್ದುಪಡಿ ಕೈಗೊಳ್ಳುವುದನ್ನು ಬಾಕಿ ಇಟ್ಟು, ಈ ಯೋಜನೆಯನ್ನು ರೂಪಿಸಲಾಗಿದೆ. ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಪಡೆಯುವ ವೈದ್ಯಕೀಯ ಚಿಕಿತ್ಸೆ ಮತ್ತು ಚಿಕಿತ್ಸಾ ವೆಚ್ಚ ಮರುಪಾವತಿಗೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪ್ರಸ್ತುತ ಜಾರಿಯಲ್ಲಿರುವ 1963 ರ ನಿಯಮಗಳು ಹಾಗೂ ಎರಡೂ ಜಾರಿಯಲ್ಲಿರುತ್ತವೆ. ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹ ಉಂಟಾದಲ್ಲಿ ರಾಜ್ಯ ಸರ್ಕಾರದ ಸ್ಪಷ್ಟಿಕರಣ ಕೋರತಕ್ಕದ್ದು, ಈ ವಿಷಯದಲ್ಲಿ ಸರ್ಕಾರದ ತೀರ್ಮಾನ ಅಂತಿಮವಾಗಿರುತ್ತದೆ.

ಯಾರು, ಯಾರಿಗೆ ಅನ್ವಯವಾಗುತ್ತದೆ?
1963ರ ನಿಯಮಗಳು ಅನ್ವಯವಾಗುವ ರಾಜ್ಯ ಸರ್ಕಾರಿ ನೌಕರರು ಮಾತ್ರ ಈ ಯೋಜನೆಗೆ ಒಳಪಡುತ್ತಾರೆ. ಸಾರ್ವಜನಿಕ ವಲಯದ (Public Sector Establishments) ಇತರೆ ನೌಕರರು ಅಂದರೆ, ಸ್ಥಳೀಯ ಸಂಸ್ಥೆ, ಸ್ವಾಯತ್ತ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಶಾಸನ ಬದ್ಧ ಸಂಸ್ಥೆಗಳು, ಗುತ್ತಿಗೆ/ ಹೊರಗುತ್ತಿಗೆ ನೌಕರರು, ಅರೆಕಾಲಿಕ ನೌಕರರು, ದಿನಗೂಲಿ ನೌಕರರು ಈ ಯೋಜನೆಗೆ ಒಳಪಡುವುದಿಲ್ಲ. ಈಗಾಗಲೇ ಬೇರೆ ಆರೋಗ್ಯ ಯೋಜನೆಯಡಿ ಒಳಪಟ್ಟ ಸರ್ಕಾರಿ ನೌಕರರು (ಉದಾಹರಣೆ; ಪೊಲೀಸ್ ಇಲಾಖೆಯಲ್ಲಿನ 'ಆರೋಗ್ಯ ಭಾಗ್ಯ' ಯೋಜನೆಗೆ ಒಳಪಟ್ಟ ಸರ್ಕಾರಿ ನೌಕರರು) ಈ ಯೋಜನೆಗೆ ಒಳಪಡುವುದಿಲ್ಲ. ರಾಜ್ಯ ಸೇವೆಯಲ್ಲಿ ನಿಯೋಜನೆ/ ಎರವಲು ಸೇವೆಯ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ಸ್ಥಾಪನೆಯ ನೌಕರರು ಈ ಯೋಜನೆಗೆ ಒಳಪಡುವುದಿಲ್ಲ.
'ಸಾರ್ವಜನಿಕ ವಲಯದ ಸ್ಥಾಪನೆ' ಎಂದರೆ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977 . ರ ನಿಯಮ 5 ರಲ್ಲಿ ನಿರ್ಧಿಷ್ಟಪಡಿಸಲಾದ ಸ್ಥಾಪನೆಗಳ ನೌಕರರು. ಎರವಲು ಸೇವೆ/ ನಿಯೋಜನೆ ಮೇರೆಗೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಾಗೂ ಸಾರ್ವಜನಿಕ ವಲಯದ ಸ್ಥಾಪನೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಈ ಯೋಜನೆಗೆ ಒಳಪಡುತ್ತಾರೆ. ಕರ್ನಾಟಕ ನಾಗರಿಕ ಸೇವೆಗಳ ಕಾಯ್ದೆ 1978 ರಡಿ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಈ ಯೋಜನೆಯನ್ನು ಅಳವಡಿಸಿಕೊಂಡಲ್ಲಿ ರಾಜ್ಯ ಉಚ್ಛ ನ್ಯಾಯಾಲಯದ ಹಾಗೂ ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದ ನೌಕರರು ಈ ಯೋಜನೆಗೆ ಒಳಪಡುತ್ತಾರೆ. ವೈದ್ಯಕೀಯ ಚಿಕಿತ್ಸೆ ನೀಡುವ ಸಂಬಂಧ ರಾಜ್ಯ ಸರ್ಕಾರವು ರೂಪಿಸಿರುವ ಪ್ರತ್ಯೇಕ ನಿಯಮಗಳು ಅನ್ವಯವಾಗುವ ಇತರೆ ಯಾವುದೇ ವರ್ಗದ ವ್ಯಕ್ತಿಗಳಿಗೆ ಈ ಯೋಜನೆಯು ಅನ್ವಯವಾಗುವುದಿಲ್ಲ.
ನ್ಯಾಯಾಂಗ ಸೇವೆಯ ಅಧಿಕಾರಿಗಳು ಈ ಯೋಜನೆಗೆ ಒಳಪಡುವುದಿಲ್ಲ. ರಾಜ್ಯ ಸೇವೆಯಲ್ಲಿರುವ ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು (AIS) ಈ ಯೋಜನೆಗೆ ಒಳಪಡುವುದು ಐಚ್ಛಿಕವಾಗಿರುತ್ತದೆ. ಸರ್ಕಾರಿ ನೌಕರ ಮತ್ತು ಆತನ ಕುಟುಂಬದ ಸದಸ್ಯರು ಅಧಿಕೃತವಾಗಿ ನೋಂದಣಿ ಮಾಡಿಕೊಂಡ ನಂತರ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿದೆ.

ಸರ್ಕಾರಿ ನೌಕರನ ಪತಿ ಅಥವಾ ಪತ್ನಿ
'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' ಅನ್ವಯ ವೈದ್ಯಕೀಯ ಚಿಕಿತ್ಸೆ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗೆ ಸಂಬಂಧಿಸಿದಂತೆ 1963 ರ ನಿಯಮಗಳ ನಿಯಮ 2ರಲ್ಲಿನ 'ಕುಟುಂಬ' ಪದವನ್ನು ಅದೇ ಸರ್ಕಾರಿ ವ್ಯಾಖ್ಯಾನದೊಂದಿಗೆ ಮುಂದುವರೆಸಲಾಗುವುದು. ಸರ್ಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ನೌಕರನೊಂದಿಗೆ ಸಾಮಾನವಾಗಿ ವಾಸವಾಗಿದ್ದಲ್ಲಿ ಮತ್ತು ಅವರ ಒಟ್ಟು ಮಾಸಿಕ ಆದಾಯ ಕನಿಷ್ಠ ಕುಟುಂಬ ಪಿಂಚಣಿ (ರೂ 8500/-) ಹಾಗೂ ಚಾಲ್ತಿಯಲ್ಲಿದ್ದ ತುಟ್ಟಿಭತ್ಯೆಯನ್ನು ಒಳಗೊಂಡ ಮೊತ್ತವನ್ನು ಮೀರದಿದ್ದಲ್ಲಿ. ಸರ್ಕಾರಿ ನೌಕರನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿರುವ ಮಕ್ಕಳು (ದತ್ತು ಪಡೆದ ಮಕ್ಕಳು ಮತ್ತು ಮಲಮಕ್ಕಳನ್ನೊಳಗೊಂಡಂತೆ)
ಅರ್ಹತಾದಾಯಕ ಮೊತ್ತ (Eligibility Amount) ಅಂದರೆ KASS ಯೋಜನೆಯಡಿ ನಿಗದಿಪಡಿಸಲಾದ ವೈದ್ಯಕೀಯ ಚಿಕಿತ್ಸಾ ದರಗಳ ಮಿತಿಯಲ್ಲಿ ಲೆಕ್ಕ ಹಾಕಲಾದ ದರಗಳ ಮೊತ್ತವನ್ನು SAST ನಿರ್ಧರಿಸುತ್ತದೆ. ತುರ್ತು ಸಂದರ್ಭಗಳು ಅಂದರೆ ಈ ಆದೇಶದಲ್ಲಿ ನಮೂದಿಸಲಾದ ತುರ್ತು ಸಂದರ್ಭಗಳನ್ನು ಒಳಗೊಂಡಿರುತ್ತವೆ. ನೋಂದಾಯಿತ ವೈದ್ಯಕೀಯ ಸಂಸ್ಥೆಗಳು ಅಂದರೆ ಈ ಯೋಜನೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಸರ್ಕಾರದಿಂದ ನೋಂದಾಯಿಸಲ್ಪಟ್ಟ ವೈದ್ಯಕೀಯ ಸಂಸ್ಥೆಗಳು. ಇದರಲ್ಲಿ ಖಾಸಗಿ ಸಾರ್ವಜನಿಕ ವಲಯದ ವೈದ್ಯಕೀಯ ಸಂಸ್ಥೆಗಳು ಕೂಡ ಒಳಗೊಳ್ಳುತ್ತವೆ. ನಿರ್ಧಿಷ್ಟಪಡಿಸಲಾದ ವೈದ್ಯಕೀಯ ಚಿಕಿತ್ಸಾ ವಿಧಾನಗಳು (Specified Medical Procedures) ಅಂದರೆ ಸರ್ಕಾರದಿಂದ ನಿರ್ಧಿಷ್ಟಪಡಿಸಲಾಗಿರುವ ಮತ್ತು ಈ ಯೋಜನೆಯಲ್ಲಿ ಅಳವಡಿಸಿಕೊಳ್ಳಲಾಗಿರುವ ವೈದ್ಯಕೀಯ ಚಿಕಿತ್ಸಾ ವಿಧಾನಗಳು. ನಿಗದಿಪಡಿಸಲಾಗಿರುವ ವೈದ್ಯಕೀಯ ಚಿಕಿತ್ಸಾ ದರಗಳು ಅಂದರೆ ಸರ್ಕಾರದಿಂದ ಈ ಯೋಜನೆಯಲ್ಲಿ ಅಳವಡಿಸಿಕೊಳ್ಳಲಾಗಿರುವ ನಿಗದಿಪಡಿಸಲಾಗಿರುವ ದರಗಳು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications