Citroen Basalt car: ಅತೀ ಕಡಿಮೆ ಬೆಲೆಯ ಸಿಟ್ರನ್ ಬಸಾಲ್ಟ್ ಕಾರಿನ ವಿಶೇಷತೆಗಳನ್ನು ತಿಳಿಯಿರಿ-ಮಾಹಿತಿ ಇಲ್ಲಿದೆ
Citroen: ಆಟೋಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಪೈಪೋಟಿ ಕ್ರಾಂತಿಯೇ ನಡೆಯುತ್ತಿದೆ. ಎಷ್ಟರ ಮಟ್ಟಿಗೆ ಅಂದರೆ ತಾವು ಏನು ಕಡಿಮೆಯಿಲ್ಲವೆಂಬಂತೆ ಗ್ರಾಹಕರ ಕೈಗೆಟಕುವ ದರದಲ್ಲಿ ಎಲ್ಲಾ ಕಂಪನಿಗಳು ಉತ್ತಮ ಸೌಲಭ್ಯವುಳ್ಳ ವಾಹನಗಳನ್ನು ಮಾರುಕಟ್ಟೆಗೆ ತರುತ್ತಲೇ ಇವೆ. ಇದೀಗ ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾಗಿರುವ ಸಿಟ್ರನ್ ಕಂಪನಿಯು ತನ್ನ ನಾಲ್ಕನೇ ಕಾರು ಮಾದರಿಯಾಗಿ ಬಸಾಲ್ಟ್ ಕೂಪೆ ಎಸ್‌ಯುವಿ ಬಿಡುಗಡೆ ಮಾಡಿದೆ.
ಈ ಸಿಟ್ರನ್ ಬಸಾಲ್ಟ್ ಕಾರು ವೇರಿಯೆಂಟ್‌ಗೆ ಅನುಗುಣವಾಗಿ ವಿಭಿನ್ನವಾದ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಬಸಾಲ್ಟ್ 1.2ಪಿಯು 7.99 ಲಕ್ಷ ರೂಪಾಯಿ, ಬಸಾಲ್ಟ್ ಪ್ಲಸ್ 9.99 ಲಕ್ಷ ರೂಪಾಯಿ, ಬಸಾಲ್ಟ್ ಟರ್ಬೊ ಪ್ಲಸ್ 11.49 ಲಕ್ಷ ರೂಪಾಯಿ, ಬಸಾಲ್ಟ್ ಟರ್ಬೊ ಎಟಿ ಪ್ಲಸ್ 12.79 ರೂಪಾಯಿ, ಬಸಾಲ್ಟ್ ಟರ್ಬೊ ಮ್ಯಾಕ್ಸ್ 12.28 ಲಕ್ ರೂಪಾಯಿ ಮತ್ತು ಬಸಾಲ್ಟ್ ಟರ್ಬೊ ಎಟಿ ಮ್ಯಾಕ್ಸ್ 13.62 ಲಕ್ಷ ರೂಪಾಯಿ ಬೆಲೆಯನ್ನು ಹೊಂದಿದೆ.

ಭಾರತದಲ್ಲಿ ಸದ್ಯ ಸಿ3, ಇಸಿ3, ಸಿ3 ಏರ್ ಕ್ರಾಸ್ ಮತ್ತು ಸಿ5 ಏರ್ ಕ್ರಾಸ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಸಿಟ್ರನ್ ಕಂಪನಿಯು ಇದೀಗ ಬಸಾಲ್ಟ್ ಎಸ್‌ಯುವಿ ಕೂಪೆ ಪರಿಚಯಿಸಿದೆ. ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿ3 ಏರ್ ಕ್ರಾಸ್ ಆಧರಿಸಿ ತಯಾರಾಗಿದೆ. ಹೊಸ ಕಾರು ಟಾಟಾ ಕರ್ವ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಹೋಂಡಾ ಎಲಿವೇಟ್ ಕಾರುಗಳಿಗೆ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.
ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರಲಿರುವ ಹೊಸ ಬಸಾಲ್ಟ್ ಕಾರಿನಲ್ಲಿ ಸಿ3 ಏರ್ ಕ್ರಾಸ್‌ನಲ್ಲಿರುವಂತೆ ಹಲವು ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಸ್ಪೋರ್ಟಿ ಲುಕ್‌ನೊಂದಿಗೆ ಕ್ರೋಮ್ ಲೈನ್ ಹೊಂದಿರುವ ಚೆವರಾನ್ ಲೊಗೊ, ಎರಡು ಹಂತಗಳಲ್ಲಿ ವಿಭಾಗಗೊಂಡಿರುವ ಫ್ರಂಟ್ ಗ್ರೀಲ್, ಪ್ರೊಜೆಕ್ಟರ್ ಹೆಡ್ ಲ್ಯಾಂಪ್ಸ್, ಎಲ್ಇಡಿ ರನ್ನಿಂಗ್ ಲೈಟಿಂಗ್ ಅನ್ನು ಒಳಗೊಂಡಿದೆ.
ಅಲ್ಲದೆ ಕ್ಲಾಡಿಂಗ್ ಹೊಂದಿರುವ ವ್ಹೀಲ್ ಆರ್ಚ್, 17 ಇಂಚಿನ ಅಲಾಯ್ ವ್ಹೀಲ್‌ಗಳು, ಪೂರ್ಣ ಪ್ರಮಾಣದಲ್ಲಿ ತೆರೆದುಕೊಳ್ಳುವ ಡೋರ್‌ಗಳು, ಹಾಲೋಜೆನ್ ಟೈಲ್ ಲ್ಯಾಂಪ್ಸ್, 3ಡಿ ಎಫೆಕ್ಟ್ ಹೊಂದಿರುವ ಸ್ಪೋರ್ಟಿ ಡ್ಯುಯಲ್ ಟೋನ್ ಬಂಪರ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಹೊಂದಿದೆ.
ಈ ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡ ಗ್ರಾಹಕರನ್ನು ಸೆಳೆಯಲಿದ್ದು, ಸಿ3 ಏರ್ ಕ್ರಾಸ್‌ನಲ್ಲಿ ಇರುವಂತೆ ಹೊಸ ವಿನ್ಯಾಸದ ಹ್ವಾಕ್ ಪ್ಯಾನೇಲ್‌ನೊಂದಿಗೆ ಟಾಂಗಲ್ ಸ್ವಿಚ್‌ಗಳು, ಆಟೋಮ್ಯಾಟಿಕ್ ಎಸಿ, ಅತ್ಯುತ್ತಮವಾಗಿ ಆರ್ಮ್ ರೆಸ್ಟ್, ಹೊಂದಾಣಿಕೆ ಮಾಡಬಹುದಾದ ಹಿಂಬದಿಯ ಆಸನಗಳ ಹೆಡ್ ರೆಸ್ಟ್, ರಿಯರ್ ಎಸಿ ವೆಂಟ್ಸ್ ಜೊತೆಗೆ 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಟ್ ಅನ್ನು ನೀಡಲಾಗಿದೆ.
ಜೊತೆಗೆ ಕನೆಕ್ಟಿವಿ ಸೌಲಭ್ಯಕ್ಕಾಗಿ 10.25 ಇಂಚಿನ ಪ್ಲೊಟರಿಂಗ್ ಇನ್ಪೋಟೈನ್ ಮೆಂಟ್ ಸಿಸ್ಟಂ, 7 ಇಂಚಿನ ಆಲ್ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವೈರ್ ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಮತ್ತು ತ್ರಿ ಸ್ಪೋಕ್ ಸ್ಟೀರಿಂಗ್ ವ್ಹೀಲ್ ನೀಡಲಾಗಿದೆ.
ಈ ಕಾರಿನಲ್ಲಿ ಸಿಟ್ರನ್ ಕಂಪನಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಗ್ರಾಹಕರು ಇದರಲ್ಲಿ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಮಾಡಿಕೊಳ್ಳಬಹುದಾಗಿದೆ.
ಮೊದಲನೇದಾಗಿ ಆರಂಭಿಕ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 82 ಹಾರ್ಸ್ ಪವರ್ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ ಟಾಪ್ ಎಂಡ್ ಟರ್ಬೊ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಿದ್ದು, ಇದು 110 ಹಾರ್ಸ್ ಪವರ್ ಮತ್ತು 205 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಕಾರು ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್‌ಗೆ ಇದು 18-19.5 ಕಿ.ಮೀಟರ್ ಮೈಲೇಜ್ ನೀಡಲಿದೆ.
ಅಲ್ಲದೆ ಈ ಕಾರಿನಲ್ಲಿ ಸಿಟ್ರನ್ ಕಂಪನಿಯು 6 ಏರ್ ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿ ಹಲವಾರು ಸುರಕ್ಷಾ ಸೌಲಭ್ಯಗಳಿದ್ದು, ಇದು ಕ್ರ್ಯಾಶ್ ಟೆಸ್ಟಿಂಗ್‌ನಲ್ಲೂ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸುವ ನೀರಿಕ್ಷೆಯಲ್ಲಿದೆ ಎಂದು ಕಂಪನಿ ಮೂಲಗಳಿಂದ ತಿಳಿದುಬಂದಿದೆ.












Click it and Unblock the Notifications