Maruti Suzuki: ಮಾರುಕಟ್ಟಯಲ್ಲಿ ಭಾರೀ ಸದ್ದು ಮಾಡುತ್ತಿರುವ ಅತೀ ಹೆಚ್ಚು ಮೈಲೇಜ್ ನೀಡುವ ಮಾರುತಿ ಸುಜುಕಿಯ ಹೊಸ ಕಾರಿದು

ಆಟೋಮೊಬೈಲ್‌ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಗ್ರಾಹಕರ ಬೇಡಿಕೆಗೆ ತಕ್ಕಂತೆ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಹಾಗೆಯೇ ಕಾರುಗಳ ವಿಭಾಗಕ್ಕೆ ಬಂದರೆ ಮಾರು ಸುಜುಕಿ ಕಂಪನಿಯ ಈ ಕಾರು ಮಾರಾಟದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಈ ಕಾರಿನ ಮೇಲೆ ಗ್ರಾಹಕರಿಗೆ ತುಂಬಾ ಲವ್‌ ಆಗಿದ್ದು, ಈ ಮೂಲಜ ಹೆಚ್ಚೆಚ್ಚು ಮಾರಾಟವಾಗುತ್ತಿರುವ ಕಾರುಗಳ ಪಟ್ಟಿಯಲ್ಲಿ ಈ ಕಾರು ಮೊದಲ ಸ್ಥಾನವನ್ನು ಅಲಂಕರಿಸಿದೆ. ಹಾಗಾದರೆ ಇದರ ವಿಶೇಷತೆ ಹಾಗೂ ದರಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಗ್ರಾಹಕರ ಕೈಗೆಟಕುವ ದರದಲ್ಲಿ ಸಿಗುವ ಹಾಗೂ ಹೆಚ್ಚು ಕಾರುಗಳ ಮಾರಾಟದ ಸ್ಥಾನದಲ್ಲಿ ಮಾರುತಿ ಸುಜುಕಿ ಕಂಪನಿಯು ಫ್ರಾಂಕ್ಸ್ ಕಂಪ್ಯಾಕ್ಟ್ ಎಸ್‌ಯುವಿ ಮೊದಲ ಸ್ಥಾನವನ್ನು ಅಲಂಕರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಬಿಡುಗಡೆಯಾದ ಕೇವಲ 14 ತಿಂಗಳ ಅವಧಿಯಲ್ಲಿ ಮಾರಾಟದಲ್ಲಿ ದಾಖಲೆ ಬರೆದಿದೆ. ಇನ್ನು ಈ ಫ್ರಾಂಕ್ಸ್ ಕಾರು ಮಾರುತಿ ಸುಜುಕಿಯ ಬಲೆನೊ ಹಾಗೂ ಎಸ್ ಕ್ರಾಸ್ ಕಾರುಗಳ ವಿನ್ಯಾಸವನ್ನು ಹೊಂದಿದ್ದು, ಇದು ಸಣ್ಣ ಗಾತ್ರ ಎಸ್‌ಯುವಿ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆ ಆಗಿದೆ.

Know Maruti Suzuki s new car specialities and prices

ಕ್ರಾಸ್ ಓವರ್ ಎಸ್‌ಯುವಿ ಮಾದರಿಯಾಗಿ ಗುರುತಿಸಿಕೊಂಡಿರುವ ಫ್ರಾಂಕ್ಸ್ ಕಾರು ವಿವಿಧ ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಈ ಕಾರಿನಲ್ಲಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು 1.2 ಲೀಟರ್ ಡ್ಯುಯಲ್‌ ಜೆಟ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 1.2 ಲೀಟರ್ ಡ್ಯುಯಲ್‌ ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್‌ನೊಂದಿಗೆ ಪ್ರತಿ ಲೀಟರ್‌ಗೆ ಗರಿಷ್ಠ 22.89 ಕಿಲೋ ಮೀಟರ್‌ ಮೈಲೇಜ್ ಕೊಡಲಿದೆ.

ಈ ಕಾರಿನ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 21.79 ಕಿಲೋ ಮೀಟರ್‌ ಮೈಲೇಜ್ ನೀಡಲಿದೆ. ಇದರಲ್ಲಿ ಟರ್ಬೊ ಪೆಟ್ರೋಲ್ ಮಾದರಿಯು ಪ್ರತಿ ಲೀಟರ್‌ಗೆ 20.01-21.05 ಕಿಲೋ ಮೀಟರ್ ಮೈಲೇಜ್ ನೀಡಲಿದೆ. ಅಲ್ಲದೆ, ಇದರ ಪರ್ಫಾಮೆನ್ಸ್‌ನಲ್ಲೂ ಗ್ರಾಹಕರನ ಗಮನ ಸೆಳೆಯುತ್ತಲೇ ಇರುತ್ತದೆ.

ಇನ್ನು ಈ ಕಾರಿನಲ್ಲಿ 1.2 ಲೀಟರ್ ಡ್ಯುಯಲ್‌ ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು 88.5 ಹಾರ್ಸ್ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಚಾರ್ಜ್ಡ್ ಪೆಟ್ರೋಲ್ ಮಾದರಿಯು 98.06 ಹಾರ್ಸ್ ಪವರ್ ಮತ್ತು 147.6 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರಿನಲ್ಲಿ ಹೆಚ್ಚಿನ ಮೈಲೇಜ್ ಬಯಸುವ ಗ್ರಾಹಕರಿಗೆ ಸಿಎನ್‌ಜಿ ಆವೃತ್ತಿ ಸಹ ಲಭ್ಯವಿದ್ದು, ಸಿಎನ್‌ಜಿ ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆ ಎಸ್-ಸಿಎನ್‌ಜಿ ಕಿಟ್ ಅನ್ನು ಒಳಗೊಂಡಿದೆ. ಇದು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನೊಂದಿಗೆ 77.5 ಹಾರ್ಸ್ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಇದು ಪ್ರತಿ ಲೀಟರ್ ಸಿಎನ್‌ಜಿಗೆ ಗರಿಷ್ಠ 28.51 ಕಿ.ಮೀ ಮೈಲೇಜ್ ಕೊಡಲಿದ್ದು, ಇದು ಈ ವಿಭಾಗದ ಕಾರುಗಳಲ್ಲೇ ಅತೀ ಹೆಚ್ಚು ಇಂಧನ ದಕ್ಷತೆ ಹೊಂದಿರುವ ಕಾರಿನ ಮಾದರಿಯಾಗಿದೆ.

ಈ ಹೊದ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಆಕರ್ಷಕ ಹೊರಭಾಗದ ವಿನ್ಯಾಸದ ಜೊತೆಗೆ ಐಷಾರಾಮಿ ಅನುಭವ ನೀಡುವ ಡ್ಯುಯಲ್ ಕಲರ್ ಕ್ಯಾಬಿನ್ ಸೌಲಭ್ಯವನ್ನು ಕೂಡ ನೀಡಿದೆ. ಇನ್ನು ಇದರಲ್ಲಿನ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಸ್ಮಾರ್ಟ್ ಪ್ಲೇ ಪ್ರೋ ಸಿಸ್ಟಂ, ಸ್ಟಿರಿಂಗ್ ಮೌಂಟೆಡ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ವೈರ್ ಲೆಸ್ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಗ್ರಾಹಕರನ್ನು ತನ್ನೆಡೆಗೆ ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ಸುರಕ್ಷತೆಗಾಗಿ ಡ್ಯುಯಲ್ ಏರ್ ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೇರಿ ಹಲವು ಸುರಕ್ಷಾ ಸೌಲಭ್ಯಗಳನ್ನು ಒಳಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+