ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ನಕ್ಷೆ ಬದಲು, ದೇಶದ ಕೇಂದ್ರಾಡಳಿತ ಪ್ರದೇಶಗಳೆಷ್ಟು?

|
Google Oneindia Kannada News

ನವದೆಹಲಿ, ಆಗಸ್ಟ್ 05: ಸಂವಿಧಾನದ 370ನೇ ಪರಿಚ್ಛೇದ ರದ್ದುಗೊಂಡಿದೆ. ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದಿಂದಾಗಿ ಭಾರತ ಭೂಪಟ ಬದಲಾಗಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ, ರಾಜ್ಯ ಆಡಳಿತ ಅಧಿಕಾರ ರದ್ದಾಗಿದೆ. ಹೀಗಾಗಿ, ಭಾರತದಲ್ಲಿರುವ ಒಟ್ಟು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಹೊಸ ಲೆಕ್ಕಾಚಾರ ಬದಲಾಗಿದೆ.

ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ಅನುಗುಣವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕಿಸಿ, ಲಡಾಕ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿದೆ.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

ಸಂವಿಧಾನದ 370ನೇ ಪರಿಚ್ಛೇದ ಜಾರಿ ಇದ್ದ ಕಾಶ್ಮೀರದಲ್ಲಿ ಪೌರತ್ವ, ನಿರ್ದಿಷ್ಟ ಆಸ್ತಿಯ ಮಾಲೀಕತ್ವ, ಮೂಲಭೂತ ಹಕ್ಕುಗಳ ಅನುಷ್ಠಾನ ಮುಂತಾದ ವಿಚಾರಗಳಲ್ಲಿ ವಿಶೇಷ ಕಾನೂನುಗಳು ಅನುಷ್ಠಾನಗೊಂಡಿತ್ತು. ಜಮ್ಮುಮತ್ತು ಕಾಶ್ಮೀರ ಹೊಸ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ವಿಧಾನಸಭೆ ಹೊಂದಲಿದೆ, ಲಡಾಕ್ ಹೊಸ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಯಾವುದೇ ವಿಧಾನಸಭೆ ಹೊಂದಿರುವುದಿಲ್ಲ. ಇದರ ಜೊತೆಗೆ ಅರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಶೇ10ರಷ್ಟು ಮೀಸಲಾತಿ ಒದಗಿಸುವ ವಿಧೇಯಕವನ್ನು ಅಮಿತ್ ಶಾ ಮಂಡಿಸಿ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದುಕೊಂಡಿದ್ದಾರೆ. ಇದಕ್ಕೆ ಸರಳ ಬಹುಮತ ಸಾಕಾಗಿದ್ದು, ರಾಷ್ಟ್ರಪತಿ ಅಂಕಿತ ಬಿದ್ದಿರುವುದರಿಂದ ಹೊಸ ಸೌಲಭ್ಯ ಜಾರಿಗೊಳ್ಳಲು ಯಾವುದೇ ಅಡ್ಡಿ ಆತಂಕವಿಲ್ಲ.

List of Union Territories with and without legislature

ಕೇಂದ್ರಾಡಳಿತ ಪ್ರದೇಶ ಎಂದರೇನು?:
ಕೇಂದ್ರಾಡಳಿತ ಪ್ರದೇಶ ಎಂಬುದು ಭಾರತ ಗಣರಾಜ್ಯದ ಅವಿಭಾಜ್ಯ ಅಂಗವಾಗಿದೆ. ಕೇಂದ್ರಾಡಳಿತ ಪ್ರದೇಶವು ಕೇಂದ್ರ ಸರ್ಕಾರದ ನೇರ ಆಡಳಿತಕ್ಕೆ ಒಳಪಡುತ್ತದೆ. ಭಾರತದ ಇತರೆ ರಾಜ್ಯಗಳು ಹೊಂದಿರುವಂತೆ ಇವುಗಳು ಪ್ರತ್ಯೇಕ ಸರ್ಕಾರಗಳನ್ನು ಹೊಂದಿರುವುದಿಲ್ಲ. ಆದರೆ ಭಾರತದ ಸಂಸತ್ತು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರಾಡಳಿತ ಪ್ರದೇಶಗಳಿಗೆ ಶಾಸನ ಸಭೆಯ ಸ್ಥಾನ ಕಲ್ಪಿಸಬಹುದು.

ಕಣಿವೆ ರಾಜ್ಯದಲ್ಲಿ 370 ಮತ್ತು 35ಎ ರದ್ದು : 10 ಪ್ರಮುಖ ಸಂಗತಿಗಳುಕಣಿವೆ ರಾಜ್ಯದಲ್ಲಿ 370 ಮತ್ತು 35ಎ ರದ್ದು : 10 ಪ್ರಮುಖ ಸಂಗತಿಗಳು

ಈ ಪೈಕಿ ದೆಹಲಿ ಹಾಗೂ ಪುದುಚೇರಿಯಲ್ಲಿ ಚುನಾಯಿತ ಸರ್ಕಾರ ಹೊಂದಲು ಅವಕಾಶವಿದೆ. ಈಗ ಜಮ್ಮು ಮತ್ತು ಕಾಶ್ಮೀರದಲ್ಲೂ ಚುನಾವಣೆ ನಡೆಸಿ, ಸರ್ಕಾರ ಹೊಂದಬಹುದು. ವಿಧಾನಸಭೆ ಹೊಂದಬಹುದು. ಆದರೆ, ಲಡಾಕ್ ನಲ್ಲಿ ಈ ಸೌಲಭ್ಯ ಇರುವುದಿಲ್ಲ.

ಭಾರತದ ಕೇಂದ್ರಾಡಳಿತ ಪ್ರದೇಶಗಳು:
* ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು
* ಚಂದಿಗಡ
* ದಾದ್ರ ಮತ್ತು ನಗರ್ ಹವೇಲಿ
* ದಮನ್ ಮತ್ತು ದಿಯು
* ಲಕ್ಷದ್ವೀಪ
* ಲಡಾಕ್

ವಿಧಾನಸಭೆ ಹೊಂದಬಹುದಾದ ಕೇಂದ್ರಾಡಳಿತ ಪ್ರದೇಶಗಳು
* ರಾಷ್ಟ್ರೀಯ ರಾಜಧಾನಿ ಪ್ರದೇಶ ದೆಹಲಿ
* ಪುದುಚೇರಿ
* ಜಮ್ಮು ಮತ್ತು ಕಾಶ್ಮೀರ

English summary
The Centre made an important announcement while scrapping Article 370. Here is the List of Union Territories with and without legislature.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X