ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ.ಜಾ ಮತ್ತು ಪ.ಪಂಗಡದ ಅಭ್ಯರ್ಥಿಗಳ ಉದ್ಯೋಗಕ್ಕೆ ಆಸರೆಯಾದ 'ಆಶಾದೀಪ'

|
Google Oneindia Kannada News

ಬೆಂಗಳೂರು, ಅಕ್ಟೋಬರ್ 09: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲು ಸರ್ಕಾರ 'ಆಶಾದೀಪ' ಎಂಬ ಯೋಜನೆ ಜಾರಿಗೊಳಿಸಿದೆ. 2017-18ರ ಬಜೆಟ್‌ನಲ್ಲಿ ಇದನ್ನು ಘೋಷಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೊಸೈಟಿಯ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದವರಿಗೆ ಖಾಸಗಿ ವಲಯದ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದು, ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ

ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಖಾಸಗಿ ವಲಯದ ಉದ್ಯೋಗಗಳಿಗೆ ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ಉದ್ಯೋಗದಾರನ್ನು ಉತ್ತೇಜಿಸಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಪ.ಜಾ/ಪ.ಪಂಗಡದ ಅಭ್ಯರ್ಥಿಗಳಿಗೆ ಇದು ನಿಜಕ್ಕೂ 'ಆಶಾದೀಪ'ವಾಗಿದೆ.

ಬಳ್ಳಾರಿ; ಕೆಲಸ ಖಾಲಿ ಇದೆ, ಅ. 15ರೊಳಗೆ ಅರ್ಜಿ ಹಾಕಿ ಬಳ್ಳಾರಿ; ಕೆಲಸ ಖಾಲಿ ಇದೆ, ಅ. 15ರೊಳಗೆ ಅರ್ಜಿ ಹಾಕಿ

ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಈ ಮೂಲಕ ಸ್ವಾವಲಂಭಿಗಳಾಗಲು ಉತ್ತೇಜನ ನೀಡಲಾಗುತ್ತದೆ. ಆಸಕ್ತರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕರೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಅ.17ರೊಳಗೆ ಅರ್ಜಿ ಹಾಕಿ ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಅ.17ರೊಳಗೆ ಅರ್ಜಿ ಹಾಕಿ

ಸ್ವಾವಲಂಭಿಯಾಗಲು ಸಹಾಯ

ಸ್ವಾವಲಂಭಿಯಾಗಲು ಸಹಾಯ

ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದವರಿಗೆ ಖಾಸಗಿ ವಲಯದ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದು ಯೋಜನೆಯ ಮುಖ್ಯ ಉದ್ದೇಶ. ಈ ಮೂಲಕ ಅವರ ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು ಗುರಿಯಾಗಿದೆ. ನೇಮಕಾತಿ ಮಾಡಿಕೊಳ್ಳುವುದನ್ನು ಉತ್ತೇಜಿಸಲು, ನೇಮಕಾತಿ ಮಾಡಿಕೊಂಡ ಸಂಸ್ಥೆಗಳಿಗೆ ಅಂತಹ ನೌಕರರ ಇ.ಎಸ್.ಐ ಹಾಗೂ ಪಿ.ಎಪ್ ವಂತಿಕೆಯನ್ನು ಮರು ಪಾವತಿಸುವ ಮೂಲಕ ಆರ್ಥಿಕ ಸಹಾಯ ನೀಡಲಾಗುತ್ತದೆ. ತರಬೇತಿ ಪಡೆಯುವ ಅಪ್ರೆಂಟಿಸ್‍ಗಳ ಶಿಷ್ಯ ವೇತನವನ್ನು ಉದ್ಯೋಗದಾತರಿಗೆ ಮರುಪಾವತಿಸುವುದರ ಮೂಲಕ ಸ್ವಾವಲಂಭಿಯಾಗಲು ಸಹಾಯ ಮಾಡಲಾಗುತ್ತದೆ.

ಮರು ಪಾವತಿ ಮಾಡಡಲಾಗುತ್ತದೆ

ಮರು ಪಾವತಿ ಮಾಡಡಲಾಗುತ್ತದೆ

ಹೊಸದಾಗಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಉದ್ಯೋಗಿಗಳಿಗೆ ಮಾಲೀಕರು/ಉದ್ಯೋಗದಾತರು ಕಡ್ಡಾಯವಾಗಿ ಪಾವತಿಸಿದ ಶಾಸನಬದ್ಧ ಭವಿಷ್ಯನಿಧಿ ಹಾಗೂ ಇ.ಎಸ್.ಐ ವಂತಿಕೆಯನ್ನು ರಾಜ್ಯ ಸರ್ಕಾರದಿಂದ ಮಾಲೀಕರು/ ಉದ್ಯೋಗದಾತರಿಗೆ ಎರಡು ವರ್ಷಗಳ ಅವಧಿಯ ವರೆಗೆ ಮಾಸಿಕ ಗರಿಷ್ಠ ರೂ.3000/- ಗಳ ಮಿತಿಯೊಳಗೆ ಮರುಪಾವತಿ ಮಾಡಲಾಗುವುದು.

ಅಪ್ರೆಂಟಿಸ್ ಮೊತ್ತ

ಅಪ್ರೆಂಟಿಸ್ ಮೊತ್ತ

ಒಂದು ವರ್ಷದ ಅವಧಿಯ ಸಾಮಾನ್ಯ ಹಾಗೂ ಎರಡು ವರ್ಷಗಳ ಅವಧಿಯ ಸಮಗ್ರ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್‍ಶಿಪ್ ಕಾಯ್ದೆ 1961 ರನ್ವಯ ಮಾಲೀಕರು ಪಾವತಿಸಿದ ಮಾಸಿಕ ಶಿಷ್ಯವೇತನ ಮೊತ್ತದಲ್ಲಿ 2/3 ರಷ್ಟು ಮೊತ್ತವನ್ನು ಮಾಸಿಕ ರೂ. 5000 ಮಿತಿಯೊಳಗೆ ಮಾಲೀಕರಿಗೆ ಮರುಪಾವತಿ ಮಾಡಲಾಗುತ್ತದೆ.

ಅಭ್ಯರ್ಥಿಗಳಿಗೆ ತರಬೇತಿ

ಅಭ್ಯರ್ಥಿಗಳಿಗೆ ತರಬೇತಿ

ಅಪ್ರೆಂಟಿಸ್ ತರಬೇತಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳನ್ನು ಅದೇ ಮಾಲೀಕರು ನೇಮಕಾತಿ ಮಾಡಿಕೊಂಡಲ್ಲಿ, ಅಂತಹ ನೌಕಕರಿಗೆ ಆಯಾ ಮಿತಿಯೊಳಗೆ ಉದ್ಯೋಗದಾತರಿಗೆ ಒಂದು ವರ್ಷದ ಅವಧಿಗೆ ಮರುಪಾವತಿ ಮಾಡಲಾಗುವುದು. ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಲಾಗುತ್ತದೆ.

English summary
Karnataka government announed Ashadeepa scheme. It will encourage private sector industries to provide employment opportunity to the persons belonging to SC & ST categories.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X