Life Tips: ಜೀವನದಲ್ಲಿ ಸಮಸ್ಯೆಗಳಿಗೆ ಹೆದರಬೇಡಿ..ಧೈರ್ಯದಿಂದ ಎದುರಿಸಿ..!
ನಮ್ಮ ಎಲ್ಲ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಸಮಸ್ಯೆಗಳು ಬಂದಾಗ ಅದನ್ನು ಜಾಣ್ಮೆಯಿಂದ ಎದುರಿಸಿ ಗೆಲ್ಲುವುದು ನಿಜವಾದ ಮನುಷ್ಯನ ಗುಣವಾಗಿದೆ. ಸಮಸ್ಯೆಗಳಿಲ್ಲದ ಬದುಕೇ ಇಲ್ಲ ಎಂದ ಮೇಲೆ ಆ ಸಮಸ್ಯೆಗಳನ್ನು ಎದುರಿಸಿ ಬದುಕುವುದನ್ನು ಕೂಡ ನಾವೆಲ್ಲರೂ ಕಲಿಯಬೇಕಾಗುತ್ತದೆ. ಇಲ್ಲಿ ನಾವು ಮುಖ್ಯವಾಗಿ ತಿಳಿದುಕೊಳ್ಳಬೇಕಾಗಿರುವುದು ಏನೆಂದರೆ ನಾವಾಗಿ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳದಂತೆ ಬದುಕುವುದನ್ನು ಮೊದಲಿಗೆ ರೂಢಿ ಮಾಡಿಕೊಳ್ಳಬೇಕು.
ನಾವೆಲ್ಲರೂ ಪ್ರತಿಕ್ಷಣವೂ ಖುಷಿಯಾಗಿ, ಸಂತೋಷವಾಗಿ ಇರಬೇಕೆಂದುಕೊಳ್ಳುತ್ತೇವೆ. ಕೆಲವೊಮ್ಮೆ ಅದು ಸಾಧ್ಯವಾಗುವುದಿಲ್ಲ. ಯಾವುದಾದರೊಂದು ಸಮಸ್ಯೆಗಳು ನಮ್ಮನ್ನು ಇನ್ನಿಲ್ಲದಂತೆ ಕಾಡಿಬಿಡುತ್ತದೆ. ಆದರೆ ಸಮಸ್ಯೆ ಬಂದಾಗ ಅದರ ಬಗ್ಗೆ ಚಿಂತೆ ಮಾಡುತ್ತಾ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಬದಲು ಅದನ್ನು ಪರಿಹರಿಸಿಕೊಳ್ಳಲು ಬೇಕಾದ ದಾರಿಗಳನ್ನು ಕಂಡುಕೊಳ್ಳಬೇಕಾಗುತ್ತದೆ. ಹಾಗೆಂದು ಇಲ್ಲ ಸಲ್ಲದ ವಿಚಾರಕ್ಕೆ ಮೂಗು ತೂರಿಸಿ ಸಮಸ್ಯೆಗಳನ್ನು ಎಳೆದುಕೊಳ್ಳುವುದು ದಡ್ಡತನವಾಗಿ ಬಿಡುತ್ತದೆ.

ನಿಜ ಹೇಳಬೇಕೆಂದರೆ ಈಗಿನ ಬದುಕು ಸದಾ ಒತ್ತಡದ ಬದುಕು. ಹಾಗಾಗಿ ಒಂದಲ್ಲ್ಲ ಒಂದು ಸಮಸ್ಯೆಯನ್ನು ನಾವು ಎದುರಿಸಲೇ ಬೇಕು. ಈ ಸಮಸ್ಯೆಗಳಿಗೂ ಕೊನೆಯಿಲ್ಲ. ಒಂದು ಪರಿಹರಿಸಿದರೆ ಮತ್ತೊಂದು ಸದ್ದಿಲ್ಲದೆ ಎದ್ದು ನಿಲ್ಲುತ್ತದೆ. ಇದರಿಂದ ಸಮಸ್ಯೆಯನ್ನು ಬಗೆಹರಿಸುತ್ತಾ, ಬಗೆಹರಿಸುತ್ತಾ ಬದುಕನ್ನು ಮುಂದಕ್ಕೆ ಕೊಂಡೊಯ್ಯಬೇಕೇ ವಿನಃ ಬದುಕನ್ನೇ ಸಮಸ್ಯೆಯಾಗಿ ಮಾಡಿಕೊಳ್ಳಬಾರದಷ್ಟೆ. ಇಲ್ಲಿ ಎಚ್ಚರಿಕೆ ಹೆಜ್ಜೆ ಇಡುವುದು ಬಹುಮುಖ್ಯ ಒಂದು ಸಮಸ್ಯೆ ಎದುರಿಸುವ ಸಲುವಾಗಿ ಮತ್ತೊಂದು ಸಮಸ್ಯೆಯನ್ನು ಎಳೆದು ತಂದುಕೊಳ್ಳಬಾರದಷ್ಟೆ..
ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು
ನಾವೆಲ್ಲರೂ ಸಮಸ್ಯೆ ಇಲ್ಲದೆ ಬದುಕನ್ನು ಕಲ್ಪಿಸಿಕೊಳ್ಳುವುದು ಮೂರ್ಖತನವಾಗಿ ಬಿಡುತ್ತದೆ. ನಮ್ಮ ವೈಯಕ್ತಿಕ ಬದುಕಿರಬಹುದು ಅಥವಾ ಉದ್ಯೋಗರಂಗ ಇರಬಹುದು. ಸಮಸ್ಯೆ ತಪ್ಪಿದಲ್ಲ. ಇಷ್ಟಕ್ಕೂ ಸಮಸ್ಯೆ ಇಲ್ಲದ ಬದುಕು ಅದು ಬದುಕೇ ಅಲ್ಲ. ಆದರೆ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ ಎಂಬ ಸತ್ಯವನ್ನು ನಾವು ಅರಿಯಬೇಕು. ಆಗ ಸಮಸ್ಯೆಗೆ ಹೆದರಿ ಅಮೂಲ್ಯ ಜೀವ ಕಳೆದುಕೊಳ್ಳುವ ಪ್ರಮೇಯ ಬರಲಾರದು. ಆಧುನಿಕ ಜಗತ್ತಿನಲ್ಲಿ ಎಲ್ಲವೂ ಮೊದಲಿನಂತಿಲ್ಲ. ಕ್ಷಣಕ್ಷಣಕ್ಕೂ ಬದಲಾವಣೆ ಕಾಣುತ್ತಿದೆ. ಈ ಬದಲಾವಣೆ ಹೊಂದಿಕೊಂಡು ಹೋಗುವುದು ಅನಿವಾರ್ಯವಾಗುತ್ತಿದೆ.
ಕೆಲಸ ಸಿಕ್ಕಿದೆ ಎಂಬ ಮಾತ್ರಕ್ಕೆ ಖುಷಿಪಡುತ್ತಾ ಬದುಕಿನಲ್ಲಿ ನೆಲೆ ನಿಂತೆ ಎಂದುಕೊಳ್ಳಲಾಗುವುದಿಲ್ಲ. ಮಾಡುವ ಕೆಲಸದೊಂದಿಗೆ ಅದನ್ನು ಕ್ಷಣ ಕ್ಷಣಕ್ಕೂ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯೂ ಇಲ್ಲದಿಲ್ಲ. ಕೆಲಸ ಮಾಡುವಾಗ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬಹುದು. ಆದರೆ ನಮ್ಮ ವೈಯಕ್ತಿಕ ಬದುಕಿನಲ್ಲಿ ಎದುರಾಗುವ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ನಂತರದ್ದಾದರೂ ಮೊದಲಿಗೆ ಸಮಸ್ಯೆ ಬರದಂತೆ ನೋಡಿಕೊಳ್ಳುವುದನ್ನು ನಾವು ರೂಢಿಸಿಕೊಳ್ಳಬೇಕು. ಇವತ್ತು ಯಾವುದೂ ನಾಲ್ಕು ಗೋಡೆ ಮಧ್ಯೆ ಗೌಪ್ಯವಾಗಿ ಉಳಿಯುತ್ತಿಲ್ಲ. ಅದು ಬಹಿರಂಗವಾಗುತ್ತಿದೆ.

ಅನಗತ್ಯ ಹಠದಿಂದ ಯಾವುದೇ ಪ್ರಯೋಜನವಿಲ್ಲ
ಇದನ್ನು ಅರಿತು ಸಾರ್ವಜನಿಕವಾಗಿ ಬದುಕುವ ನಾವು ಮಾಡುವ ಯಾವುದೇ ಕಾರ್ಯಗಳಿರಲಿ ಅದು ನಮಗರಿಯದಂತೆ ಹೊರಗೆ ಬಂದೇ ಬರುತ್ತೆ. ಆದರೆ ಸದಾ ಒಳ್ಳೆಯದನ್ನೇ ಮಾಡುತ್ತಾ ಹೋದರೆ ನಮಗೆ ಯಾವ ಭಯವೂ ಇಲ್ಲದೆ ಆರಾಮಾಗಿರಬಹುದು. ಜೀವನದಲ್ಲಿ ಹಣ ಸಂಪಾದಿಸುವುದು ಅದರಿಂದ ಐಷಾರಾಮಿ ವಸ್ತುಗಳನ್ನು ಖರೀದಿಸಿ ನೋಡುವವರ ಮುಂದೆ ಶ್ರೀಮಂತರಾಗಿ ಬದುಕಿದ ತಕ್ಷಣ ಅವನು ಯಶಸ್ವಿ ವ್ಯಕ್ತಿ ಎಂದು ಒಪ್ಪಿಕೊಳ್ಳಲಾಗುವುದಿಲ್ಲ. ಆದರೆ ಬದುಕೆಂದರೆ ಹಣ, ಕಾರು, ಬಂಗಲೆ ಎಂದು ನಂಬಿರುವ ಹಲವರು ಹಣ ಸಂಪಾದನೆ ಮಾಡುವ ಒಂದೇ ಒಂದು ಉದ್ದೇಶದಿಂದ ಇಲ್ಲ ಸಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡು ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ಕೆಲವು ಸಮಸ್ಯೆಗಳಿಗೆ ನಮ್ಮಲ್ಲೇ ಪರಿಹಾರವಿದ್ದರೂ ಪ್ರತಿಷ್ಠೆಗಾಗಿ ಹೋರಾಡುತ್ತೇವೆ. ಈ ಪ್ರತಿಷ್ಠೆ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಬದಲಾಗಿ ಹೆಚ್ಚಿಸುತ್ತದೆ. ಎಲ್ಲಿ ಸಮಸ್ಯೆ ಆರಂಭವಾಗಿದೆ ಎಂಬುವುದನ್ನು ಹುಡುಕಿ ಆದಷ್ಟು ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಅದು ಬಿಟ್ಟು ಹಠಕ್ಕೆ ಬಿದ್ದು ಅನಗತ್ಯ ಹೋರಾಟ ಮಾಡುವುದರಲ್ಲಿ ಅರ್ಥವಿಲ್ಲ.

ನಾವು ಮಕ್ಕಳಿಗೆ ವಿದ್ಯೆ ನೀಡುತ್ತಿದ್ದೇವೆ. ಆ ನಂತರ ಉದ್ಯೋಗವೂ ಸಿಗುವಂತೆ ನೋಡಿಕೊಳ್ಳುತ್ತೇವೆ. ಇದರ ನಡುವೆ ಸಂಸ್ಕಾರಯುತ ಜೀವನ ನಡೆಸುವುದು ಹೇಗೆ? ಕಷ್ಟಗಳು ಬಂದಾಗ ಅದನ್ನು ಎದುರಿಸುವುದು, ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವುದು ಹೇಗೆ ಎಂಬುದನ್ನು ಹೇಳಿ ಕೊಡುವುದಿಲ್ಲ. ಅದರ ಪರಿಣಾಮಗಳಿಂದ ಮಕ್ಕಳು ಚಿಕ್ಕ, ಚಿಕ್ಕ ವಿಚಾರಕ್ಕೆ ಜೀವವನ್ನೇ ತ್ಯಜಿಸುವ ಆಲೋಚನೆ ಮಾಡುವಂತಾಗಿದೆ. ಇದನ್ನು ತಪ್ಪಿಸಬೇಕಾದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಕಲಿಸಬೇಕಾಗುತ್ತದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications