Laxmi Hebbalkar Profile: ರಾಜ್ಯದ ಪ್ರಬಲ ಸ್ತ್ರೀವಾದಿ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಕ್ತಿ ಚಿತ್ರಣ
ಬೆಂಗಳೂರು, ಮಾರ್ಚ್ 01: ರಾಜ್ಯ ರಾಜಕಾರಣದಲ್ಲಿರುವ ಕೆಲವೇ ಪ್ರಭಾವಿ ನಾಯಕಿಯರಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಒಬ್ಬರು. ಪ್ರತಿಷ್ಠಿತ ಬೆಳಗಾವಿ ರಾಜಕಾರಣದಲ್ಲಿ ಪ್ರಮುಖ ಸ್ಥಾನ ಗಿಟ್ಟಿಸಿಕೊಂಡಿರುವ ಅವರು ರಾಜ್ಯ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ವ್ಯಕ್ತಿ ಚಿತ್ರಣ ಹಾಗೂ ರಾಜಕೀಯ ಬದುಕಿನ ಬಗ್ಗೆ ಕಿರು ಪರಿಚಯ ಇಲ್ಲಿದೆ.

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಜನನ
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು 1975 ರಲ್ಲಿ ಜನಿಸಿದರು. ಅವರು ಬೆಳಗಾವಿ ಮೂಲದವರು. ಉದ್ಯಮಿಗಳ ಕುಟುಂಬದಲ್ಲಿ ಹುಟ್ಟಿದ ಅವರು ಉದ್ಯಮಿ ರವೀಂದ್ರರನ್ನು ಮದುವೆಯಾದರು. ಅವರೀಗ ತಮ್ಮ ಪತಿಯೊಂದಿಗೆ ಬೆಳಗಾವಿಯ ಹನುಮಾನ್ ನಗರದಲ್ಲಿ ವಾಸಿಸುತ್ತಿದ್ದಾರೆ. ಮ್ರಿನಾಲ್ ಹೆಬ್ಬಾಳ್ಕರ್ ಅವರ ಏಕೈಕ ಮಗು. ಅವರ ಪತಿ ಸಕ್ಕರೆ ಕಾರ್ಖಾನೆಯನ್ನು ನೋಡಿಕೊಳ್ಳುತ್ತಿದ್ದಾರೆ. 2002 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ರಾಜ್ಯ ಶಾಸ್ತ್ರದಲ್ಲಿ ಮಾಸ್ಟರ್ ಆಫ್ ಆರ್ಟ್ಸ್ ಅನ್ನು ಲಕ್ಷ್ಮೀ ಪೂರ್ಣಗೊಳಿಸಿದರು. ಅವರು ಪ್ರಬಲ ಪಂಚಮಸಾಲಿ ಸಮುದಾಯಕ್ಕೆ ಸೇರಿದವರು.

ಸಕ್ಕರೆ ಕಾರ್ಖಾನೆಯ ನಿರ್ದೇಶಕಿ
ಬೆಳಗಾವಿಯ ಭಾಗ್ಯಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಸೇವೆ ಸಲ್ಲಿಸಿದ್ದಾರೆ. ಈ ಕಾರ್ಖಾನೆಯು ಹಣಕಾಸಿನ ತೊಂದರೆಗೆ ಸಿಲುಕಿದ್ದರಿಂದ ಅಂತಿಮವಾಗಿ ಖಾಸಗೀಕರಣಗೊಂಡಿತು. ಇದೇ ಸಮಯದಲ್ಲಿ ಹೆಬ್ಬಾಳ್ಕರ್ ಅವರು ರಾಜಕೀಯ ಪ್ರವೇಶ ಮಾಡುವ ಯತ್ನ ಮಾಡುತ್ತಿದ್ದರು. ಹೆಬ್ಬಾಳ್ಕರ್ ಅವರು ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಜೀವನ
2013 ರಲ್ಲಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತರು. ಆ ನಂತರ 2014 ರಲ್ಲಿ ಬೆಳಗಾವಿಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದರು. ಬಿಜೆಪಿಯ ಸುರೇಶ್ ಅಂಗಡಿ ವಿರುದ್ಧ ಪರಾಭವಗೊಂಡರು. ಮೇ 2015 ರಲ್ಲಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್‌ನ ಮುಖ್ಯಸ್ಥೆಯಾಗಿ ಆಯ್ಕೆಯಾದರು. ನಂತರ ಅವರು 2018 ರಲ್ಲಿ ಬೆಳಗಾವಿ (ಗ್ರಾಮೀಣ) ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸಂಜಯ್ ಪಾಟೀಲ್ ಅವರನ್ನು ಸೋಲಿಸಿ ಕರ್ನಾಟಕ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು. ಈಗ ಅವರ ಸಹೋದರರನ್ನೂ ಕಾಂಗ್ರೆಸ್ ಎಂಎಲ್‌ಸಿಯಾಗಿ ಆಯ್ಕೆ ಮಾಡಿಸುವಲ್ಲಿ ಯಶಸ್ಸು ಕಂಡಿದ್ದಾರೆ.

ಸ್ತ್ರೀವಾದಿಯಾಗಿ ಗುರುತಿಸಿಕೊಂಡ ಲಕ್ಷ್ಮೀ
ಬೆಳಗಾವಿ ಕ್ಷೇತ್ರದ ಜನರ ಜೀವನಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಲಕ್ಷ್ಮೀ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಸ್ತ್ರೀವಾದದಲ್ಲಿ ನಂಬಿಕೆ ಹೊಂದಿದ್ದಾರೆ. ಆ ಕಾರಣದಿಂದ, ಮಹಿಳಾ ಸಬಲೀಕರಣದಂತಹ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಸ್ತಿ ಮೌಲ್ಯ
ಚುನಾವಣಾ ಸಮಯದಲ್ಲಿ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಲಕ್ಷ್ಮೀ ಅವರ ಆಸ್ತಿ ಮೌಲ್ಯ 8,10,03,846 ರೂಪಾಯಿಗಳು. ಚರ ಆಸ್ತಿಗಳು 90 ಲಕ್ಷಕ್ಕಿಂತ ಹೆಚ್ಚು ಮೌಲ್ಯದ್ದಾಗಿದೆ. ಸ್ಥಿರಾಸ್ತಿಗಳ ಮೌಲ್ಯ 7 ಕೋಟಿ ರೂಪಾಯಿಗೂ ಹೆಚ್ಚಾಗಿದೆ.

ಟ್ವಿಟ್ಟರ್‌ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರೀಯರಾಗಿದ್ದಾರೆ. ಅವರು ಟ್ವಿಟರ್‌ನಲ್ಲಿ 35 ಸಾವಿರ ಪಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಅವರು ಈ ಪ್ಲಾಟ್‌ಫಾರ್ಮ್‌ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಟ್ವೀಟ್ ಮಾಡುತ್ತಾರೆ. ಅವರು 2017 ರಲ್ಲಿ ಟ್ವಿಟರ್‌ಗೆ ಸೇರಿದ್ದಾರೆ. @laxmi_hebbalkar ಖಾತೆಯಲ್ಲಿ ಲಕ್ಷ್ಮೀ ಅವರ ಟ್ವೀಟ್‌ಗಳನ್ನು ಗಮನಿಸಬಹುದು.

ರಮೇಶ್ ಜಾರಕಿಹೊಳಿ ಜೊತೆ ಸಂಘರ್ಷ
ರಮೇಶ್ ಜಾರಕಿಹೊಳಿ ಬೆಳಗಾವಿ ಭಾಗದ ಪ್ರಬಲ ರಾಜಕೀಯ ನಾಯಕ. 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಅಂದಿನ ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸಲು ರಮೇಶ್ ಕಾರಣರಾದರು. ಅವರ ಜೊತೆ 16 ಜನರು ಬಿಜೆಪಿ ಸೇರ್ಪಡೆಗೊಂಡರು. ಆಗ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ತೊರೆಯಲಿಲ್ಲ. ಇದು ರಮೇಶ್ ಅವರನ್ನು ಕೆರಳುವಂತೆ ಮಾಡಿತು. ಇಬ್ಬರು ನಾಯಕರ ನಡುವೆ ಅಲ್ಲಿಂದ ಸಂಘರ್ಷ ಶುರುವಾಯಿತು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications