ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ ಫಲಿತಾಂಶ : ಕಾಂಗ್ರೆಸ್‌ ಬಿಟ್ಟವರಿಗೆ ಸಿಹಿ, ಕಹಿ

|
Google Oneindia Kannada News

Recommended Video

Lok Sabha Elections Results 2019: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಬಿಟ್ಟವರಿಗೆ ಸಿಹಿ-ಕಹಿ ಫಲ ?

ಬೆಂಗಳೂರು, ಮೇ 27 : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಿದೆ. ಚುನಾವಣೆಗಾಗಿಯೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದವರಿಗೆ ಸಿಹಿ-ಕಹಿಯ ಫಲ ಸಿಕ್ಕಿದೆ.

ಡಾ.ಉಮೇಶ್ ಜಾಧವ್ ಮತ್ತು ಎ.ಮಂಜು ಅವರು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಹಾಸನ ಕ್ಷೇತ್ರದಿಂದ ಕಣಕ್ಕಿಳಿದ ಎ.ಮಂಜು ಸೋಲು ಅನುಭವಿಸಿದ್ದಾರೆ. ಗುಲ್ಬರ್ಗ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಡಾ.ಉಮೇಶ್ ಜಾಧವ್ ಗೆಲುವು ಸಾಧಿಸಿದ್ದಾರೆ.

ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!

ಎ.ಮಂಜು ಅವರು ಕಾಂಗ್ರೆಸ್‌-ಜೆಡಿಎಸ್ ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಆದರೆ, ಹಾಸನದ ಜನರು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಪ್ರಜ್ವಲ್ ರೇವಣ್ಣ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಿದರು.

ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರುಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು

ಡಾ.ಉಮೇಶ್ ಜಾಧವ್ ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ್ದಾರೆ. ಮತ್ತೊಂದು ಕಡೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುತ್ರ ಡಾ.ಅವಿನಾಶ್ ಜಾಧವ್ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.

ಲೋಕಸಭಾ ಚುನಾವಣೆ : ಕರ್ನಾಟಕದಿಂದ ಮೊದಲ ಬಾರಿ ಗೆದ್ದ 10 ಸಂಸದರುಲೋಕಸಭಾ ಚುನಾವಣೆ : ಕರ್ನಾಟಕದಿಂದ ಮೊದಲ ಬಾರಿ ಗೆದ್ದ 10 ಸಂಸದರು

ಕಾಂಗ್ರೆಸ್ ತೊರೆದ ಡಾ.ಉಮೇಶ್ ಜಾಧವ್

ಕಾಂಗ್ರೆಸ್ ತೊರೆದ ಡಾ.ಉಮೇಶ್ ಜಾಧವ್

2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಅವರು ಲೋಕಸಭಾ ಚುನಾವಣೆ ಕಣಕ್ಕಿಳಿಯುವ ಉದ್ದೇಶದಿಂದಲೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಗುಲ್ಬರ್ಗ ಕ್ಷೇತ್ರದಲ್ಲಿ ಅವರು 620192 ಮತಗಳನ್ನು ಪಡೆದು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರನ್ನು 95,452 ಮತಗಳ ಅಂತರದಿಂದ ಸೋಲಿಸಿದರು.

ಎಲ್ಲಾ ಕಾಂಗ್ರೆಸ್‌ನವರು ಸೇರಿದರು

ಎಲ್ಲಾ ಕಾಂಗ್ರೆಸ್‌ನವರು ಸೇರಿದರು

ಗುಲ್ಬರ್ಗ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮಾಲೀಕಯ್ಯ ಗುತ್ತೇದಾರ್, ಬಾಬೂರಾವ್ ಚಿಂಚನಸೂರು, ಮಾಲಕರಡ್ಡಿ, ಡಾ.ಉಮೇಶ್ ಜಾಧವ್ ಒಂದಾಗಿದ್ದರು. ಅಚ್ಚರಿ ಸಂಗತಿ ಎಂದರೆ ಇವರೆಲ್ಲರೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದವರು.

ಎ.ಮಂಜುಗೆ ಗೆಲುವು ಸಿಗಲಿಲ್ಲ

ಎ.ಮಂಜುಗೆ ಗೆಲುವು ಸಿಗಲಿಲ್ಲ

ಹಾನಸ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಕಾರಣ ಎ.ಮಂಜು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಚುನಾವಣಾ ಕಣಕ್ಕಿಳಿದರು. 535282 ಮತಗಳನ್ನು ಪಡೆದು 141324 ಮತಗಳ ಅಂತರದಿಂದ ಸೋಲು ಕಂಡರು.

ಮೊಮ್ಮಗನಿಂದ ಸೋತರು

ಮೊಮ್ಮಗನಿಂದ ಸೋತರು

2014ರ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಸೋತಿದ್ದ ಎ.ಮಂಜು ಅವರು, 2019ರ ಚುನಾವಣೆಯಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿದು ಸೋತರು.

English summary
2019 Lok sabha election result of Karnataka. Dr.Umesh Jadhav and A.Manju election result. Both leaders quit the Congress and Joined BJP to contest for lok sabha elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X