ನಿಸ್ಸಾನ್ ಕಂಪನಿಯ ಹೊಸ ಕಾರಿನ ದರ, ವಿಶೇಷತೆಗಳನ್ನು ತಿಳಿಯಿರಿ
Nissan company's New car: ಆಟೋಮೊಬೈಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಕ್ರಾಂತಿಯೇ ಆಗುತ್ತಿದೆ. ಎಲ್ಲಾ ಕಂಪನಿಗಳು ತಾವೇನು ಕಡಿಮೆಯಿಲ್ಲ ಎನ್ನುವ ರೀತಿಯಲ್ಲಿ ಪೈಪೋಟಿ ಬಿದ್ದು ಕಡಿಮೆ ದರದಲ್ಲಿ, ಉತ್ತಮ ಸೌಲಭ್ಯಗಳುಳ್ಳ ವಾಹನಗಳನ್ನು ಬಿಡುಗಡೆ ಮಾಡುತ್ತಲೇ ಇವೆ. ಹಾಗೆಯೇ ಇದೀಗ ನಿಸ್ಸಾಸ್ ಇಂಡಿಯಾ ಕಂಪನಿಯು ಹೊಸ ಕಾರು ಬಿಡಲು ಮುಂದಾಗಿದೆ. ಹಾಗಾದರೆ ಇದರ ದರ, ವಿಶೇಷತೆಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದೇಶದಲ್ಲಿ ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಗ್ರಾಹಕರನ್ನು ಸೆಳೆಯುವಲ್ಲಿ ನಿಸ್ಸಾನ್ ಇಂಡಿಯಾ ಕಂಪನಿಯು ಭಾರೀ ಪೈಪೋಟಿ ನೀಡುತ್ತಿದ್ದು, ಇದು ಶೀಘ್ರದಲ್ಲೇ ಎಕ್ಸ್-ಟ್ರಯಲ್ ಎಸ್‌ಯುವಿ ಅನ್ನು ಬಿಡುಗಡೆ ಮಾಡಲು ಮುಂದಾಗಿದೆ. ಈ ಹೊಸ ಕಾರು ಬಿಡುಗಡೆಗೂ ಮುನ್ನ ಇದೀಗ ಅಧಿಕೃತವಾಗಿ ಅನಾವರಣಗೊಳಿಸಿದ್ದು, ಇದು ಹಲವು ತಂತ್ರಜ್ಞಾನ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಎಕ್ಸ್-ಟ್ರಯಲ್ ಕಾರನ್ನು ಮೊದಲ ಬಾರಿಗೆ 2023ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ನಿಸ್ಸಾನ್ ಕಂಪನಿ ಇದೀಗ ಅಧಿಕೃತ ಬಿಡುಗಡೆ ಮಾಡಲು ಮುಂದಾಗಿದೆ. ಇದು ಆರಂಭಿಕ ಐಷಾರಾಮಿ ಎಸ್‌ಯುವಿ ಆವೃತ್ತಿಯಾಗಿ ಮಾರಾಟ ಆಗಲಿದೆ. ಹೊಸ ಎಕ್ಸ್-ಟ್ರಯಲ್ ಕಾರು ಈಗಾಗಲೇ ಯುರೋಪ್‌ನ ಪ್ರಮುಖ ದೇಶಗಳಲ್ಲಿ ತುಂಬಾ ಬೇಡಿಕೆಯೊಂದಿಗೆ ಮಾರಾಟ ಆಗುತ್ತಿದ್ದು, ಇದೀಗ ಭಾರತದಲ್ಲೂ ಸದ್ದು ಮಾಡಲು ಮುಂದಾಗಿದೆ.
ಎಕ್ಸ್-ಟ್ರಯಲ್ ಕಾರು ದೇಶದಲ್ಲಿ ಸಂಪೂರ್ಣ ಆಮದು ಮಾದರಿಯಾಗಿ ಮಾರಾಟ ಆಗಲಿದ್ದು, ಇದು ವಾರ್ಷಿಕವಾಗಿ ಸೀಮಿತ ಸಂಖ್ಯೆಯಲ್ಲಿ ಮಾತ್ರ ಖರೀದಿಗೆ ಲಭ್ಯ ಇರುತ್ತದೆ. ಸಿಬಿಯು ಆಮದು ನೀತಿಯಡಿಯಲ್ಲಿ ಸದ್ಯ ಭಾರತದಲ್ಲಿರುವ ವಿದೇಶಿ ಕಾರು ಉತ್ಪಾದನಾ ಕಂಪನಿಗಳು ಯಾವುದೇ ಹೆಚ್ಚುವರಿ ತೆರಿಗೆಗಳಿಲ್ಲದೆ, ವಾರ್ಷಿಕವಾಗಿ 2,500 ಕಾರುಗಳನ್ನು ಆಮದು ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.
ಈ ಹಿನ್ನಲೆ ನಿಸ್ಸಾನ್ ಸಹ ವಿದೇಶಿ ಮಾರುಕಟ್ಟೆಯಲ್ಲಿ ತುಂಬಾ ಜನಪ್ರಿಯತೆ ಹೊಂದಿರುವ ತನ್ನ ಬಹುಬೇಡಿಕೆಯ ಎಕ್ಸ್-ಟ್ರಯಲ್ ಮಾದರಿಯನ್ನು ಭಾರತಕ್ಕೂ ಪರಿಚಯಿಸಲು ನಿರ್ಧರಿಸಿದೆ. ಸದ್ಯ ಆಮದು ನೀತಿಯಡಿ ಅವಕಾಶ ಇರುವ ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧಿಸಿರುವ ನಿಸ್ಸಾನ್ ಕಂಪನಿಯು ಹೊಸ ಕಾರನ್ನು 1.5 ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲಿ ಮಾರುಕಟ್ಟೆಗೆ ತರುತ್ತಿದೆ.
ಮೊದಲು ಹೊಸ ಕಾರನ್ನು ಪೆಟ್ರೋಲ್ ಮತ್ತು ಹೈಬ್ರಿಡ್ ಮಾದರಿಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದ ನಿಸ್ಸಾನ್ ಇದೀಗ ಹೊಸ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಮಾರಾಟ ಮಾಡುವುದಾಗಿ ತಿಳಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಹೊಸ ಕಾರಿನ ಪೆಟ್ರೋಲ್ ಮಾದರಿಗಳ ಬೇಡಿಕೆಯಾಧರಿಸಿ ಹೈಬ್ರಿಡ್ ಆವೃತ್ತಿ ಸಹ ಬಿಡುಗಡೆ ಆಗಲಿದೆ.
ಹೊಸ ಕಾರಿನಲ್ಲಿರುವ 1.5 ಲೀಟರ್ ಪೆಟ್ರೋಲ್ ಇಂಜಿನ್ ಮಾದರಿಯು 12ವಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ಪ್ಯಾಡಲ್ ಶಿಫ್ಟರ್ ಜೊತೆ ಶಿಫ್ಟ್ ಬೈ ವೈರ್ ಪ್ರೇರಿತ ಆಟೋಮ್ಯಾಟಿಕ್ ಗೇರ್ ಬಾಕ್ಸ್‌ಗಳ ಆಯ್ಕೆಯನ್ನು ಹೊಂದಿರುತ್ತದೆ. ಗರಿಷ್ಠ 163 ಹಾರ್ಸ್ ಪವರ್ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿದೆ.
ಅಲ್ಲದೆ, ಈ ಕಾರು ಆಲ್ ವ್ಹೀಲ್ ಡ್ರೈವ್ ಮತ್ತು ಫ್ರಂಟ್ ವ್ಹೀಲ್ ಡ್ರೈವ್ ಆಯ್ಕೆಯೊಂದಿಗೆ ಐಶಾರಾಮಿ ಕಾರು ಚಾಲನಾ ಅನುಭವ ನೀಡಲಿದ್ದು, ಇದು 7 ಸೀಟರ್ ಮತ್ತು 5 ಸೀಟರ್ ಆಯ್ಕೆಗಳೊಂದಿಗೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರಲಿದೆ.
ಈ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಕಾರು ಉತ್ತಮ ಸನ್ ರೂಫ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 12 ಇಂಚಿನ ಡಿಜಿಟಲ್ ಡ್ರೈವರ್ ಡಿಸ್ ಪ್ಲೇ, 8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಕೀ ಲೆಸ್ ಎಂಟ್ರಿ ಫುಶ್ ಬಟನ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, 7 ಏರ್ ಬ್ಯಾಗ್‌ಗಳು, ಆಟೋ ವೈಪ್ಸ್, ಎಬಿಎಸ್ ಜೊತೆ ಇಬಿಡಿ, ಟ್ರಾಕ್ಷನ್ ಕಂಟ್ರೋಲ್ ಸೇರಿದಂತೆ ಇನ್ನು ಹಲವು ಸೌಲಭ್ಯಗಳನ್ನು ಹೊಂದಿರಲಿದೆ.
ಮೂಲಗಳ ಪ್ರಕಾರ ಈ ಕಾರಿನ ಎಕ್ಸ್ ಶೋ ರೂಂ ಬೆಲೆ 40,00,000 ರೂಪಾಯಿವರೆಗೂ ಇರಲಿದೆ. ಇದು ಹ್ಯುಂಡೈ ಟುಸಾನ್, ಜೀಪ್ ಮೆರೆಡಿಯನ್, ಸಿಟ್ರನ್ ಸಿ5 ಏರ್ ಕ್ರಾಸ್ ಕಾರುಗಳಿಗೆ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಒಟ್ಟಿನಲ್ಲಿ ಒಂದು ಕುಟುಂಬ ಪ್ರಯಾಣ ಬೆಳೆಸಲು ಹೇಳಿ ಮಾಡಿಸಿದ ಕಾರು ಇದಾಗಿದೆ ಎನ್ನಲಾಗುತ್ತಿದೆ.












Click it and Unblock the Notifications