ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ರಾಜಕೀಯ ನಾಯಕರ ಬೆನ್ನೇರಿದ ಕೊರೊನಾವೈರಸ್

|
Google Oneindia Kannada News

ನವದೆಹಲಿ, ಏಪ್ರಿಲ್ 15: ಭಾರತದಲ್ಲಿ ಒಂದೇ ದಿನ 2,00,739 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1038 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 93,528 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಇದುವರೆಗೂ 1,73,123 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, 1,24,29,564 ಸೋಂಕಿತರು ಗುಣಮುಖರಾಗಿದ್ದಾರೆ. 14,71,877 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್? Explained: ಭಾರತದಲ್ಲಿ ಭಯ ಹುಟ್ಟಿಸುತ್ತಿರುವುದೇಕೆ ಕೊರೊನಾವೈರಸ್?

ಕಳೆದ ಮಾರ್ಚ್ ತಿಂಗಳಿನಲ್ಲಿ ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ನಡೆಸಲಾಗಿತ್ತು. ಈ ಅವಧಿಯಲ್ಲಿ ಪ್ರಚಾರ ನಡೆಸಿದ ಹಲವು ರಾಜಕೀಯ ನಾಯಕರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಗೊತ್ತಾಗಿದೆ. ದೇಶದ ಪ್ರಮುಖ ರಾಜಕೀಯ ಮುಖಂಡರಿಗೆ ಕೊವಿಡ್-19 ಸೋಂಕು ತಗುಲಿರುವುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

ಕಳೆದ ಏಪ್ರಿಲ್ 14ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಅವರು ಸ್ವಯಂಪ್ರೇರಿತರಾಗಿ ಐಸೋಲೇಟ್ ಆಗಿದ್ದಾರೆ. ಮಂಗಳವಾರ ಆದಿತ್ಯನಾಥಅ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕೆಲವರಿಗೂ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ರೋಗದ ಪ್ರಾಥಮಿಕ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ವೈದ್ಯಕೀಯ ತಪಾಸಣೆಗೆ ಒಳಗಾದಾಗ ಸೋಂಕು ತಗುಲಿರುವುದು ಗೊತ್ತಾಯಿತು. ವೈದ್ಯರ ಸಲಹೆಯಂತೆ ಐಸೋಲೇಟ್ ಆಗಿದ್ದೇನೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಸೋಂಕು

ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಸೋಂಕು

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. "ನನ್ನ ಕೊರೊನಾವೈರಸ್ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. ನಾನು ಸ್ವಯಂಪ್ರೇರಿತನಾಗಿ ಐಸೋಲೇಟ್ ಆಗಿದ್ದು, ನಿವಾಸದಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದ ಜನರು ಕೊರೊನಾವೈರಸ್ ಪರೀಕ್ಷೆ ಮಾಡಿಸಿಕೊಳ್ಳಬೇಕು" ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಖಿಲೇಶ್ ಯಾದವ್ ಅವರು ಇತ್ತೀಚಿಗೆ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದು, ಅಲ್ಲಿ ಕೆಲವು ಸ್ಥಳೀಯ ನಾಯಕರನ್ನು ಧಾರ್ಮಿಕ ಮುಖಂಡರನ್ನು ಭೇಟಡಿ ಮಾಡಿ ಬಂದಿದ್ದರು.

ಆಶುತೋಶ್ ಟಂಡನ್ ಅವರಿಗೆ ಕೊರೊನಾ

ಆಶುತೋಶ್ ಟಂಡನ್ ಅವರಿಗೆ ಕೊರೊನಾ

ಉತ್ತರ ಪ್ರದೇಶದ ಸಚಿವ ಆಶುತೋಶ್ ಟಂಡನ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ. "ರೋಗದ ಪ್ರಾಥಮಿಕ ಲಕ್ಷಣಗಳು ಕಾಣಿಸಿಕೊಂಡ ಬೆನ್ನಲ್ಲೇ ವೈದ್ಯಕೀಯ ತಪಾಸಣೆಗೆ ಒಳಗಾದೆ ಈ ವೇಳೆ ಸೋಂಕು ತಗುಲಿರುವುದು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ನಾನು ಮನೆಯಲ್ಲೇ ಐಸೋಲೇಟ್ ಆಗಿದ್ದೆನು. ಇತ್ತೀಚಿನ ದಿನಗಳಲ್ಲಿ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊವಿಡ್-19 ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು" ಎಂದು ಆಶುತೋಶ್ ಟಂಡನ್ ಮನವಿ ಮಾಡಿಕೊಂಡಿದ್ದಾರೆ.

ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಕೊವಿಡ್-19

ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಕೊವಿಡ್-19

ನವದೆಹಲಿಯ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಬುಧವಾರವಷ್ಟೇ ಅವರು ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದರು, "ನನ್ನ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ನನ್ನೊಂದಿಗೆ ಸಂಪರ್ಕದಲ್ಲಿ ಇದ್ದವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!

ಸಂಜೀವ್ ಬಾಲ್ಯಾನ್ ಅವರಿಗೆ ಕೊರೊನಾವೈರಸ್

ಸಂಜೀವ್ ಬಾಲ್ಯಾನ್ ಅವರಿಗೆ ಕೊರೊನಾವೈರಸ್

ಕೇಂದ್ರ ಸಚಿವ ಸಂಜೀವ್ ಬಾಲ್ಯಾನ್ ಅವರಿಗೆ ಭಾನುವಾರ ಕೊರೊನಾವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದೆ. "ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ವೇಳೆಯಲ್ಲಿ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದವು. ವೈದ್ಯಕೀಯ ಪರೀಕ್ಷೆಗೆ ಒಳಗಾದ ಸಂದರ್ಭದಲ್ಲಿ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ನಾನು ಸ್ವಯಂಪ್ರೇರಿತನಾಗಿ ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಿಪಿಐ ಮುಖಂಡ ಡಿ ರಾಜಾಗೆ ಕೊವಿಡ್-19

ಸಿಪಿಐ ಮುಖಂಡ ಡಿ ರಾಜಾಗೆ ಕೊವಿಡ್-19

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ಸಿಪಿಐ ಮುಖಂಡ ಡಿ ರಾಜಾ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇವರು ಪ್ರಚಾರದಲ್ಲಿ ಭಾಗವಹಿಸಿದ್ದರು.

ಕೇರಳ ಮುಖ್ಯಮಂತ್ರಿಗೆ ಕೊವಿಡ್-19 ಸೋಂಕು

ಕೇರಳ ಮುಖ್ಯಮಂತ್ರಿಗೆ ಕೊವಿಡ್-19 ಸೋಂಕು

ಕೇರಳ ವಿಧಾನಸಭಾ ಚುನಾವಣಾ ಮತದಾನ ನಡೆದು ಎರಡು ದಿನದಲ್ಲೇ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಣ್ಣೂರಿನ ನಿವಾಸದಲ್ಲಿ ಅವರು ಐಸೋಲೇಟ್ ಆಗಿದ್ದಾರೆ. ನನಗೆ ಕೊರೊನಾವೈರಸ್ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಕೊಚಿಕೂಡ್ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

ಉಮ್ಮನ್ ಚಾಂಡಿಗೆ ಕೊರೊನಾವೈರಸ್ ಸೋಂಕು

ಉಮ್ಮನ್ ಚಾಂಡಿಗೆ ಕೊರೊನಾವೈರಸ್ ಸೋಂಕು

ಕಳೆದ ಏಪ್ರಿಲ 9ರಂದು ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರದಲ್ಲಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

English summary
Have A Look At Some Politicians Who Have Tested Positive For Coronavirus In Second Wave. Take A Look.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X